
ಮೈಸೂರು: ಅಂಬೇಡ್ಕರ್ ನಾಮಫಲಕ (Ambedkar Nameplate) ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದ್ದು, ರಕ್ಷಣೆಗೆ ಧಾವಿಸಿದ ಪೊಲೀಸರ ಮೇಲೂ ಹಲ್ಲೆಯಾಗಿರುವ ಘಟನೆ ಮೈಸೂರಿನಲ್ಲಿ ಸೋಮವಾರ ವರದಿಯಾಗಿದೆ.
ಮೈಸೂರಿನ ನಂಜನಗೂಡು (Nanjangud) ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಬೇಡ್ಕರ್ ನಾಮಫಲಕ (Ambedkar Nameplate) ವಿಚಾರದಲ್ಲಿ ನಡೆದ ಗಲಾಟೆ ನೋಡ ನೋಡುತ್ತಲೇ ಕೋಮು ಘರ್ಷಣೆಯಾಗಿ ಮಾರ್ಪಟ್ಟಿದೆ. ದುಷ್ಕರ್ಮಿಗಳು ಹಲ್ಲರೆ ಗ್ರಾಮದ ಮನೆಗಳಿಗೆ ಕಲ್ಲು ತೂರಾಟ (Stone Pelting) ಮಾಡಲಾಗಿದ್ದು, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನೂ ಕೂಡ ಜಖಂ ಮಾಡಲಾಗಿದೆ. ಘಟನೆಯಿಂದ ಇಡೀ ಗ್ರಾಮವೇ ಉದ್ವಿಗ್ನಗೊಂಡಿದ್ದು, ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆದಿದೆ.
ಹನುಮಧ್ವಜ ಸಂಘರ್ಷ ತಾರಕಕ್ಕೆ, ಮೈಸೂರು, ಮಂಡ್ಯ ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದ ಪೊಲೀಸರ ಮೇಲೆಯೂ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿ ಹಲ್ಲೆ ನಡೆಸಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು (Nanjangud Rural Police), ಎಸ್ಪಿ ಸೀಮಾ ಲಾಟ್ಕರ್ (SP Seema Latkar ) ದೌಡಾಯಿಸಿದ್ದಾರೆ. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಗ್ರಾಮವು ಬೂದಿ ಮುಚ್ಚಿದ ಕೆಂಡದಂತಿದೆ. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ