'ಸಿನಿಮಾ ನಟರು ಯಾವ ಪಕ್ಷಕ್ಕೂ ಸೇರಿದವರಲ್ಲ..'; ಡಿಕೆ ಶಿವಕುಮಾರ ಅವರ ಹೇಳಿಕೆಗೆ ಸಂಸದ ಯದುವೀರ್ ಒಡೆಯರ್ ಖಂಡನೆ

Published : Mar 04, 2025, 07:07 AM ISTUpdated : Mar 04, 2025, 07:42 AM IST
'ಸಿನಿಮಾ ನಟರು ಯಾವ ಪಕ್ಷಕ್ಕೂ ಸೇರಿದವರಲ್ಲ..'; ಡಿಕೆ ಶಿವಕುಮಾರ ಅವರ ಹೇಳಿಕೆಗೆ ಸಂಸದ ಯದುವೀರ್ ಒಡೆಯರ್ ಖಂಡನೆ

ಸಾರಾಂಶ

ನಟರು ಹೋರಾಟದಲ್ಲಿ ಭಾಗವಹಿಸಬೇಕೆಂಬುದು ಅವರ ವೈಯಕ್ತಿಕ ಆಯ್ಕೆ. ಡಿಕೆಶಿ ಹೇಳಿಕೆಯನ್ನು ಬಿಜೆಪಿ ಸಂಸದ ಯದುವೀರ್ ಒಡೆಯರ್ ಖಂಡಿಸಿದ್ದಾರೆ. ಅಧಿಕಾರದಲ್ಲಿರುವವರು ಸರ್ವಾಧಿಕಾರಿಯಂತೆ ಘೋಷಣೆ ಮಾಡುವುದನ್ನು ಕಡಿಮೆ ಮಾಡಬೇಕು ಎಂದು ಅವರು ಹೇಳಿದರು.

ಹಾಸನ (ಮಾ.4): ಸಿನಿಮಾ ನಟರು ಖಾಸಗಿ ವ್ಯಕ್ತಿಗಳಾಗಿದ್ದು, ಹೋರಾಟದಲ್ಲಿ ಭಾಗವಹಿಸಬೇಕೊ, ಬೇಡವೋ ಎಂಬ ತೀರ್ಮಾನವನ್ನು ಅವರೇ ಮಾಡಬೇಕು, ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಪ್ರಶ್ನೆ ಮಾಡುವುದು ಸೂಕ್ತವಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಬಿಜೆಪಿ ಸಂಸದ ಯದುವೀರ್ ಒಡೆಯರ್ ಖಂಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಲನಚಿತ್ರ ನಟರು, ಕಲಾವಿದರು ಖಾಸಗಿ ವ್ಯಕ್ತಿಗಳಾಗಿರುತ್ತಾರೆ. ಹೋರಾಟದಲ್ಲಿ ಪಾಲ್ಗೊಳ್ಳಬೇಕೋ ಬೇಡವೋ ಎಂಬುದನ್ನು ಅವರೇ ತೀರ್ಮಾನ ಮಾಡಬೇಕಾಗುತ್ತದೆ. ಹೋರಾಟದಲ್ಲಿ ಭಾಗವಹಿಸುವುದು ಅವರ ಆಯ್ಕೆ. ಪಕ್ಷದಿಂದ ಆಗಿದ್ದರೆ ಅವರ ಪಕ್ಷದವರೆಲ್ಲರೂ ಸೇರಿ ಹೋರಾಟ ಮಾಡ್ತಾರೆ. ಚಲನಚಿತ್ರದವರು ಯಾವುದೇ ಪಕ್ಷಕ್ಕೆ ಸೇರಿರಲ್ಲ. ಅವರನ್ನು ಭಾಗವಹಿಸಿಲ್ಲ ಎಂದು ಪ್ರಶ್ನೆ ಮಾಡುವುದು ಸೂಕ್ತವಲ್ಲ. ಅಧಿಕಾರದಲ್ಲಿರುವವರು ಸರ್ವಾಧಿಕಾರಿಯಂತೆ ಘೋಷಣೆ ಮಾಡುವುದನ್ನು ಕಡಿಮೆ ಮಾಡಬೇಕು. ಅದು ಅವರ ಅಹಂಕಾರ ತೋರಿಸುತ್ತದೆ ಎಂದರು.

ಇದನ್ನೂ ಓದಿ:  'ಸಾಹೇಬ್ರು ಹೇಳಿದ್ರಲ್ಲಿ ತಪ್ಪೇನಿಲ್ಲ' ಕಲಾವಿದರಿಗೆ ಡಿಕೆ ಶಿವಕುಮಾರ ವಾರ್ನಿಂಗ್ ಸಮರ್ಥಿಸಿಕೊಂಡ ನಟಿ ರಮ್ಯಾ!

ಮುಖ್ಯಮಂತ್ರಿ ಯಾರಾದ್ರೂ ಆಗಲಿ ಒಳ್ಳೆಯ ಆಡಳಿತ ಕೊಡಲಿ:

ಸಿಎಂ ಬದಲಾವಣೆ ವಿಚಾರವಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಆಡಳಿತದಲ್ಲಿ ಇರುವುದು ಕಾಂಗ್ರೆಸ್. ನೀವು ಅವರನ್ನು ಪ್ರಶ್ನೆ ಮಾಡಬೇಕು. ಅವರ ಪಕ್ಷದ ಒಳಗಡೆ ಏನು ನಡೆಯುತ್ತಿದೆಯೋ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ವಿರೋಧ ಪಕ್ಷವಾಗಿ ಅದರಲ್ಲಿ ನಮ್ಮ ಕೆಲಸವಿಲ್ಲ. ಮುಖ್ಯಮಂತ್ರಿ ಕುರ್ಚಿಗಾಗಿ ವಾದ-ಸಂವಾದ ಅವರು ನಡೆಸುತ್ತಿರುವುದು. ಇಂತಹ ಬೆಳವಣಿಗೆಗಳು ಮೇಲ್ಮಟ್ಟದಲ್ಲಿ ನಡೆಯುತ್ತಿವೆ. ಯಾರೇ ಮುಖ್ಯಂತ್ರಿ ಆದರೂ ಒಳ್ಳೆಯ ಆಡಳಿತ ಕೊಡಬೇಕು ಎಂದು ಹೇಳಿದರು.

ಲೋಕಸಭಾ ಕ್ಷೇತ್ರಗಳ ಮರುವಿಂಗಡನೆ ವಿಚಾರವಾಗಿ ಮಾತನಾಡಿ, ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರಗಳು ಕಡಿಮೆ ಆಗಲ್ಲ ಅಂತ ಗೃಹ ಸಚಿವರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಉತ್ತರಿಸಿದರು.

ಇದನ್ನೂ ಓದಿ:  ಕನ್ನಡಚಿತ್ರರಂಗ, ಕಲಾವಿದರು ಡಿಕೆಶಿ ಜೀತದಾಳ? ಪಕ್ಷದ ಬಾವುಟ ಹಿಡಿದು ಮೇಕೆದಾಟು ಪಾದಯಾತ್ರೆ ಮಾಡಿದ್ರೆ ಯಾಕೆ ಬರಬೇಕು?

ಸುದ್ದಿಗೋಷ್ಠಿಯಲ್ಲಿ ಆಲೂರು- ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು, ಚಾಮರಾಜನಗರ ಮಾಜಿ ಶಾಸಕ ಬಾಲರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಪ್ರಶಾಂತ್ ಕುಮಾರ್, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಬೆಳ್ಳಿ ಗಂಗಾಧರ್, ವಕೀಲ ಅರುಣ್ ಕುಮಾರ್ ಇತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌