ಶಾ ಕಾರ್ಯಕ್ರಮದಲ್ಲಿ ಹಿಂದಿ : ನಾಗಾಭರಣರಿಂದ ಸರ್ಕಾರಕ್ಕೆ ಪತ್ರ

By Kannadaprabha NewsFirst Published Jan 19, 2021, 7:49 AM IST
Highlights

ಅಮಿತ್ ಶಾ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ ಮಾಡಿರುವ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಸರ್ಕಾರಕ್ಕೆ ಪತ್ರ ಬರೆದು ಅಸಮಾಧಾನ ಹೊರಹಾಕಿದ್ದಾರೆ.

 ಬೆಂಗಳೂರು (ಜ.19):  ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕ್ಷಿಪ್ರ ಕಾರ್ಯಪಡೆ (ರಾರ‍ಯಪಿಡ್‌ ಆಕ್ಷನ್‌ ಫೋರ್ಸ್‌) ಘಟಕದ ಶಂಕುಸ್ಥಾಪನೆಯ ಅಡಿಗಲ್ಲು ಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಿ ಕೇವಲ ಹಿಂದಿ ಮತ್ತು ಆಂಗ್ಲಭಾಷೆಯಲ್ಲಿ ಮಾತ್ರ ಬರೆದಿದ್ದು ತ್ರಿಭಾಷಾ ನಿಯಮದ ಉಲ್ಲಂಘನೆ. ಇದಕ್ಕೆ ಕಾರಣರಾದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಒತ್ತಾಯಿಸಿದ್ದಾರೆ.

RAF ಘಟಕದಲ್ಲಿ ಹಿಂದಿ ಹೇರಿಕೆ-ಕನ್ನಡ ಕಡೆಗಣನೆ : ಎಚ್‌ಡಿಕೆ ಆಕ್ರೋಶ .

ಇತ್ತೀಚೆಗೆ ಕೇಂದ್ರ ಗೃಹಮಂತ್ರಿಗಳು ಆರ್‌ಎಎಫ್‌ (ಕ್ಷಿಪ್ರ ಕಾರ್ಯಪಡೆ) ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಫಲಕದಲ್ಲಿ ಕೇವಲ ಹಿಂದಿ ಮತ್ತು ಇಂಗ್ಲಿಷನ್ನು ಮಾತ್ರ ಪರಿಗಣಿಸಲಾಗಿದೆ. ಪ್ರಧಾನವಾಗಿ ಬಳಸಬೇಕಿದ್ದ ರಾಜ್ಯಭಾಷೆಯಾದ ಕನ್ನಡವನ್ನು ಸಂಪೂರ್ಣವಾಗಿ ಕೈಬಿಟ್ಟಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತ್ರಿಭಾಷಾ ನೀತಿಯನ್ನು ಉಲ್ಲಂಘಿಸಿದಂತಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಇಲಾಖೆಗೆ ಬರೆಯಲಾಗಿರುವ ಪತ್ರದಲ್ಲಿ ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ; ಸಿದ್ದಾಪುರದ ಹಾಲಬ್ಬವೇ ಒಂದು ವಿಶೇಷ! ...

ರಾಜ್ಯದಲ್ಲಿ ಕನ್ನಡವನ್ನು ಆಡಳಿತ, ಶಿಕ್ಷಣ, ತಂತ್ರಜ್ಞಾನ ಹಾಗೂ ಸಾರ್ವಜನಿಕವಾಗಿ ಬಳಕೆಯಲ್ಲಿರುವಂತೆ ನೋಡಿಕೊಳ್ಳಲು ಪ್ರಾಧಿಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭಾಷಾನೀತಿ ಅನ್ವಯ ಹಲವು ಉಪಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೇ 350ಕ್ಕೂ ಹೆಚ್ಚು ಕನ್ನಡಪರ ಆಜ್ಞೆ, ಆದೇಶಗಳನ್ನು ಹೊರಡಿಸಿ ಕನ್ನಡದ ಬಗೆಗಿನ ತನ್ನ ಬದ್ಧತೆ ತೋರಿದೆ. ಕೇಂದ್ರವು ಕೂಡ ರಾಜ್ಯದಲ್ಲಿರುವ ಕೇಂದ್ರ ಸ್ವಾಮ್ಯದ ಕಚೇರಿ, ಸಂಸ್ಥೆಗಳಲ್ಲಿ ತ್ರಿಭಾಷಾ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿದೆ. ಆದರೂ ಕ್ಷಿಪ್ರ ಕಾರ್ಯಪಡೆ ಘಟಕದ ಶಂಕುಸ್ಥಾಪನೆ ಅಡಿಗಲ್ಲಿನಲ್ಲಿ ಮತ್ತು ಸದರಿ ಕಾರ್ಯಕ್ರಮಗಳ ವೇದಿಕೆ ಫಲಕಗಳಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಅಧಿಕಾರಿಗಳ ಉದ್ಧಟತನವನ್ನು ತೋರಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

click me!