
ಬೆಂಗಳೂರು (ಜೂ.30) ಬಿಬಿಎಂಪಿಯ ವ್ಯಾಪ್ತಿಯ 243 ವಾರ್ಡ್‌ಗಳ ಪೈಕಿ 225 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಕಾರ್ಯಾರಂಭಗೊಂಡಿವೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ ತ್ರಿಲೋಕಚಂದ್ರ ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರವು ಬಿಬಿಎಂಪಿಯ 243 ವಾರ್ಡ್ ಸೇರಿದಂತೆ ರಾಜ್ಯಾದ್ಯಂತ 438 ನಮ್ಮ ಕ್ಲಿನಿಕ್(Namma clinic) ಆರಂಭಿಸುವುದಕ್ಕೆ ಯೋಜನೆ ರೂಪಿಸಲಾಗಿತ್ತು. ಈ ಪೈಕಿ ಬೆಂಗಳೂರಿನ 108 ವಾರ್ಡ್‌ಗಳಲ್ಲಿ ಕಳೆದ ಜನವರಿಯಲ್ಲಿ ನಮ್ಮ ಕ್ಲಿನಿಕ್‌ಗಳಿಗೆ ಚಾಲನೆ ನೀಡಲಾಗಿತ್ತು. ಬಾಕಿ ಉಳಿದ ವಾರ್ಡ್‌ಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡು ಇದೀಗ ಒಟ್ಟು 225 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗಿದೆ.
ಬೆಂಗಳೂರಲ್ಲಿ ಒಂದೇ ದಿನ 108 ‘ನಮ್ಮ ಕ್ಲಿನಿಕ್’ ಶುರು
ನಮ್ಮ ಕ್ಲಿನಿಕ್ ಆರಂಭದಲ್ಲಿ ವೈದ್ಯರ ಕೊರತೆ ಉಂಟಾಗಿತ್ತು. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ನೇಮಕ ಮಾಡಿಕೊಂಡು ಈವರೆಗೆ ಒಟ್ಟು 225 ನಮ್ಮ ಕ್ಲಿನಿಕ್‌ಗಳನ್ನು ಕಾರ್ಯಾರಂಭಗೊಳಿಸಲಾಗಿದೆ. ಒಟ್ಟು 225 ನಮ್ಮ ಕ್ಲಿನಿಕ್‌ಗಳಿಗೆ 221 ನರ್ಸ್‌ಗಳು, 222 ವೈದ್ಯರು, 223 ಲ್ಯಾಬ್ ಟೆಕ್ನಿಷಿಯನ್ ಹಾಗೂ 232 ಮಂದಿ ಡಿ ಗ್ರೂಪ್ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲಾಗಿದೆ. ಉಳಿದ ನಮ್ಮ ಕ್ಲಿನಿಕ್ ಆರಂಭಿಸುವುದಕ್ಕೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತ್ರಿಲೋಕಚಂದ್ರ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.
2.29 ಲಕ್ಷ ಮಂದಿ ಭೇಟಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ನಮ್ಮ ಕ್ಲಿನಿಕ್ ಆರಂಭಿಸಿದ ಬಳಿಕ ಈವರೆಗೆ ಒಟ್ಟು 2,29, 473 ಮಂದಿ ಭೇಟಿ ನೀಡಿ ತಪಾಸಣೆಗೆ ಒಳಪಟ್ಟು ವೈದ್ಯರಿಂದ ಅಗತ್ಯ ಸಲಹೆ, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಪೈಕಿ 87,055 ಮಂದಿ ವಿವಿಧ ರೋಗ ಪರೀಕ್ಷೆಗಳಿಗೆ ಒಳಗಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.)
Namma metro: ವರ್ಷಾಂತ್ಯಕ್ಕೆ ಯೆಲ್ಲೋ ಮೆಟ್ರೋ ಶುರು?
ವಲಯವಾರು ನಮ್ಮ ಕ್ಲಿನಿಕ್ ಮತ್ತು ರೋಗಿಗಳ ಮಾಹಿತಿ
ವಲಯ ವಾರ್ಡ್ ಸಂಖ್ಯೆ ಆರಂಭವಾದ ನಮ್ಮ ಕ್ಲಿನಿಕ್ ರೋಗಿಗಳ ಭೇಟಿ ಸಂಖ್ಯೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ