ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಹಾರಾಷ್ಟ್ರದ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿರುದ್ಧ ಹಾಸನದಲ್ಲಿ ಜಿಲ್ಲೆಯ ಹರಸಿಕೆರೆ ತಾಲೂಕಿನ ಬಾಣಾವರದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಹಾಸನ (ಆ.23): ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಹಾರಾಷ್ಟ್ರದ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿರುದ್ಧ ಹಾಸನದಲ್ಲಿ ಜಿಲ್ಲೆಯ ಹರಸಿಕೆರೆ ತಾಲೂಕಿನ ಬಾಣಾವರದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಸಮಾಜದ ಸ್ವಾಸ್ಥ್ಯ ಕದಡುವ ಹೇಳಿಕೆ ನೀಡಿರುವ ಸ್ವಾಮೀಜಿ ವಿರುದ್ದ ಕ್ರಮಕ್ಕೆ ಆಗ್ರಹಿಸಿದರು. ಪ್ರತಿಭಟನೆ ವೇಳೆ ಸ್ವಾಮೀಜಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
undefined
Xನಲ್ಲಿ ರಾಹುಲ್ ಗಾಂಧಿ ವಿರುದ್ಧ 'ರೇ**' ಆರೋಪ! ಕಾಂಗ್ರೆಸ್‌ನಿಂದ ದೂರು ದಾಖಲು
ಏನಿದು ಘಟನೆ?
ಮಹಾರಾಷ್ಟ್ರದ ರಾಮಗಿರಿ ಮಹಾರಾಜರು ಇತ್ತೀಚೆಗೆ ನಾಸಿಕ್ ಜಿಲ್ಲೆಯ ಸಿನ್ನಾರ್ ತಾಲೂಕಿನ ಶಾ ಪಾಂಚಾಲೆ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಅವರ ಹೇಳಿಕೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಗುರಿಯಾಗಿದೆ. ಮುಂಬೈ ಮತ್ತು ನಾಸಿಕ್, ಛತ್ರಪತಿ ಸಂಭಾಜಿನಗರ, ಪುಣೆ ಮತ್ತು ಥಾಣೆ ಜಿಲ್ಲೆಗಳಲ್ಲದೆ, ಬುಲ್ಧಾನ ಜಿಲ್ಲೆಯ ಜಲಗಾಂವ್ ಜಮೋದ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿರುವ ಬಗ್ಗೆ ಪೊಲೀಸ್ ಮೂಲಗಳು ತಿಳಿಸಿವೆ.
ಆದರೆ ಮಹಾರಾಜ್ ಅವರು ತಮ್ಮ ಹೇಳಿಕೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೆ ಸಂಬಂಧಿಸಿದೆ ಎಂದು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.