
ಬೆಂಗಳೂರು (ಆ.30): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜವಾಬ್ದಾರಿ ಮರೆತು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿಯೂ ಆಗಿರುವ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸೂಕ್ಷ್ಮತೆ ಮತ್ತು ಭಾವನೆಗಳನ್ನು ಅರ್ಥಮಾಡಿಕೊಂಡು ಶಿವಕುಮಾರ್ ಮಾತನಾಡಬೇಕು. ಈಗಾಗಲೇ ಈ ವಿಚಾರದಲ್ಲಿ ಪ್ರಮೋದಾದೇವಿ, ಯದುವೀರ್, ಪ್ರತಾಪ್ ಸಿಂಹ ಮಾತಾಡಿದ್ದಾರೆ. ದಸರಾ ಸಾಂಸ್ಕೃತಿಕ ಹಬ್ಬವೂ ಹೌದು, ಧಾರ್ಮಿಕ ಹಬ್ಬವೂ ಹೌದು ಎಂದರು.
ಇದನ್ನೂ ಓದಿ: ಕನ್ನಡಾಂಬೆ ಕುರಿತ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಲಿ..' ಬಾನು ಮುಷ್ತಾಕ್ ಆಯ್ಕೆಗೆ ಸಂಸದ ಯದುವೀರ್ ಯು-ಟರ್ನ್?
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕಾಂಗ್ರೆಸ್ಸಿಗರು ಎಲ್ಲಿ ಸೆಕ್ಯುಲರ್ ತೋರಿಸಬೇಕೋ ಅಲ್ಲಿ ತೋರಿಸಲಿ. ನಂಬಿಕೆ ಇಲ್ಲದವರಿಂದ ದಸರಾ ಉದ್ಘಾಟಿಸಲು ಹೊರಟ್ಟಿದ್ದಾರೆ. ಎಲ್ಲಾ ಹಂತಗಳಲ್ಲೂ ಈ ಸರ್ಕಾರ ಅಪಪ್ರಚಾರಕ್ಕೆ ಕಾರಣವಾಗಿದೆ. ಶಿವಕುಮಾರ್ ಜನರ ಭಾವನೆಗಳಿಗೆ ನೋವು ತಂದಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: 'ಮುಸ್ಲಿಂರ ಧಾರ್ಮಿಕ ಕಾರ್ಯಕ್ರಮಗಳನ್ನ ಹಿಂದೂಗಳಿಂದ ಉದ್ಘಾಟಿಸಲಿ..'; ಕಾಂಗ್ರೆಸ್ ಸರ್ಕಾರಕ್ಕೆ ಶಾಸಕ ಸಮೃದ್ಧಿ ಮಂಜುನಾಥ ಸವಾಲು!
ಡಿಕೆಶಿ ಜನರ ಕ್ಷಮೆ ಕೇಳಲಿ:
ಚಾಮುಂಡಿ ಬೆಟ್ಟ ಮುಜರಾಯಿ ಇಲಾಖೆಗೆ ಬಂದ ಮೇಲೆ ಅದು ಹಿಂದೂಗಳ ಆಸ್ತಿ ಅಂತ ಆಗಿದೆ. ಬೇರೆ ಧರ್ಮದವರು ಅಲ್ಲಿ ವಸ್ತುಗಳ ಮಾರಾಟಕ್ಕೆ ನಿರ್ಬಂಧವಿದೆ. ಡಿ.ಕೆ.ಶಿವಕುಮಾರ್‌ಗೆ ಇಷ್ಟು ಪರಿಜ್ಞಾನ ಇಲ್ಲವೇ? ಹೇಳಿಕೆ ಕೊಡುವಾಗ ಜವಾಬ್ದಾರಿಯಿಂದ ಕೊಡಬೇಕು. ಕೂಡಲೇ ಅವರು ಈ ರಾಜ್ಯದ ಜನರ ಕ್ಷಮೆ ಕೋರಬೇಕು ಎಂದು ಅಶ್ವತ್ಥನಾರಾಯಣ ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ