ಮೈಸೂರಿನಲ್ಲಿ ಮತಾಂಧರಿಂದ ಪೊಲೀಸರ ಮೇಲೆ ಹಲ್ಲೆಗೆ ಸಿಎಂ ಸಿದ್ದರಾಮಯ್ಯ ಕಾರಣ; ಆರ್. ಅಶೋಕ

Published : Feb 11, 2025, 03:52 PM IST
ಮೈಸೂರಿನಲ್ಲಿ ಮತಾಂಧರಿಂದ ಪೊಲೀಸರ ಮೇಲೆ ಹಲ್ಲೆಗೆ ಸಿಎಂ ಸಿದ್ದರಾಮಯ್ಯ ಕಾರಣ; ಆರ್. ಅಶೋಕ

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಮತಾಂಧರ ವಿರುದ್ಧ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮತಾಂಧರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಹಿಂದೂ ಸಮುದಾಯಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು (ಫೆ.11): ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಮತಾಂಧರ ವಿರುದ್ಧ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ. ಹುಬ್ಬಳ್ಳಿಯಲ್ಲಿ ಆದಂತೆಯೇ ಮೈಸೂರಿನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ರಾಹುಲ್‌ ಗಾಂಧಿ, ಕೇಜ್ರಿವಾಲ್‌ ಬಗ್ಗೆ ಪೋಸ್ಟ್‌ ಮಾಡಿದ್ದಾರೆಂಬ ಕಾರಣಕ್ಕೆ ಮತಾಂಧ ಮುಸ್ಲಿಮರು ನಿನ್ನೆ ಸಂಜೆ 6-7 ಗಂಟೆ ಸಮಯದಲ್ಲಿ ಚೀಲಗಳಲ್ಲಿ ಕಲ್ಲು ತುಂಬಿಕೊಂಡು ಬಂದು ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ಹಿಂದೂ ಸಮುದಾಯದ ಜನರಿಗೆ ಬೆದರಿಕೆ ಹಾಕಿದ್ದು, ಇಡೀ ಮೈಸೂರಿನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಹೇಳುವ ಮೂಲಕ ಗಲಭೆಗೆ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂಬಾರ್ಥದಲ್ಲಿ ಹೇಳಿದ್ದಾರೆ.

ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಇದ್ದ ಪ್ರಕರಣಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಪಸ್‌ ಪಡೆದಿರುವುದರಿಂದ ಮುಸ್ಲಿಮ್‌ ಮತಾಂಧರಿಗೆ ಧೈರ್ಯ ಬಂದಿದೆ. ಜೊತೆಗೆ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ನಾಯಕರು, ಇದು ಮುಸ್ಲಿಮರ ಸರ್ಕಾರ ಎಂದು ಹೇಳಿರುವುದರಿಂದ ಪೊಲೀಸ್‌ ಠಾಣೆಯನ್ನು ಧ್ವಂಸ ಮಾಡಬಹುದು ಎಂಬ ವಿಶ್ವಾಸ ಅವರಿಗೆ ಬಂದಿದೆ. ಒಂದಡೆ ಆರ್ಥಿಕ ದುಸ್ಥಿತಿ ಇದ್ದರೆ, ಮತ್ತೊಂದೆಡೆ ಕಾನೂನು ಹದಗೆಟ್ಟಿದೆ. ಈಗ ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಿಸಿದರೂ, ಅದು ವ್ಯರ್ಥ ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಬಗ್ಗೆ ಭಯವೇ ಇಲ್ಲವೆಂದರೆ ಕಾನೂನು ಸತ್ತಿದೆ ಎಂದರ್ಥ. ಮತಬ್ಯಾಂಕ್‌ಗಾಗಿ ಇಡೀ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ ಎಂದರು.

ಮೈಸೂರಿನ ಹಿಂದೂಗಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಮೈಸೂರಿನ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೆ ಈಗಾಗಲೇ ಮಾತಾಡಿದ್ದೇನೆ. ಪೊಲೀಸರು ಕೈ ಚೆಲ್ಲಿ ಕುಳಿತಿರುವುದರಿಂದ ನಾವೇ ಶಾಂತಿ ಕಾಪಾಡಬೇಕಾಗಿದೆ. ನಾನು ಕೂಡ ಮೈಸೂರಿಗೆ ಭೇಟಿ ನೀಡುತ್ತೇನೆ. ಕೆಎಫ್‌ಡಿ, ಪಾಪ್ಯುಲರ್‌ ಫ್ರಂಟ್‌ ಮೊದಲಾದ ಸಂಘಟನೆಗಳು ಮೈಸೂರಿನಲ್ಲಿ ಸಕ್ರಿಯವಾಗಿವೆ. ಕೇರಳದಿಂದ ಬಂದು ಕೊಲೆ, ಅಪಹರಣ ಮಾಡಿ ಹೋಗಿರುವ ಘಟನೆಗಳು ನಡೆದಿವೆ ಎಂದರು.

ಇದನ್ನೂ ಓದಿ: ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸಂಚಾರಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗ್ರೀನ್ ಸಿಗ್ನಲ್

ಕಾಂಗ್ರೆಸ್‌ ಶಾಸಕರಿಗೆ ಆದಾಯವಿಲ್ಲ: ಕಾಂಗ್ರೆಸ್‌ ಶಾಸಕರಿಗೆ ಬೇರೆ ಆದಾಯವಿಲ್ಲ. ಆದ್ದರಿಂದ ವರ್ಗಾವಣೆ, ಮರಳು ಮಾಫಿಯಾ ಮೂಲಕ ಹಣ ಸಂಪಾದಿಸುತ್ತಿದ್ದಾರೆ. ಭದ್ರಾವತಿಯಲ್ಲೂ ಇಂಥದ್ದೇ ಘಟನೆ ನಡೆದಿದೆ. ಬೇರೆ ಜಿಲ್ಲೆಗಳಲ್ಲೂ ಅಧಿಕಾರಿಗಳಿಗೆ ಕಾಂಗ್ರೆಸ್‌ ಶಾಸಕರಿಂದ ಬೆದರಿಕೆ ಇದೆ. ಮಂಡ್ಯ, ಬೀದರ್‌, ಯಾದಗಿರಿ ಮೊದಲಾದ ಕಡೆ ಮರಳು ಮಾಫಿಯಾ ನಡೆಯುತ್ತಿದೆ. ಭದ್ರಾವತಿಯ ಮಹಿಳಾ ಅಧಿಕಾರಿ ರೆಕಾರ್ಡ್‌ ಮಾಡಿಕೊಂಡು ಧೈರ್ಯವಾಗಿ ಹೇಳಿದ್ದಾರೆ. ಉಳಿದ ಜಿಲ್ಲೆಗಳ ಅಧಿಕಾರಿಗಳು ವರ್ಗಾವಣೆ ಭಯದಿಂದ ಸುಮ್ಮನಾಗಿದ್ದಾರೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನ್ನು ಉಲ್ಲಂಘಿಸಿ ಕುಂಭಮೇಳಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ಅಲ್ಲಿನ ವ್ಯವಸ್ಥೆಗೆ ಉತ್ತರ ಪ್ರದೇಶ ಸರ್ಕಾರವನ್ನು ಶ್ಲಾಘಿಸಿದ್ದಾರೆ. ಖರ್ಗೆಯವರದ್ದು ನಿಜವಾದ ಕಾಂಗ್ರೆಸ್ಸಾ ಅಥವಾ ಡಿ.ಕೆ.ಶಿವಕುಮಾರ್‌ ಅವರದ್ದು ನಿಜವಾದ ಕಾಂಗ್ರೆಸ್ಸಾ ಎಂದು ಅವರೇ ಹೇಳಬೇಕು. ಇಲ್ಲಿ ಯಾರನ್ನು ನಂಬಬೇಕು ಹಾಗೂ ಅನುಸರಿಸಬೇಕೆಂದು ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಗೊಂದಲ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಶಾಸಕ ಬಿಕೆ ಸಂಗಮೇಶ್ ಪುತ್ರನ ಗೂಂಡಾಗಿರಿ, ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದ ಬಳಸಿ ನಿಂದನೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ