
ಶಿವಮೊಗ್ಗ (ಫೆ.9): ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದ ಖ್ಯಾತ ಭಾಷಣಕಾರ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಸಿಆರ್ಪಿಸಿ ಕಲಂ 157 ಅಡಿ ಎಫ್ಐಆರ್ ದಾಖಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ(SSLC exam time table) ಸಂಬಂಧಿಸಿದಂತೆ ಮಕ್ಕಳು ಧಾರ್ಮಿಕವಾಗಿ ಪರಿಣಾಮ ಬೀಳುವಂತೆ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ NSUI ಸದಸ್ಯರು ದೂರು ನೀಡಿದ್ದರು.
ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಸಮಯಾವಕಾಶ ನೀಡಲು ಬೆಳಗ್ಗಿನ ಪರೀಕ್ಷೆಗಳನ್ನು ಮಧ್ಯಾಹ್ನದ ನಂತರ ನಿಗದಿ ಮಾಡಲಾಗಿದೆ. ಪರೀಕ್ಷಾ ವೇಳಾಪಟ್ಟಿ ಹಂಚಿಕೊಂಡಿದ್ದ ಚಕ್ರವರ್ತಿ ಸೂಲಿಬೆಲೆ, ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗಿನ ಅವಧಿಯಲ್ಲಿ ನಡೆಯಲಿದೆ. ಶುಕ್ರವಾರ ಮಾತ್ರ ಏಕೆ ಮಧ್ಯಾಹ್ನದ ನಂತರ ಎಂದು ಪ್ರಶ್ನಿಸಿದ್ದರು. ಅಲ್ಲದೆ, ನಮಾಜ್‌ಗೆ ಸಮಯವೇ ಎಂದು ಪ್ರಶ್ನಿಸಿದ್ದರು.
ಪರೀಕ್ಷಾ ಮಂಡಳಿ ಏನು ಹೇಳಿದೆ?: ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಸ್ಪಷ್ಟನೆ ನೀಡಿದ ಪರೀಕ್ಷಾ ಮಂಡಳಿ, ಮಾರ್ಚ್ 1ರಂದು ದ್ವಿತೀಯ ಪಿಯು ಮುಖ್ಯ ಪರೀಕ್ಷೆ ಬೆಳಗ್ಗೆ ನಡೆಯುವ ಕಾರಣ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಮಾಡಲಾಗಿದೆ. ನಮಾಜ್‌ಗೆ ಅನುಕೂಲ ಮಾಡಿಕೊಡಲು ಮಧ್ಯಾಹ್ನ ಪರೀಕ್ಷೆ ನಡೆಸುತ್ತಿಲ್ಲ ಎಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಸ್ಪಷ್ಟನೆ ನೀಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ