ದಸರಾ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಗುಡ್‌ನ್ಯೂಸ್, 2000 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ!

By Ravi Janekal  |  First Published Oct 10, 2024, 7:17 PM IST

ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಹಿನ್ನೆಲೆ  ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.


ಬೆಂಗಳೂರು (ಅ.10): ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಹಿನ್ನೆಲೆ  ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.

ಅ.10 ರಿಂದ 12 (ಶನಿವಾರ) ರವರೆಗೆ 2,000 ಹೆಚ್ಚುವರಿ ಬಸ್‌ ಕಾರ್ಯಾಚರಣೆ ನಡೆಸಲಿವೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಿಂದ ಸಂಚಾರ ಮಾಡಲಿರುವ ಬಸ್‌ಗಳು. ಇದಲ್ಲದೆ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ‘ಫ್ಲೈ ಬಸ್’ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಮೈಸೂರಿನಲ್ಲಿ ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ವಿಶೇಷ ಪ್ರವಾಸ ಕಾರ್ಯಾಚರಣೆ ಆರಂಭಿಸಿದೆ. ಜೊತೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

Tap to resize

Latest Videos

undefined

ದೀಪಾವಳಿ ಹಬ್ಬಕ್ಕೂ ವಿಶೇಷ ರೈಲುಗಳನ್ನು ಬಿಟ್ಟ ರೈಲ್ವೆ ಇಲಾಖೆ: ಇಲ್ಲಿದೆ ನೋಡಿ ಮಾಹಿತಿ

ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಿದೆ.

click me!