ಸರ್ಕಾರಗಳು ರಾಜ ಮನೆತನಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ, ಪ್ರಮೋದಾದೇವಿ ಅಸಮಾಧಾನ

Published : Jul 26, 2022, 04:52 PM IST
ಸರ್ಕಾರಗಳು ರಾಜ ಮನೆತನಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ, ಪ್ರಮೋದಾದೇವಿ ಅಸಮಾಧಾನ

ಸಾರಾಂಶ

ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿವಾದ ತಾರಕಕ್ಕೇರಿದೆ. ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ ಮಾಡಬಾರದು ಎಂದು ಕೆಲ ರೈತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದರ ಮಧ್ಯೆ ರಾಜವಂಶಸ್ಥೆ ಪ್ರಮೋದಾದೇವಿ ಸರ್ಕಾರದ ನಡೆಗೆ ಅಸಮಾಧಾನ ಹೊರಹಾಕಿದ್ದಾರೆ.  

ಮೈಸೂರು, (ಜುಲೈ.26): ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸದಂತೆ ರಾಜವಂಶಸ್ಥೆ ಪ್ರಮೋದಾದೇವಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಇದೀಗ ಇಂದು(ಮಂಗಳವಾರ) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಮೋದಾ ದೇವಿ. ಸರ್ಕಾರ ರಾಜ ಮನೆತನಗಳನ್ನು ಸರಿಯಾಗಿ ನಡೆಸಿ ಕೊಳ್ಳುತ್ತಿಲ್ಲ. ನಾವೇನೂ ಯಾರದೋ ಆಸ್ತಿ ಕಬಳಿಸಲು ಹೊರಟ್ಟಿದ್ದೇವೇ ಎಂಬ ರೀತಿ ಸರ್ಕಾರ ಯೋಚಿಸುತ್ತಿವೆ. ಇದು ನಮಗೆ ಸರ್ಕಾರಗಳು ಕೊಡುತ್ತಿರುವ ಕಿರುಕುಳ. ದೇಶದ ಬೇರೆ ಯಾವ ರಾಜಮನೆತನಗಳಿಗೂ ಆಸ್ತಿಯ ವಿಚಾರದಲ್ಲಿ ಅಲ್ಲಿನ ಸರಕಾರಗಳು ಇಷ್ಟು ತೊಂದರೆ ಕೊಟ್ಟಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌ಗೆ ಟ್ವಿಸ್ಟ್‌: ವಿವಾದಕ್ಕೆ ಎಂಟ್ರಿ ಕೊಟ್ಟ ಮೈಸೂರು ರಾಜಮನೆತನ!

1950ರ ಕಾಲದಿಂದ ಆ ಬೆಟ್ಟದ 1,650 ಎಕರೆ ಜಾಗ ನಮ್ಮದು. ಭಾರತ ಸರಕಾರದ ಜೊತೆ ಮೈಸೂರು ಸಂಸ್ಥಾನ ಮಾಡಿಕೊಂಡ ಆಸ್ತಿ ಹಂಚಿಕೆಯ ಪತ್ರದಲ್ಲಿ ಬೇಬಿ ಬೆಟ್ಟ ಇದೆ. ಇದು ಖಾಸಗಿ ಆಸ್ತಿ ಇದರಲ್ಲಿ ಟ್ರಯಲ್ ಬ್ಲಾಸ್ಟ್ ಮಾಡೋದು ಸರಿಯಲ್ಲ. ಟ್ರಯಲ್ ಬ್ಲಾಸ್ಟ್ ಗೆ ತಜ್ಞರು ಸರಕಾರಿ ಜಾಗ ಗುರುತಿಸಿಕೊಳ್ಳಬೇಕು ಎಂದು ಹೇಳಿದರು. 

ಬೇಬಿ ಬೆಟ್ಟದ ಜಾಗವನ್ನು ಉದ್ದೇಶ ಪೂರ್ವಕವಾಗಿ ಬಿ ಖರಬ್ ಪಟ್ಟಿಗೆ ಸೇರಿಸಲಾಗಿತ್ತು. ಹೀಗಾಗಿ ಆ ಜಾಗದ ವಿಚಾರದಲ್ಲಿ ನಾನು ಕೋರ್ಟ್ ಗೆ ಹೋಗಿರಲಿಲ್ಲ. ಮೈಸೂರಿನ ಕುರುಬಾರಹಳ್ಳಿ ಬಿ ಖರಾಬ್ ಜಾಗದ ವಿವಾದದಲ್ಲಿ ಸುಪ್ರೀಂಕೋರ್ಟ್ ನಲ್ಲಿ ಅರಮನೆಗೆ ಜಯವಾಗಿದೆ. ಆ ತೀರ್ಪು ಈ ಬೇಬಿ ಬೆಟ್ಟದ ಜಾಗಕ್ಕೂ ಅನ್ವಯವಾಗುತ್ತೆ. ಆ ಜಾಗ ನಮ್ಮ ವ್ಯಾಪ್ತಿಗೆ ಬಂದರೆ ನಾನು ಅಲ್ಲಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

ಸರ್ಕಾರಗಳು ರಾಜ ಮನೆತನಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ನಾವೇನೂ ಯಾರದೋ ಆಸ್ತಿ ಕಬಳಿಸಲು ಹೊರಟ್ಟಿದ್ದೇವೇ ಎಂಬ ರೀತಿ ಸರ್ಕಾರ ಯೋಚಿಸುತ್ತಿವೆ. ಇದು ನಮಗೆ ಸರ್ಕಾರಗಳು ಕೊಡುತ್ತಿರುವ ಕಿರುಕುಳ. ದೇಶದ ಬೇರೆ ಯಾವ ರಾಜಮನೆತನಗಳಿಗೂ ಆಸ್ತಿಯ ವಿಚಾರದಲ್ಲಿ ಅಲ್ಲಿನ ಸರಕಾರಗಳು ಇಷ್ಟು ತೊಂದರೆ ಕೊಟ್ಟಿಲ್ಲ. 10 ರೂಪಾಯಿ ಬೆಲೆ ಬಾಳುವುದನ್ನು 10 ಪೈಸೆಗೆ ತೆಗೆದು ಕೊಳ್ಳುವ ಮನಃಸ್ಥಿತಿ ಸರಕಾರ ಪ್ರದರ್ಶಿಸುತ್ತಿದೆ. ಸರ್ಕಾರಕ್ಕೆ ನಾನು ಧನ್ಯವಾದ ಹೇಳ್ತಿದ್ದಿ‌ನಿ. ಇವರಿಂದ ನನ್ನ ಕಾನೂನು ಜ್ಞಾನ ಹೆಚ್ಚಾಯ್ತು. ಬೇಬಿ ಬೆಟ್ಟದ ವಿಚಾರದಲ್ಲಿ ಈಗ ಕಾನೂನು ತಜ್ಞರ ಜೊತೆ ಚರ್ಚಿಸಿ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ ಎಂದು ಎಚ್ಚರಿಕೆ ನೀಡಿದರು.

ನಾನು ಪ್ರತಿಭಟನೆ ಸ್ಥಳಕ್ಕೆ ಹೋಗುವುದಿಲ್ಲ. ಕೆಆರ್‌ಎಸ್ ಜಲಾಶಯದ ದೃಷ್ಟಿಯಿಂದ ಅಲ್ಲಿ ಗಣಿಗಾರಿಕೆಗೂ ಅವಕಾಶ ಕೊಡಬಾರದು. ಅಲ್ಲಿ ಟ್ರಯಲ್ ಬ್ಲಾಸ್ಟ್ ಮಾಡೋದು ಕೂಡ ಸರಿಯಲ್ಲ. ಬೇರೆ ಜಾಗದಲ್ಲಿ ಮಾಡಿ ಅದನ್ನು ಪರೀಕ್ಷೆ ಮಾಡಿಕೊಳ್ಳಲಿ ಎಂದರು.

ಮಂಡ್ಯದ ಕೆಆರ್‌ಎಸ್ ಜಲಾಶಯ ವಿಚಾರವಾಗಿ ದೊಡ್ಡ ರಾಜಕೀಯ ದಂಗಲ್ ಶುರುವಾಗಿತ್ತು. ಡ್ಯಾಂನಿಂದ ಸುಮಾರು 10ಕಿಲೋ ಮೀಟರ್ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಇದ್ರಿಂದಾಗಿ ಡ್ಯಾಂ ಬಿರುಕುಬಿಡ್ತಿದೆ ಎಂದು ಸ್ವತಃ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದರು. ಈ ಬಗ್ಗೆ ಜೆಡಿಎಸ್ ಹಾಗೂ ಸುಮಲತಾ ನಡುವೆ ದೊಡ್ಡ ಮಟ್ಟದ ಜಟಾಪಟಿ ನಡೆದಿತ್ತು.

ಇದರಿಂದ ಸರ್ಕಾರ ಬೇಬಿ ಬೆಟ್ಟದಲ್ಲಿ ಕಲ್ಲುಗಣಿಗಾರಿಕೆಗೆ ನಿಷೇಧ ಹೇರಿತ್ತು. ಆದ್ರೀಗ, ಗಣಿಗಾರಿಕೆಯಿಂದ ನಿಜಕ್ಕೂ ಡ್ಯಾಂಗೆ ಹಾನಿಯಾಗುತ್ತಾ ಅನ್ನೋದರ ಪರೀಕ್ಷೆಗಾಗಿ ಟ್ರಯಲ್ ಬ್ಲಾಸ್ಟ್ ನಡೆಸಲು ಸರ್ಕಾರ ಮುಂದಾಗಿದೆ. ಸರ್ಕಾರದ ಈ ಹೆಜ್ಜೆಯಿಂದ ರೈತರು ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿ ನಿನ್ನೆ(ಜುಲೈ 25)ರಂದು ಪ್ರತಿಭಟನೆ ನಡೆಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌