
ಮೈಸೂರು (ಸೆ.24): ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29, ಅ.1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಯಲಿದ್ದು, ಇದಕ್ಕಾಗಿ ಈ ಬಾರಿ 3,000 ಡ್ರೋನ್ ಬಳಸಿಕೊಳ್ಳಲಾಗುತ್ತಿದೆ. ಆ ಮೂಲಕ ಗಿನ್ನಿಸ್ ರೆಕಾರ್ಡ್ ಗೆ ಸೇರಲು ಸಿದ್ಧತೆ ನಡೆದಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ನಗರದ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ದಸರಾ ವಿದ್ಯುತ್ ದೀಪಾಲಂಕಾರಕ್ಕೆ ವಿದ್ಯುಕ್ತ ಚಾಲನೆ ನೀಡಿ ಅವರು ಮಾತನಾಡಿದರು. ದಸರಾ ಮಹೋತ್ಸವದಲ್ಲಿ ಡ್ರೋನ್ ಪ್ರದರ್ಶನ ಹೊಸ ಆಕರ್ಷಣೆಯಾಗಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.28, 29, ಅ.1 ಮತ್ತು 2ರಂದು ಡ್ರೋನ್ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ 1,500 ಡ್ರೋನ್ ಬಳಸಿಕೊಂಡು ಪ್ರದರ್ಶನ ನಡೆಸಲಾಗಿತ್ತು. ಈ ಬಾರಿಯ ಪ್ರದರ್ಶನದಲ್ಲಿ 3,000 ಡ್ರೋನ್ ಬಳಸಿಕೊಳ್ಳಲಾಗುವುದು. ಆ ಮೂಲಕ ಗಿನ್ನಿಸ್ ರೆಕಾರ್ಡ್‌ಗೆ ಸೇರಲು ಸಿದ್ಧತೆ ನಡೆದಿದೆ ಎಂದು ತಿಳಿಸಿದರು.
ಇದನ್ನೂ ಓದಿ: ದಸರಾ ಆರಂಭದ ಬೆನ್ನಲ್ಲೇ ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ, ಇಂದು ದರ್ಶನಕ್ಕೆ ಕೆಲಕಾಲ ನಿರ್ಬಂಧ
136 ಕಿ.ಮೀ. ದೀಪಾಲಂಕಾರ:
ದಸರಾ ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ಕೊಲ್ಕತ್ತಾ ಮಾದರಿಯ ಲೈಟಿಂಗ್ ಅಳವಡಿಸಲಾಗಿದೆ. ಈ ಬಾರಿ ನಗರದ 136 ಕಿ.ಮೀ. ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಇದರೊಂದಿಗೆ ನಗರದ ಪ್ರಮುಖ ಕಡೆಗಳಲ್ಲಿ ಎಲ್ಇಡಿ ಬಲ್ಬ್ ಗಳಿಂದ ನಿರ್ಮಿಸಲಾದ 80 ವಿವಿಧ ಪ್ರತಿಕೃತಿಗಳನ್ನು ಇರಿಸಲಾಗಿದೆ. ಸೆ.22 ರಿಂದ 21 ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ಇರಲಿದೆ. ಇದಕ್ಕಾಗಿ 300 ಕಿ.ಲೋ ವ್ಯಾಟ್ ಗಳ, 2,57,520 ಯೂನಿಟ್ ವಿದ್ಯುತ್ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ