ಚಾರ್ಮಾಡಿ ಘಾಟ್‌ನಲ್ಲಿ KSRTC ಮುಖಾಮುಖಿ ಡಿಕ್ಕಿ, ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ರಕ್ಷಿಸಿದ ಮುಸ್ಲಿಂ ಯುವಕ

By Gowthami K  |  First Published Jul 7, 2023, 10:41 PM IST

ಚಾರ್ಮಾಡಿ ಘಾಟ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಚಾಲಕರಿಗೆ ಗಾಯಗಳಾಗಿವೆ. ಇದೇ ವೇಳೆ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ನರಳಿದರು. ಆಗ ಸಮಾಜ ಸುಧಾರಕ ಮೊಹಮ್ಮದ್ ಆರೀಪ್  ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.


ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್   

ಚಿಕ್ಕಮಗಳೂರು (ಜು.7): ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಸಮೀಪದ ಕೂಗಳತೆಯ ದೂರದಲ್ಲಿ ಎರಡು ಕೆಎಸ್ ಆರ್ ಟಿ ಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡೂ ಬಸ್ ನ ಚಾಲಕರ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಅಪಘಾತಕ್ಕೆ ದಟ್ಟವಾದ ಮಂಜು ರಸ್ತೆ ಕಾಮಗಾರಿಯಲ್ಲಿ ವಿಳಂಬ ಕಾರಣವೆಂದು ಹೇಳಲಾಗುತ್ತಿದೆ. ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಸಾಗುತ್ತಿದ್ದ ಬಸ್, ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್ ಗಳು ಇಕ್ಕಟ್ಟಾದ ರಸ್ತೆಯಲ್ಲಿ  ಸಂಜೆ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಗಾಯಗೊಂಡ ಚಾಲಕರಿಬ್ಬರನ್ನು ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿದೆ.ಹಲವು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Tap to resize

Latest Videos

undefined

ಈ ನಡುವೆ ಅಪಘಾತದಿಂಗಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಾಟಿ ರಸ್ತೆಯಲ್ಲಿ ಖಾಸಗಿ ವಾಹನದಲ್ಲಿ  ಧರ್ಮಸ್ಥಳದಿಂದ ಬೆಂಗಳೂರಿಗೆ ಸಾಗುತ್ತಿದ್ದ ಗರ್ಭಿಣಿ ಮಹಿಳೆ ಚೈತ್ರಾ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು.  ತಕ್ಷಣ  ಸ್ಥಳದಲ್ಲಿದ್ದ  ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಪ್   ಅವರನ್ನು ಅವರ ಅಂಬುಲೆನ್ಸ್ ನಲ್ಲಿ ವಾಹನ ದಟ್ಟಣೆಯಲ್ಲೂ ಸೈರನ್ ಹಾಕಿ ಮೂಡಿಗೆರೆ ಆಸ್ಪತ್ರೆಗೆ ಕರೆತಂದು ದಾಖಲು ಮಾಡಿದರು. ಇದರಿಂದ ಗರ್ಭಿಣಿ ಮಹಿಳೆಯನ್ನು ತುರ್ತು ಸಮಯದಲ್ಲಿ ಪ್ರಾಣ ಉಳಿಸಿದಂತಾಯಿತು ಎಂದು ಕುಟುಂಬದವರು ಆರೀಫ್ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಆಸ್ಪತ್ರೆಗೆ  ದಾಖಲಾಗಿರುವ ಮಹಿಳೆ ಚೈತ್ರಾ ಸದ್ಯ ಆರೋಗ್ಯವಾಗಿದ್ದು ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

South Western Railway: ಬೆಂಗಳೂರು-ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಶಾಶ್ವತ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ : 
ಬಸ್ ಗಳ ನಡುವಿನ ಡಿಕ್ಕಿಯಿಂದ ಕೊಟ್ಟಿಗೆ ಹಾರದವರೆಗೂ  ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಲವು ಪ್ರಯಾಣಿಕರು 10 ಕಿ.ಮೀ ನಡೆದು ಕೊಟ್ಟಿಗೆಹಾರ ಸೇರಿದರು. ಸ್ಥಳಕ್ಕೆ ಬಣಕಲ್ ಪಿಎಸೈ ಸ್ಪೆಕ್ಟರ್ ಜಂಬೂರಾಜ್ ಮಹಾಜನ್, ಹೈವೇ ಪ್ಯಾಟ್ರೋಲ್ ಪಿಎಸೈ ಹೇಮಾ, ಎಎಸೈ ಟಿ.ಕೆ.ಶಶಿ, ಪೊಲೀಸ್ ಸಿಬ್ಬಂದಿಗಳು ಹಾಗೂ ಸಮಾಜ ಸೇವಕ ಮೊಹಮ್ಮದ್ ಆರೀಫ್ ಹಾಗೂ ಸ್ಥಳೀಯರು ಭೇಟಿ ನೀಡಿ, ರಸ್ತೆಯಿಂದ ಬಸ್ ಗಳನ್ನು ತೆರವುಗೊಳಿಸಲು ಸಹಕರಿಸಿದರು. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  

ಧರೆಗೆ ಉರುಳಿದ ಹಾವೇರಿಯ ಐತಿಹಾಸಿಕ ದೊಡ್ಡ ಹುಣಸೆ ಮರ!

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆ ಕಾಮಗಾರಿ ಬೇಗನೇ ಮುಗಿಸಲು ಒತ್ತಾಯ  
ಚಾರ್ಮಾಡಿ ಘಾಟಿಯ ಅಪಘಾತ ಸ್ಥಳದಲ್ಲಿ 2019 ರಲ್ಲಿ ಭೂಕುಸಿತದಿಂದ ರಸ್ತೆ ಬದಿ ಕುಸಿದಿತ್ತು. ಅಲ್ಲಿ 4 ವರ್ಷವಾದರೂ ಕಾಮಗಾರಿ ಪೂರ್ಣಗೊಳ್ಳದೇ ರಸ್ತೆ ಇಕ್ಕಟ್ಟಾಗಿದೆ. ರಸ್ತೆಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಕಾಮಗಾರಿ ಸ್ಥಳ ಕಾಣದೆ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ತಡೆಗೋಡೆ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

click me!