ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ, ಮುಸ್ಲಿಂ ವಿದ್ಯಾರ್ಥಿಗೆ ಥಳಿತ, ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್

By Santosh NaikFirst Published Aug 31, 2022, 12:35 PM IST
Highlights

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಒಟ್ಟು ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರುವ ಮಾಹಿತಿ ನೀಡಿದಾರೆ.

ಮಂಗಳೂರು (ಆ.31): ಸುಳ್ಯದಲ್ಲಿ ಹಿಂದೂ ಸಮುದಾಯದ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ ಮುಸ್ಲಿಂ ಹುಡುಗನನ್ನು ಕಾಲೇಜು ಸಹಪಾಠಿಗಳು ಥಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಹಿಂದೂ ಸಮುದಾಯದ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ ಮುಸ್ಲಿಂ ವಿದ್ಯಾರ್ಥಿ ಮೊಹಮ್ಮದ್ ಸಾನಿಫ್‌ಗೆ ಕಾಲೇಜು ಸಹಪಾಠಿಗಳು ಥಳಿಸಿದ್ದಾರೆ. ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಮತ್ತು ಇತರರ ವಿರುದ್ಧ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ರಿಷಿಕೇಶ್ ಸೋನಾವಾನೆ ತಿಳಿಸಿದ್ದಾರೆ. ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದರು. ಸುಳ್ಯದ ಕಾಲೇಜು ಗ್ರೌಂಡ್ ನಲ್ಲಿ ಮಂಗಳವಾರ ಘಟನೆ ನಡೆದಿತ್ತು. ಪ್ರಕರಣದ ಕುರಿತಂತೆ ಎಲ್ಲರ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ. ಥಳಿತಕ್ಕೊಳಗಾದ ಯುವಕ ನೀಡಿದ ದೂರಿನ ಆಧಾರದ ಮೇಲೆ ದೂರು ದಾಖಲು ಮಾಡಲಾಗಿದೆ.

ಹುಡುಗನ ಬೆನ್ನ ಮೇಲೆ ಬಾಸುಂಡೆ ಬರುವ ಹಾಗೆ ಥಳಿತ ಮಾಡಲಾಗಿದೆ. ಹಿಂದೂ ಹುಡುಗಿ ಹಾಗೂ ಮುಸ್ಲಿಂ ಹುಡುಗ ಪ್ರೀತಿ ಮಾಡುತ್ತಿದ್ದ ಕಾರಣಕ್ಕೆ ಥಳಿಸಿದ್ದಾರೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ.ಹಲ್ಲೆಗೊಳಗಾದ ವಿದ್ಯಾರ್ಥಿ ಮೊಹಮ್ಮದ್ ಸನಿಫ್ ಪೊಲೀಸ್‌ ಠಾಣೆಗೆ ತೆರಳಿದ್ದು, ಹಿಂದೂ ಸಮುದಾಯಕ್ಕೆ ಸೇರಿದ ಹುಡುಗಿಯೊಂದಿಗೆ ಮಾತನಾಡಿದ್ದಕ್ಕಾಗಿ ಥಳಿಸಿದ ತನ್ನ ಸಹಪಾಠಿಗಳ ವಿರುದ್ಧ ಮಂಗಳವಾರ ದೂರು ದಾಖಲಿಸಿದ್ದಾರೆ.

Karnataka | A Muslim student Mohd Sanif beaten up by college mates for befriending a girl of Hindu community in Sullia, Dakshina Kannada dist. Case registered against accused Deekshith, Dhanush, Prajwal, Thanuj, Akshay, Mokshith, Goutham & others under IPC: Rishikesh Sonawane, SP

— ANI (@ANI)

ಕರಾವಳಿ ಕರ್ನಾಟಕ ಪ್ರದೇಶದಲ್ಲಿ (coastal Karnataka region ) ಇತ್ತೀಚಿನ ದಿನಗಳಲ್ಲಿ ಹಲವಾರು ಪ್ರಕರಣಗಳು ಕಂಡುಬಂದಿವೆ. ಈ ವರ್ಷದ ಎಪ್ರಿಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿರಿಬಾಗಿಲು ಗ್ರಾಮದಲ್ಲಿ (Siribagilu village in Dakshina Kannada district)  ಹಿಂದೂ ಮಹಿಳೆಯ (Hindu Women) ಜೊತೆ ಸವಾರಿ ಮಾಡಿದ್ದಕ್ಕೆ ಆಟೋ ರಿಕ್ಷಾ (auto rickshaw) ಚಲಾಯಿಸುತ್ತಿದ್ದ ಮುಸ್ಲಿಂ ಯುವಕನ ಮೇಲೆ ಬಲಪಂಥೀಯ ಗುಂಪು ಹಲ್ಲೆ ನಡೆಸಿತ್ತು. ಈ ವರ್ಷದ ಜುಲೈನಲ್ಲಿ ಮತ್ತೊಂದು ಬಲಪಂಥೀಯ ಗುಂಪು ಮಂಗಳೂರಿನ ಪಬ್‌ಗೆ ನುಗ್ಗಿ ವಿದ್ಯಾರ್ಥಿನಿಯರು ತಡರಾತ್ರಿ ಪಾರ್ಟಿ ಮಾಡುವುದನ್ನು ಆಕ್ಷೇಪಿಸಿತ್ತು. ವಿದ್ಯಾರ್ಥಿಗಳು ಪಬ್ ತೊರೆಯುವಂತೆ ಒತ್ತಾಯಿಸಲಾಗಿತ್ತು.

Shobha Karandlaje ಲವ್‌ ಜಿಹಾದ್‌ ನಿಷೇಧ ಕಾನೂನು ಬೇಕು, ಶೋಭಾ ಆಗ್ರಹ!

ರಾಜ್ಯದಲ್ಲಿ ಹಿಜಾಬ್ ಸಮಸ್ಯೆ ಮತ್ತು ಹುಬ್ಬಳ್ಳಿ-ಧಾರವಾಡ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆ ಸೇರಿದಂತೆ ಎರಡು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯದ ಹಲವಾರು ಘಟನೆಗಳು ರಾಜ್ಯದಲ್ಲಿ ವರದಿಯಾಗಿರುವ ನಡುವೆ ಈ ಪ್ರಕರಣ ನಡೆದಿರುವುದು ಸುದ್ದಿಯಾಗಿದೆ. ಹುಬ್ಬಳ್ಳಿ-ಧಾರವಾಡ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿದ್ದ ಪಾಲಿಕೆ ಆಯುಕ್ತರ ಆದೇಶವನ್ನು ಅಂಜುಮನ್-ಎ-ಇಸ್ಲಾಂ ಸಂಸ್ಥೆ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಪ್ರಶ್ನಾರ್ಹ ಆಸ್ತಿಯನ್ನು 1991 ರ ಪೂಜಾ ಸ್ಥಳಗಳ ಕಾಯ್ದೆಯ ಅಡಿಯಲ್ಲಿ ರಕ್ಷಿಸಲಾಗಿದೆ ಎಂದು ಅಂಜುಮನ್-ಎ-ಇಸ್ಲಾಂ ಹೇಳಿಕೊಂಡಿದೆ, ಅದು ಯಾವುದೇ ಧಾರ್ಮಿಕ ಪೂಜಾ ಸ್ಥಳವನ್ನು ಪರಿವರ್ತಿಸಲು ಸಾಧ್ಯವಿಲ್ಲ ಎಂದು ಹೇಳುತ್ತದೆ.

2 ವರ್ಷಗಳಿಂದ ಶಾರುಖ್‌ನ ಭಯದಲ್ಲೇ ಬದುಕಿದ್ದಳು ಅಂಕಿತಾ, ಶಿಕ್ಷೆಯ ಭಯವಿಲ್ಲದೆ ನಗುತ್ತಲೇ ಬಂದ ಆರೋಪಿ!    

ಆದರೆ ಕರ್ನಾಟಕ ಹೈಕೋರ್ಟ್ ಪ್ರಶ್ನಿಸಿರುವ ಆಸ್ತಿಯ ಪ್ರಕರಣವು ಧಾರ್ಮಿಕ ಪೂಜಾ ಸ್ಥಳವಲ್ಲ ಎಂದು ಹೇಳಿದೆ ಮತ್ತು ಪುರಸಭೆಯ ಆಯುಕ್ತರ ಆದೇಶವನ್ನು ಎತ್ತಿಹಿಡಿದ ನಂತರ ಸ್ಥಳದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಬುಧವಾರ ಬೆಳಗ್ಗೆ ಪೂಜಾ ಕಾರ್ಯವನ್ನು ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಈದ್ಗಾ ಮೈದಾನದ ಆಸ್ತಿ ಧಾರವಾಡ ನಗರಸಭೆಗೆ ಸೇರಿದ್ದು, ಅಂಜುಮನ್-ಎ-ಇಸ್ಲಾಂ ಗುತ್ತಿಗೆದಾರ ಮಾತ್ರ ಎಂದು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅಭಿಪ್ರಾಯಪಟ್ಟಿದ್ದರು.

click me!