ವಿಶ್ವ ವಿಖ್ಯಾತ ಮೈಸೂರು ಅಂಬಾರಿ ಆನೆ ಅರ್ಜುನನ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಕೊನೆಗೂ ರಾಜ್ಯ ಸರ್ಕಾರ ಮುಂದಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅರ್ಜುನ ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು.
ಹಾಸನ (ಜು.06): ರಾಜ್ಯದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಹಾಸನದಲ್ಲಿ ಕಾಡಾನೆಯೊಂದರ ಸೆರೆಗೆ ಹೋಗಿದ್ದ ಮೈಸೂರು ದಸರಾ ಅಂಬಾರಿ ಆನೆ ಅರ್ಜುನ, ಆನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿತ್ತು. ಅರಣ್ಯ ಇಲಾಖೆ ಆನೆಯನ್ನು ಅರಣ್ಯದ ನಡುವೆಯೇ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಿತ್ತು. ಇದರ ಬೆನ್ನಲ್ಲಿಯೇ ಅರ್ಜುನ ಆನೆಯ ಅಭಿಮಾನಿಗಳು ಆನೆಯ ಸ್ಮಾರಕ ನಿರ್ಮಾಣ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು. ಜನರ ತೋವ್ರ ಬೇಡಿಕೆಯ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಾಡಿನ ಪ್ರಾಣಿಯೊಂದಕ್ಕೆ ಅರಣ್ಯದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಆನೆ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದರಸಾ ಮಹೋತ್ಸವದ ಜಂಬೂ ಸವಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿಯೂ ನಿಪುಣನಾಗಿದ್ದರು. ಇಡೀ ರಾಜ್ಯದಲ್ಲಿ ಅರ್ಜುನ ಆನೆಯನ್ನು ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಇನ್ನು ಅರ್ಜುನ ಆನೆಗೆ ಪ್ರತ್ಯೇಕ ಅಭಿಮಾನಿಗಳ ತಂಡವೇ ಇತ್ತು. ಇನ್ನು ರಾಜ್ಯದ ಅರಣ್ಯ ಇಲಾಖೆ ವತಿಯಿಂದ ಅರ್ಜುನ ಆನೆಯಲ್ಲಿ ಹಾಸನದಲ್ಲಿ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಅರ್ಜುನ ಆನೆ ಗಂಭೀರ ದಾಳಿಗೆ ಒಳಗಾಗಿ ಅಲ್ಲಿಯೇ ಅಸುನೀಗಿತ್ತು.
undefined
ಅರ್ಜುನ ಆನೆಗೆ ಗುಂಡು ಬಿತ್ತಾ.? ಸಾವಿನ ವಿವಾದಕ್ಕೆ ಸ್ಪಷ್ಟನೆ ಕೊಟ್ಟ ವೈದ್ಯ ರಮೇಶ್!
ಇದರ ಬೆನ್ನಲ್ಲಿಯೇ ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅರ್ಜುನ ಆನೆ ಸಾವನ್ನಪ್ಪಿದೆ ಎಂದು ರಾಜ್ಯದ ಜನತೆ ಗಂಭೀರ ಆರೋಪ ಮಾಡಿ ಪ್ರತಿಭಟನೆಯನ್ನೂ ಮಾಡಿದ್ದರು. ಆದರೆ, ಆರೋಪ ಅಲ್ಲಗಳೆದ ಅರಣ್ಯ ಇಲಾಖೆ ಅರ್ಜುನ ಆನೆಯನ್ನು ಸರ್ಕಾರಿ ಗೌರವಗಳೊಂದಿಗೆ ಕಾಡಿನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಇನ್ನು ಮೈಸೂರು ದಸರಾ ಅಂಬಾರಿ ಹೊರುತ್ತಿದ್ದ ಆನೆಯಾಗಿದ್ದರಿಂದ ಮೈಸೂರು ರಾಜ ವಂಶಸ್ಥರಿಂದಲೂ ಗೌರವ ಸಲ್ಲಿಕೆ ಮಾಡಲಾಗಿತ್ತು. ಇದಾದ ನಂತರ ಅರ್ಜುನ ಆನೆಯ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಸಾರ್ವಜನಿಕರ ಆಗ್ರಹ ಕೇಳಿಬಂದಿತ್ತು.
ಸಾಮಾಜಿಕ ಜಾಲತಾಣದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣಕ್ಕೆ ಅಭಿಯಾನವೇ ನಡೆಯಿತು. ಇನ್ನು ಕೆಲವರು ಅರ್ಜುನ ಆನೆ ಸ್ಮಾರಕ ನಿರ್ಮಾಣದ ಹೆಸರಿನಲ್ಲಿ ದೊಡ್ಡ ದೊಡ್ಡವರಿಂದ ಹಣ ಸುಲಿಗೆ ಮಾಡಿ ಸಿಕ್ಕಿಬಿದ್ದಿದ್ದರು. ಇದೆಲ್ಲದ್ದರಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು ತಾನೇ ಅರ್ಜುನ ಆನೆಯ ಸ್ಮಾರಕ ನಿರ್ಮಾಣ ಮಾಡುವುದಾಗಿ ಮುಂದೆ ಬಂದಿತ್ತು.
ವೀರಮರಣ ಹೊಂದಿದ ಅರ್ಜುನ ಆನೆ ಸಮಾಧಿಗೆ ಪೂಜೆ ಸಲ್ಲಿಸಿದ ಮೈಸೂರು ಒಡೆಯರ್ ದಂಪತಿ: ಕೊನೆಗೂ ಸಿಕ್ತು ರಾಜಮರ್ಯಾದೆ !
ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಶನಿವಾರ ಹಾಸನಕ್ಕೆ ತೆರಳು ಅರ್ಜುನ ಆನೆ ಅಂತ್ಯಕ್ರಿಯೆ ನಡೆದ ಸ್ಥಳ ಹಾಸನ ಜಿಲ್ಲೆಯ ಸಕಲೇಶಪುರ ತಾ. ಯಸಳೂರು ಹೋ. ದಬ್ಬಳ್ಳಿಕಟ್ಟೆ ಅರಣ್ಯ ನಡುತೋಪಿನಲ್ಲಿ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇನ್ನು ಸಚಿವ ಈಶ್ವರ್ ಖಂಡ್ರೆ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಗೂ ಸ್ಥಳೀಯ ಶಾಸಕ ಸಿಮೆಂಟ್ ಮಂಜು ಅವರು ಸಾಥ್ ನೀಡಿದ್ದರು. ಜೊತೆಗೆ, ಈ ತಾಣವನ್ನು ಪ್ರವಾಸಿ ತಾಣವಾಗಿಯೂ ಅಭಿವೃದ್ಧಿ ಪಡಿಸಲು ಚಿಂತನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.