
ಮೈಸೂರು(ಜು.13): ರಾಜ್ಯ ಸರ್ಕಾರದ ಆಡಳಿತ ಯಂತ್ರ ವಿಫಲವಾಗಿದೆ. ಗುಂಡಿ ಮುಚ್ಚಲು ಕೂಡ ಸರ್ಕಾರದ ಬಳಿ ಹಣವಿಲ್ಲ. ಡೆಂಘೀ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಂಡಿಲ್ಲ. ಸರ್ಕಾರದ ಖಜಾನೆ ಸಂಪೂರ್ಣ ಖಾಲಿ ಆಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಎಂಡಿಎ ಹಗರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಾಗಿ ಸರ್ಕಾರದ ಖಜಾನೆ ಖಾಲಿ ಆಗಿದೆ. ಮೈಸೂರು ಸಂಸ್ಥಾನದಿಂದ ಇತ್ತೀಚಿನವರೆಗೂ ನಮ್ಮ ರಾಜ್ಯ ಪ್ರಗತಿಪರವಾಗಿತ್ತು. ಈಗ ನಮ್ಮ ರಾಜ್ಯ ಆರ್ಥಿಕವಾಗಿ ಹಿಂದುಳಿಯುತ್ತಿದೆ. ಈ ಭ್ರಷ್ಟ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಅವರು ಆರೋಪಿಸಿದರು.
ವಾಲ್ಮೀಕಿ ನಿಗಮ, ಮುಡಾ ಹಗರಣದ ವಿರುದ್ಧ ನಾಮ್‌ಕಾವಸ್ತೆ ಹೋರಾಟ; ರಾಜ್ಯ ಬಿಜೆಪಿ ನಾಯಕರ ಮೇಲೆ ಹೈಕಮಾಂಡ್ ಗರಂ
ಸಿಎಂ ಸಿದ್ದರಾಮಯ್ಯ ಮೈಸೂರನ್ನು ಪ್ರತಿಷ್ಠೆಯಾಗಿ ತೆಗದುಕೊಳ್ಳುತ್ತಾರೆ. ಆದರೆ, ಭ್ರಷ್ಟಾಚಾರ ಕಡಿಮೆ ಮಾಡಲು ಪ್ರತಿಷ್ಠೆ ಇಲ್ಲ. ಎಂಡಿಎ ಹಗರಣವನ್ನು ಸಿಬಿಐಗೆ ವಹಿಸಬೇಕು. ಈ ಬಗ್ಗೆ ಸಂಪೂರ್ಣ ತನಿಖೆ ಆಗುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ