ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಲೋಪದೋಷಗಳನ್ನು ಲೋಕಸಭಾ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವುದಾಗಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸ್ಪ್ರೆಸ್ ವೇ ಕುರಿತು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೂ ತಂದಿದ್ದೆ. ಪರಿಶೀಲನೆಗಾಗಿ ಒಂದು ತಂಡ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವುದೇ ತಂಡ ಬಂದಿಲ್ಲ ಎಂದರು.
ರಾಮನಗರ (ಜು.14): ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಲೋಪದೋಷಗಳನ್ನು ಲೋಕಸಭಾ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವುದಾಗಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸ್ಪ್ರೇಸ್(Mysuru bengaluru expressway)…ಪ್ರೆಸ್ ವೇ ಕುರಿತು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೂ ತಂದಿದ್ದೆ. ಪರಿಶೀಲನೆಗಾಗಿ ಒಂದು ತಂಡ ಕಳಿಸುವುದಾಗಿ ಹೇಳಿದ್ದರು. ಆದರೆ, ಯಾವುದೇ ತಂಡ ಬಂದಿಲ್ಲ ಎಂದರು.
KarnatakaBudget2023: ರಾಮನಗರ ಜಿಲ್ಲೆಯ ಜನರ ತುಟಿಗೆ ತುಪ್ಪ, ಕೊನೆಗೂ ಗೆದ್ದ ಡಿಕೆ ಸಹೋದರರು..!
ಪೊಲೀಸರು ಮಾಡಬೇಕಾದ ಕೆಲಸ ಬಿಟ್ಟು ಬೇರೆಯದ್ದನ್ನು ಮಾಡುತ್ತಿದ್ದಾರೆ. ಗುಣಮಟ್ಟದ ರಸ್ತೆಯನ್ನು ಮೊದಲು ನಿರ್ಮಿಸಬೇಕು. ಅದನ್ನು ಬಿಟ್ಟು ದಂಡ ಹಾಕುತ್ತಿದ್ದಾರೆ. ಹೆದ್ದಾರಿ ಪೂರ್ಣಗೊಳಿಸದೆ ಟೋಲ… ಸಂಗ್ರಹಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ದೇಶದಲ್ಲಿ ಎಷ್ಟೋ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳಿವೆ. ಎಲ್ಲೂ ಇಷ್ಟುಅಪಘಾತಗಳು ಸಂಭವಿಸಿದ ಉದಾಹರಣೆಗಳಿಲ್ಲ. ಇದನ್ನು ಯಾರೂ ಸಮರ್ಥನೆ ಮಾಡಬಾರದು. ಸಮರ್ಥಿಸಿಕೊಂಡವರು ಬಹುಶಃ ಜನರ ಸಾವನ್ನು ಬಯಸುತ್ತಾರೆ ಅನ್ನಿಸುತ್ತದೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿಗೆ ಬೇರೆ ಕೆಲಸವಿಲ್ಲ :
ಬಿಜೆಪಿಯವರಿಗೆ ರಾಜಕೀಯ ಮಾಡಲು ಬೇರೆ ವಿಷಯಗಳಿಲ್ಲ. ಅದಕ್ಕಾಗಿಯೇ, ಜೈನ ಮುನಿ ಹಾಗೂ ವೇಣುಗೋಪಾಲ… ಕೊಲೆ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎನ್ನುತ್ತಿದ್ದಾರೆ. ಪ್ರಕರಣಗಳ ವಿಷಯದಲ್ಲಿ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಬಿಜೆಪಿ ಅವಧಿಯ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈ ರೀತಿಯ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲರಿಗೂ ರಕ್ಷಣೆ ಇದೆ. ಕಾನೂನು ಸುವ್ಯವಸ್ಥೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ವಾಸ್ತವ್ಯವಿರಿ: ಡಿಸಿಎಂ ಡಿಕೆ ಶಿವಕುಮಾರ ಸೂಚನೆ
ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಪೈಕಿ ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬುದರ ಕುರಿತು ಇನ್ನೂ ತೀರ್ಮಾನಿಸಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸುರೇಶ್ ಉತ್ತರಿಸಿದರು.