ಈ ಬಾರಿಯೂ ಸರಳ ದಸರಾ ಆಚರಣೆಗೆ ಚಿಂತನೆ: ಎಸ್.ಟಿ. ಸೋಮಶೇಖರ್

By Suvarna News  |  First Published Aug 7, 2021, 10:05 PM IST

* ಈ ಬಾರಿಯು ಸರಳ ದಸರ ಆಚರಣೆಗೆ ಸರ್ಕಾರ ಚಿಂತನೆ 
* ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ
* ಹೆಚ್.ಡಿ.ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್‌ ಪರಿಶೀಲನೆ ವೇಳೆ ಹೇಳಿಕೆ


ಮೈಸೂರು, (ಆ.07): ಮೈಸೂರು ದಸರಾ ಮಹೋತ್ಸವವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ವರ್ಷವೂ ದಸರಾ ಆಚರಣೆ ಮಾಡಲಾಗುತ್ತದೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. 

 ಇಂದು (ಶನಿವಾರ) ಹೆಚ್.ಡಿ.ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್‌ ಪರಿಶೀಲನೆ ವೇಳೆ ದಸರಾ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿಯೂ ಸರಳವಾಗಿ ಆಚರಿಸಲು ಚಿಂತಿಸಲಾಗಿದೆ ಎಂದರು.

Tap to resize

Latest Videos

ರಾಜ್ಯ​ದಲ್ಲಿ ಸರಳ ದಸರಾ : ಆದ ವೆಚ್ಚ ಎಷ್ಟು..?

ಸರಳ ದಸರ ಆಚರಣೆಗೆ ರೂಪರೇಷೆಗಳನ್ನು ಸಿದ್ದಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ರೂಪರೇಷೆ ಸಿದ್ದವಾದ ನಂತರ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಳೆದ ವರ್ಷ ದಸರಾ ಆಚರಣೆಗೆ 10 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಆ ಪೈಕಿ 7.50 ಕೋಟಿ ಅನುದಾನ ಉಳಿದಿದೆ. ಈ ವರ್ಷದ ದಸರಾ ಆಚರಣೆಗೆ ಸರ್ಕಾರದ ಅನುಮೋದನೆ ಪಡೆದು ಆ ಉಳಿಕೆ ಅನುದಾನ ಬಳಸಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

click me!