ತುಳುನಾಡು ದೈವಗಳ ಹರಕೆಕೋಲ ನೆರವೇರಿಸಿದ ಯುಟಿ ಖಾದರ್ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡ ಆಕ್ರೋಶ!

By Ravi Janekal  |  First Published Feb 5, 2024, 2:30 PM IST

ದೈವಗಳ ಹರಕೆಕೋಲ ನೆರವೇರಿಸಿದ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್‌ಗೆ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೈವಗಳ ಪ್ರಸಾದ ತಲೆಗೆ ಮೆತ್ತಿಕೊಂಡು ನರಕಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮಂಗಳೂರು (ಫೆ.5): ದೈವಗಳ ಹರಕೆಕೋಲ ನೆರವೇರಿಸಿದ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್‌ಗೆ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದಿದ್ದ ಹರಕೆ ಕೋಲಾದಲ್ಲಿ ಯುಟಿ ಖಾದರ್ ಭಾಗಿಯಾಗಿದ್ದರು. ಈ ವೇಳೆ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದು ಹರಕೆ ಕೋಲ ನೆರವೇರಿಸಿದ್ದರು. ಇದು ಮುಸ್ಲಿಂ ಧಾರ್ಮಿಕ ಮುಖಂಡನ ಕೆಂಗಣ್ಣಿಗೆ ಗುರಿಯಾಗಿದೆ. ಒರ್ವ ಮುಸ್ಲಿಂನಾಗಿ ದೈವಗಳ ಕೋಲಾ ನೇರವೇರಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪೋಸ್ಟ್ ಮಾಡಿರುವ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ. ಇದಕ್ಕೆ ಪರ-ವಿರೋಧ ಅಭಿಪ್ರಾಯಗಳು ಬಂದಿವೆ.

Tap to resize

Latest Videos

ಪೋಸ್ಟ್‌ನಲ್ಲಿ ಏನಿದೆ?

ಕೊರಗಜ್ಜನ ಭಕ್ತ ಯು. ಟಿ. ಕಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಂದಾಳುವಾಗಿ ಕಾಣುವುದು, ಉಲಮಾ, ಸಾತ್ವಿಕರು ತುಂಬಿದ ಧಾರ್ಮಿಕ  ವೇದಿಕೆಗೆ ಮುಸ್ಲಿಮ್ ನಾಯಕನಾಗಿ  ಹತ್ತಿಸುವುದು ತರವಲ್ಲ.‌ ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾದೀತು..
ಕಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೋ ಆರಾಧಿಸಲಿ, ಪ್ರಸಾದ ಪಡೆದು  ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ ಅದು ಆತನ ವೈಯಕ್ತಿಕ ಸ್ವಾತಂತ್ರ್ಯ. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಾಂವಿಧಾನಿಕ ಸ್ವಾತಂತ್ರ್ಯ. ಅದನ್ನು ತಡೆಯುವ ಹಕ್ಕು ನಮಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು ಮಾತ್ರ ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಮ್ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಬರೆದುಕೊಂಡಿರುವ ಸಾಲೆತ್ತೂರು ಫೈಝಿ.

 

click me!