ರಾಜ್ಯದಲ್ಲಿ ತಾಲಿಬಾನ್‌ ಸರ್ಕಾರವಿದೆ: ವಿಪಕ್ಷ ನಾಯಕ ಆರ್ ಆಶೋಕ್ ವಾಗ್ದಾಳಿ

By Kannadaprabha News  |  First Published Sep 14, 2024, 7:15 AM IST

ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್ ಸರ್ಕಾರವಿದ್ದು, ಕಾಂಗ್ರೆಸ್ ಸರ್ಕಾರ ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲು ಸಿದ್ಧವಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬೆಂಗಳೂರು (ಸೆ.14) : ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್ ಸರ್ಕಾರವಿದ್ದು, ಕಾಂಗ್ರೆಸ್ ಸರ್ಕಾರ ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲು ಸಿದ್ಧವಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಘಟನೆ ಕುರಿತು ಸರ್ಕಾರಕ್ಕೆ ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆಯಾಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಿಲ್ಲವೇಕೆ ಎಂಬುದೂ ಸೇರಿದಂತೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.

Tap to resize

Latest Videos

undefined

ಹಿಂದೂಗಳ ಮೇಲೆ ದೌರ್ಜನ್ಯ ಎಸಗೋರಿಗೆ ಗುಂಡಿಡಬೇಕು: ರೇಣುಕಾಚಾರ್ಯ

ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ನಿರ್ವಹಣೆ ಮಾಡುತ್ತಿರುವ ರೀತಿಯನ್ನು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟೀಕಿಸಿದ ಅವರು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ.

ಘಟನೆಯಿಂದ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಿಲ್ಲವೇಕೆ? ಇಂತಹ ಕೃತ್ಯದ ಇತಿಹಾಸವಿದ್ದರೂ ಗುಪ್ತಚರ ವಿಭಾಗದವರು ಇದರ ಬಗ್ಗೆ ಮಾಹಿತಿ ಕೊಡಲಿಲ್ಲವೇಕೆ? ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ನಿರ್ಲಕ್ಷ್ಯ ಮಾಡಲಾಯಿತೇ ಎಂದು ಪ್ರಶ್ನಿಸಿದ್ದಾರೆ.

ಗಣಪತಿ ಮೆರವಣಿಗೆಗೆ ಮಾರ್ಗ ನಕ್ಷೆ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಮಾರ್ಗದುದ್ದಕ್ಕೂ ಭದ್ರತೆ ಯಾಕೆ ನೀಡಲಿಲ್ಲ? ಪಟ್ಟಣದಲ್ಲಿದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ? ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40 ಕಿ.ಮೀ. ದೂರದಲ್ಲಿದ್ದ ಹೆಚ್ಚಿನ ಸಿಬ್ಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ? ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್ಐಆರ್‌ನಲ್ಲಿ ಆರೋಪಿ 1 ಮಾಡಿರುವುದೇಕೆ ಎಂದು ಕೇಳಿದ್ದಾರೆ.

ಎ-1 ನಿಂದ ಎ-23ರವರೆಗೆ ಕೇವಲ ಹಿಂದೂಗಳ ಮೇಲೆ ಎಫ್ಐಆರ್ ಮಾಡಿ ನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ನ್ಯಾಯ? ಗಲಭೆಕೋರರನ್ನು ರಕ್ಷಿಸಲು ಸರ್ಕಾರ ಮುಂದಾಗಿರುವುದು ತುಷ್ಟೀಕರಣದ ಪರಮಾವಧಿ ಅಲ್ಲವೇ? ಇಷ್ಟಕ್ಕೂ ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ? ಪೆಟ್ರೋಲ್ ಬಾಂಬ್, ಕಲ್ಲುಗಳ ರಾಶಿ, ತಲ್ವಾರ್ ಹಾಗೂ ಮಾರಕಾಸ್ತ್ರಗಳನ್ನು ಮಸೀದಿಯಲ್ಲಿ ಸಂಗ್ರಹಿಸಿ ದಾಂಧಲೆ ಆರಂಭಿಸಿದ್ದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟ ಅಲ್ಲವೇ ಎಂದಿದ್ದಾರೆ.

ಗಲಭೆಯಲ್ಲಿ ಅಪಾಯಕಾರಿ ವಸ್ತುಗಳ ಬಳಕೆಯಾದರೂ 25 ಕೋಟಿ ರು. ಮೊತ್ತದ ಆಸ್ತಿ ನಷ್ಟವಾದರೂ, ಗೃಹ ಸಚಿವರಿಗೆ ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣವೇನು? ಅವರಿಗೆ ಆ ರೀತಿ ಮಾಹಿತಿ ನೀಡಿದವರು ಯಾರು? ಈ ರೀತಿ ಹೇಳಲು ಅವರ ಮೇಲೆ ಯಾರದ್ದಾದರೂ ಒತ್ತಡವಿತ್ತೆ? ಕಾಂಗ್ರೆಸ್ ಸರ್ಕಾರ ಯಾರನ್ನಾದರೂ ರಕ್ಷಿಸಲು ಹೊರಟಿದೆಯೇ? ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿ.ಮೀ. ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವರು ಇನ್ನೂ ಭೇಟಿ ನೀಡಿಲ್ಲವೇಕೆ ಎಂದು ಅವರು ಪ್ರಕಟಣೆ ಮೂಲಕ ಟೀಕಿಸಿದ್ದಾರೆ.

ಮುಸ್ಲಿಂರ ಕೈಯಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳಿ; ಇಲ್ಲದಿದ್ರೆ ನಾವೂ ಹಿಡಿಯುತ್ತೇವೆ: ಪ್ರತಾಪ್ ಸಿಂಹ

ಹಿಂದೂಗಳ ವಿರುದ್ಧವೇ ತಪ್ಪು ಎಫ್ಐಆರ್ ದಾಖಲಿಸಲು ಕಾರಣರಾದ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕು. ಎಫ್ಐಆರ್‌ನಲ್ಲಿ ಕೇವಲ ಹಿಂದೂಗಳನ್ನು ಗುರಿಯಾಗಿಸುವ ಹುನ್ನಾರ ಕೈಬಿಡದಿದ್ದರೆ ನಾಗಮಂಗಲದಲ್ಲಿ ಬಿಜೆಪಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

click me!