ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿದ್ರೆ ವಿಧಾನಸೌಧ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗ್ತಾರೆ: ಸಂಸದ ಪ್ರತಾಪ ಸಿಂಹ

By Ravi JanekalFirst Published Mar 4, 2024, 11:52 AM IST
Highlights

ನಾನು 2023ರ ವಿಧಾನಸಭಾ ಚುನಾವಣೆ ಪ್ರಚಾರದಲ್ಲೇ ಹೇಳಿದ್ದೆ, ನೀವು ಕಾಂಗ್ರೆಸ್‌ಗೆ ವೋಟು ಹಾಕಿದ್ರೆ ತಾಲಿಬಾನ್ ಸರ್ಕಾರ ಬರುತ್ತೆ. ಸರ್ಕಾರ ರಾಜ್ಯದ ಜನರದ್ದಾಗಿರಲ್ಲ ತಾಲಿಬಾನಿಗಳದ್ದಾಗಿರುತ್ತೆ ಅಂತಾ ಇವತ್ತು ನಾನು ಹೇಳಿದಹಾಗೆ ತಾಲಿಬಾನಿ ಸರ್ಕಾರ ನಡೆತಿದೆ ಎಂಬುದಕ್ಕೆ ಬಹಳಷ್ಟು ಘಟನೆಗಳು ಸಾಕ್ಷಿಯಾಗಿವೆ ಎಂದು ರಾಜ್ಯಸರ್ಕಾರದ ವಿರುದ್ಧ ಮೈಸೂರು ಕೊಡಗು ಸಂಸದ ಪ್ರತಾಪ ಸಿಂಹ ಹರಿಹಾಯ್ದರು.

ಮೈಸೂರು (ಮಾ.4): ನಾನು 2023ರ ವಿಧಾನಸಭಾ ಚುನಾವಣೆ ಪ್ರಚಾರದಲ್ಲೇ ಹೇಳಿದ್ದೆ, ನೀವು ಕಾಂಗ್ರೆಸ್‌ಗೆ ವೋಟು ಹಾಕಿದ್ರೆ ತಾಲಿಬಾನ್ ಸರ್ಕಾರ ಬರುತ್ತೆ. ಸರ್ಕಾರ ರಾಜ್ಯದ ಜನರದ್ದಾಗಿರಲ್ಲ ತಾಲಿಬಾನಿಗಳದ್ದಾಗಿರುತ್ತೆ ಅಂತಾ ಇವತ್ತು ನಾನು ಹೇಳಿದಹಾಗೆ ತಾಲಿಬಾನಿ ಸರ್ಕಾರ ನಡೆತಿದೆ ಎಂಬುದಕ್ಕೆ ಬಹಳಷ್ಟು ಘಟನೆಗಳು ಸಾಕ್ಷಿಯಾಗಿವೆ ಎಂದು ರಾಜ್ಯಸರ್ಕಾರದ ವಿರುದ್ಧ ಮೈಸೂರು ಕೊಡಗು ಸಂಸದ ಪ್ರತಾಪ ಸಿಂಹ ಹರಿಹಾಯ್ದರು.

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಂಸದ, ವಿಧಾನಸೌಧದಲ್ಲೇ ರಾಜಾರೋಷವಾಗಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದೆ ಎಂದರೆ ನೀವೇ ಯೋಚಿಸಿ ರಾಜ್ಯದಲ್ಲಿ ಯಾರು ಅಧಿಕಾರ ಮಾಡ್ತಿದ್ದಾರೆ ಅನ್ನೋದು ಸ್ಪಷ್ಟವಾಗುತ್ತೆ. ಕಾಂಗ್ರೆಸ್ ಮುಂದುವರಿದರೆ ವಿಧಾನಸೌಧದ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದ್ರೂ ಆಶ್ಚರ್ಯಪಡಬೇಡಿ. ಕಾಂಗ್ರೆಸ್ ಅಧಿಕಾರಕ್ಕೆ ಒಂಬತ್ತು ತಿಂಗಳ ಕಳೆದಿಲ್ಲ ಆಗಲೇ ಬಾಂಬ್ ಸ್ಫೋಟಗಳು ಶುರುವಾಗಿವೆ ಎಂದರು.

ಪ್ರತಾಪ ಸಿಂಹಗೆ ಮತ್ತೆ ಮೈಸೂರು ಕೊಡಗು ಬಿಜೆಪಿ ಟಿಕೆಟ್ ಪಕ್ಕನಾ? ಈ ಬಗ್ಗೆ ಸಂಸದ ಹೇಳಿದ್ದೇನು?

ಈ ಹಿಂದೆ ಮನಮೋಹನ್ ಸಿಂಗ್‌ ಪ್ರಧಾನಿ ಆಗಿದ್ದಾಗ ಹತ್ತು ವರ್ಷಗಳ ಕಾಲ ಸರಣಿ ಬಾಂಬ್ ಸ್ಫೋಟಗಳು ನಡೆದಿದ್ದವು. ಚಿನ್ನಸ್ವಾಮಿ ಸ್ಟೇಡಿಯಂ, ಲುಂಬಿಣಿ ಪಾರ್ಕ್, ಜರ್ಮನ್ ಬೇಕರಿ, ಪುಣೆ, ಮುಂಬೈ, ಡೆಲ್ಲಿ, ಸೂರತ್ ಹೀಗೆ ದೇಶಾದ್ಯಂತ ಸರಣಿ ಬಾಂಬ್ ಸ್ಫೋಟಗಳು ನಡೆಯುತ್ತಿದ್ದವು. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಹಾಗಾಗಿ ಮತ್ತೆಕ ಬಾಂಬ್ ಸ್ಫೋಟಗಳು ಪ್ರಾರಂಭವಾಗಿವೆ. ಇದು ಟ್ರೈಲರ್ ಮಾತ್ರವೇ, ಮುಂದೆ ಇನ್ನೂ ದುರ್ಘಟನೆಗಳು ಕಾದಿವೆ. ಆದಷ್ಟು ಬೇಗ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನವನ್ನು ಬಿಜೆಪಿ ಜೆಡಿಎಸ್ ಮೈತ್ರಿಕೂಟಕ್ಕೆ ಕೊಟ್ಟು ಗೆಲ್ಲಿಸಿ. ಆ ಮೂಲಕ ಈ ಸರ್ಕಾರ ತೊಲಗಲು ಅವಕಾಶ ಮಾಡಿಕೊಟ್ರೆ ಕರ್ನಾಟಕ ಉಳಿಯುತ್ತೆ, ಇಲ್ಲದಿದ್ರೆ ಗಂಡಾಂತರ ಕಾದಿದೆ‌ ಎಂದರು.

ಮೈಸೂರು- ಕೊಡಗು ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿಯೂ ನನಗೆ ಸಿಗಲಿದೆ: ಪ್ರತಾಪ್ ಸಿಂಹ

ಒಸಾಮಾ ಬಿನ್ ಲಾಡೆನ್, ಮುಲ್ಲಾ ಉಮರ್‌ ಅಂತಹವರು ಅಧಿಕಾರ ಮಾಡುವಾಗ ಬಾಂಬ್ ಹಾಕುವವರಿಗೆ ರಕ್ಷಣೆ ಕೊಡುತ್ತಾರೆ, ಉಗ್ರರನ್ನ ಹಿಡಿಯೋ ಕೆಲಸ ಮಾಡಲ್ಲ.
ಇಷ್ಟೆಲ್ಲ ಆದ್ರೂ ಎಫ್‌ಎಸ್‌ಎಲ್ ರಿಪೋರ್ಟ್ ಸೋಷಿಯಲ್ ಮೀಡಿಯಾದಲ್ಲಿ ತಿರುಚಿದ್ದಾರೆ ಅಂತ ಸಮರ್ಥಿಸಿಕೊಳ್ಳುವ ಅಗತ್ಯ ಏನಿದೆ‌? ಸಿದ್ದರಾಮಯ್ಯ ಅವರೆ, ನೀವು ಅವರ ಕೈ ಕಡಿದರೂ ಅವರು ನಿಮಗೇ ಮತ ಹಾಕೋದು. ಮತ್ಯಾಕೆ ನೀವು ರಕ್ಷಣೆ ಮಾಡಲು ಹೊರಟಿದ್ದಿರಿ. ಇದೇ ರೀತಿ ಮುಂದುವರಿದರೆ ಕರ್ನಾಟಕ ಯಾವ ಸ್ಥಿತಿಗೆ ಬರುತ್ತೆ ಯೋಚನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

click me!