ಮೈಸೂರಿನಿಂದ ಆಕ್ಸಿಜನ್ ಪೂರೈಸದಿರುವುದಕ್ಕೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ಜನರು ಸಾವನ್ನಪ್ಪಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ ಕೊಟ್ಟಿದೆ.
ಮೈಸೂರು, (ಮೇ.03): ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯ ಕಾರಣಕ್ಕೆ 24 ಕೊರೋನಾ ಸೋಂಕಿತ ರೋಗಿಗಳು ಮೃತಪಟ್ಟಿರುವ ಬಗ್ಗೆ ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.
ಚಾಮರಾಜನಗರ ಕೊರೋನಾ ಆಸ್ಪತ್ರೆಗೆ ಆಕ್ಸಿಜನ್ ಸರಬರಾಜು ಮಾಡಿಲ್ಲ ಎಂಬ ಆರೋಪಗಳನ್ನು ಮೈಸೂರು ಜಿಲ್ಲಾಡಳಿತ ತಳ್ಳಿಹಾಕಿದ್ದು, ಮೈಸೂರಿನಿಂದ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ಮಾಹಿತಿ ನೀಡಿದೆ.
undefined
ಚಾಮರಾಜನಗರ ಆಸ್ಪತ್ರೆ ದುರಂತ: ಆಕ್ಸಿಜನ್‌ನಿಂದ ಸತ್ತಿಲ್ಲ ಎಂದು ಸರ್ಟಿಫಿಕೇಟ್ ಕೊಟ್ಟ ಸಚಿವರು
ಅಲ್ಲಿನ ಕೋವಿಡ್ ಕೇಂದ್ರದಲ್ಲಿ ಆಕ್ಸಿಜನ್ ಕೊರತೆ ಉಂಟಾದ ಬೆನ್ನಲ್ಲೇ ಭಾನುವಾರ ರಾತ್ರಿ 12.30ರ ವೇಳೆಯಲ್ಲಿ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಆಕ್ಸಿಜನ್ ಲಿಕ್ವಿಡ್ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದು ಸರಿಯಾದ ಸಮಯದಲ್ಲಿ ಬಂದಿದ್ದೇಯಾ ಇಲ್ಲವೋ ಗೊತ್ತಿಲ್ಲ ಎಂದು ತಿಳಿಸಿದೆ.
ಆದರೆ, ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದ್ದು, ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ನಾವು ಅಧಿಕೃತವಾಗಿ 250 ಆಕ್ಸಿಜನ್ ಸಿಲಿಂಡರ್ ಭಾನುವಾರ ಮಧ್ಯರಾತ್ರಿಯ ವೇಳೆಗೆ ಕಳಿಸಿರುವುದು ದಾಖಲೆಯಲ್ಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ.
ಚಾಮರಾಜನಗರ ಆಸ್ಪತ್ರೆ ದುರಂತ : ಘಟನೆಯ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಮೈಸೂರಿನ ಸದರನ್ ಗ್ಯಾಸ್ ನಿಂದ 210 ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಗ್ಯಾಸ್ ಸಿಲಿಂಡರ್ ಚಾಮರಾಜನಗರಕ್ಕೆ ಭಾನುವಾರ ಮಧ್ಯರಾತ್ರಿಯೆ ರವಾನೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾಡಳಿತದಿಂದ ಮಾಹಿತಿ ನೀಡಲಾಗಿದೆ.
ಜಿಲ್ಲಾಧಿಕಾರಿಗಳನ್ನ ಈ ಬಗ್ಗೆ ಪ್ರಶ್ನಿಸಿದ್ರೆ, ಮೈಸೂರಿನಿಂದ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್‌ಗಳು ಬರಲಿಲ್ಲ ಎನ್ನುತ್ತಿದ್ದಾರೆ. ಇತ್ತ ಮೈಸೂರು ಜಿಲ್ಲಾಡಳಿತ ಬೇರೆ ಜಿಲ್ಲೆಗಳಿಗೆ ಆಕ್ಸಿಜನ್ ಸರಬರಾಜು ಮಾಡುವಂತಿಲ್ಲ ಎಂದು ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ ನೀಡಿದಿಯಂತೆ.ಈ ಹಿನ್ನೆಲೆಯಲ್ಲಿ ಚಾಮರಾಜನಗ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಸರಬರಾಜು ಆಗಿಲ್ಲ ಎನ್ನುವ ಆರೋಪ.