Mysuru ಅರಮನೆಯಲ್ಲಿ ಪ್ರಧಾನಿ ಯೋಗ ಕಾರ್ಯಕ್ರಮ: ರಾಜ ಮನೆತನದ ಕುಟುಂಬಕ್ಕೆ ಆಹ್ವಾನ

Published : Jun 18, 2022, 01:16 PM ISTUpdated : Jun 18, 2022, 01:28 PM IST
 Mysuru ಅರಮನೆಯಲ್ಲಿ ಪ್ರಧಾನಿ ಯೋಗ ಕಾರ್ಯಕ್ರಮ: ರಾಜ ಮನೆತನದ ಕುಟುಂಬಕ್ಕೆ ಆಹ್ವಾನ

ಸಾರಾಂಶ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ ಅರಮನೆ ಆವರಣದಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪಾಲ್ಗೊಳ್ಳಲು ಮೈಸೂರು ರಾಜ ಮನೆತನದ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. 

ಮೈಸೂರು (ಜೂ.18): ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವೇಳೆ ಅರಮನೆ ಆವರಣದಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪಾಲ್ಗೊಳ್ಳಲು ಮೈಸೂರು ರಾಜ ಮನೆತನದ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಅರಮನೆಯ ಯೋಗ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ ಮನೆತನದವರು ವೇದಿಕೆ ಹಂಚಿಕೊಳ್ಳಲಿದ್ದಾರೆ. ನಂತರ ಪ್ರಮೋದದೇವಿ ಒಡೆಯರ್ ಅವರ ಆಹ್ವಾನದ ಮೇರೆಗೆ ಮೋದಿಯವರು ಉಪಹಾರದಲ್ಲಿ ಭಾಗಿಯಾಗಲಿದ್ದಾರೆ.

ರಾಜ ಮನೆತನದವರು ಕಟ್ಟಿದ ಅರಮನೆಯಲ್ಲಿ ಯೋಗ ಮಾಡುತ್ತಿದ್ದು, ಅವರಿಗೆ ಸಂಪೂರ್ಣ ಗೌರವ ನೀಡುವ ಕೆಲಸ ಮಾಡುತ್ತೇವೆ. ಚಾಮುಂಡಿಬೆಟ್ಟದಲ್ಲಿ ಅಭಿವೃದ್ದಿ ಕೆಲಸ ಸೇರಿದಂತೆ ಚಾಮುಂಡಿ ಬೆಟ್ಟದ ರಸ್ತೆ ಮಾರ್ಗದಲ್ಲಿ ಬೀದಿ ದೀಪ ಅಳವಡಿಕೆ ಮಾಡಲಾಗುತ್ತಿದ್ದು, ಬೀದಿ ದೀಪ ಶಾಶ್ವತವಾಗಿ ಇರಲಿದೆ. ಮುಖ್ಯವಾಗಿ ಚಾಮುಂಡಿ ಬೆಟ್ಟದ ವನ್ಯಜೀವಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಅವಶ್ಯಕತೆ ಇದ್ದಾಗ ಮಾತ್ರ ಬೀದಿ ದೀಪ ಬಳಕೆ ಮಾಡಲಾಗುತ್ತದೆ. ಜೊತೆಗೆ ಚಾಮುಂಡಿಬೆಟ್ಟವನ್ನು ಸಸ್ಯಕಾಶಿ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.

ಮೋದಿ ಕರ್ನಾಟಕ ಪ್ರವಾಸ, ಪ್ರಧಾನಿ ಕಾರ್ಯಾಲಯದಿಂದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮವಿದ್ದು, ಫಲಾನುವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದು, ಯಾವುದೇ ಪಾಸ್‌ಗಳು ಇರುವುದಿಲ್ಲ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಕೇಂದ್ರದ ಯೋಜನೆ ಫಲಾನುವಿಗಳಾಗಿದ್ದಾರೆ. ಯಾವ ನೋಂದಾಣಿಯು ಇರುವುದಿಲ್ಲ. ಒಂದು ಗಂಟೆ ಮುಂಚಿತವಾಗಿ ಕಾರ್ಯಕ್ರಮಕ್ಕೆ ಇರುವವರಿಗೆ ಅವಕಾಶ ಸಿಗಲಿದ್ದು, ಮೋದಿಯವರನ್ನು ನೋಡುವ ಅವಕಾಶ ಎಲ್ಲರಿಗೂ ಸಿಗಲಿದೆ ಎಂದು ತಿಳಿಸಿದ್ದಾರೆ.

ಇನ್ನು ಮೈಸೂರು ರೈಲು ನಿಲ್ದಾಣ ವಿಸ್ತಾರಕ್ಕೆ ಯೋಜನೆ ವಿಚಾರವಾಗಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪ್ರತಾಪ್ ಸಿಂಹ, 488 ಕೋಟಿ ವೆಚ್ಚದಲ್ಲಿ ಮೂರು ಹೆಚ್ಚುವರಿ ಫ್ಲಾಟ್ ಫಾರ್ಮ್ ಮಾಡಲು ಯೋಜನೆ ರೂಪಿಸಲಾಗಿದೆ. ರೈಲು ನಿಲ್ದಾಣದ ಸುತ್ತ 65 ಎಕರೆ ಜಾಗದಲ್ಲಿ ವಸತಿಗೃಹವಿದ್ದು, ಅದನ್ನು ನೆಲಸಮ ಮಾಡಿದರೆ ನಮಗೆ ಜಾಗ ಸಿಗಲಿದೆ. ವಸತಿಗೃಹಗಳು ಶಿಥಿಲಾವಸ್ಥೆ ತಲುಪಿದ್ದು, ವಸತಿ ಗೃಹದ ನಿವಾಸಿಗಳಿಗೆ ಪರ್ಯಾಯವಾಗಿ ಸುಸಜ್ಜಿತ ವಸತಿ ಗೃಹ ನೀಡಲಾಗುತ್ತದೆ. ಹಾಗೂ ಮೋದಿ ಮೈಸೂರಿಗೆ ಬಂದ ನಂತರ 500 ಕೋಟಿ ಅನುದಾನವನ್ನು ಪಡೆಯಬಹುದು ಎಂದು ಪ್ರತಾಪ್ ಸಿಂಹ ನುಡಿದರು.

ಮೋದಿ ಮೈಸೂರು ಭೇಟಿ ವೇಳೆ ದಸರಾ ರೀತಿ ದೀಪಾಲಂಕಾರ: ಸಚಿವ ಎಸ್‌.ಟಿ. ಸೋಮಶೇಖರ್‌

ಮೋದಿ ಕಾರ್ಯಕ್ರಮಗಳು: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21ರಂದು ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಎರಡು ದಿನಗಳ ಕಾಲ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾವಹಿಸಲಿದ್ದಾರೆ ಎನ್ನುವ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿದೆ.ಅದು ಈ ಕೆಳಗಿನಂತಿದೆ ನೋಡಿ

ಮೋದಿ ಕಾರ್ಯಕ್ರಮಗಳ ವಿವರ
ಜೂನ್ 21( ಮೊದಲ ದಿನ)

* ಜೂನ್ 20 ರಂದು ಬೆಳಗ್ಗೆ 11.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮನ.
* ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ ಮೂಲಕ ಕೊಮ್ಮಘಟ್ಟ ಹೆಲಿಪ್ಯಾಡ್ ಗೆ ಆಗಮನ.
* ಮಧ್ಯಾಹ್ನ 12.30ರಿಂದ 1.45 ರವರೆಗೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಹಾಗೂ ರೈಲ್ವೇ ರೋಡ್ ಯೋಜನೆ ಮತ್ತು ಬಹು ಮಾದರಿ ಲಾಜಿಸ್ಟಿಕ್ ಪಾರ್ಕ್ ಗೆ ಶಂಕುಸ್ಥಾಪನೆ.

* ಮಧ್ಯಾಹ್ನ 2.30 ರಿಂದ 3.30 ರವರೆಗೆ ಜ್ಞಾನಭಾರತಿ ಆವರಣದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಉದ್ಘಾಟನೆ, ಅಂಬೇಡ್ಕರ್ ಪ್ರತಿಮೆ ಅನಾವರಣ, 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐಗಳ ಲೋಕಾರ್ಪಣೆ.
* ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಫ್ಟರ್ ಮೂಲಕ ಪ್ರಯಾಣ.
* ಸಂಜೆ 4.50ಕ್ಕೆ ಮೈಸೂರಿಗೆ ಆಗಮನ.
* ಸಂಜೆ 5 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್ ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ.

* ಸಂಜೆ 6.30ಕ್ಕೆ ಸುತ್ತೂರು ಮಠಕ್ಕೆ ಭೇಟಿ, ವೇದ ಪಾಠಶಾಲಾ ಕಟ್ಟಡ ಲೋಕಾರ್ಪಣೆ.
* ರಾತ್ರಿ 7.30 ಚಾಮುಂಡಿ ಬೆಟ್ಟಕ್ಕೆ ಭೇಟಿ.
* ರಾತ್ರಿ 8.10ಕ್ಕೆ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ.

ಜೂನ್ 21ರ ವಿವರ(ಎರಡನೇ ದಿನ)
* ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆ ಮುಂಭಾಗ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿ.
* ಬೆಳಗ್ಗೆ 8 ಗಂಟೆಗೆ ಅರಮನೆ ಮುಂಭಾಗದಲ್ಲಿ ವಸ್ತು ಪ್ರದರ್ಶನ ವೀಕ್ಷಣೆ.
* ಬೆಳಗ್ಗೆ 8.30ಕ್ಕೆ ಮೈಸೂರು ಅರಮನೆಗೆ ಭೇಟಿ.
* ಬೆಳಗ್ಗೆ 9.25 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ತಿರುವನಂತಪುರಕ್ಕೆ ಪ್ರಯಾಣ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌