
ಬೆಂಗಳೂರು (ಜೂ.26) ನಮ್ಮ ಮೆಟ್ರೋ ಬೆಂಗಳೂರಿನ ಟ್ರಾಫಿಕ್ ನಡುವೆ ತಕ್ಕ ಸಮಯಕ್ಕೆ ಉದ್ದೇಶಿತ ಸ್ಥಳ ತಲುಪಲು ಸಾಧ್ಯವಾಗುವ ಸಾರಿಗೆ ವ್ಯವಸ್ಥೆ. ಹೀಗಾಗಿ ಬಹುತೇಕ ಜನರು ನಮ್ಮ ಮೆಟ್ರೋ ಅವಲಂಬಿಸಿದ್ದಾರೆ. ಆದರೆ ನಮ್ಮ ಮೆಟ್ರೋದಲ್ಲಿ ಸಮಸ್ಯೆಗಳು ಮುಗಿಯುತ್ತಿಲ್ಲ. ದಿನಕ್ಕೊಂದು ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡು ಪ್ರಯಾಣಿಕರು ಹೈರಾಣಾಗುತ್ತಿದ್ದಾರೆ. ಕಳೆದೆರಡು ದಿನ ಸತತವಾಗಿ ನಮ್ಮ ಮೆಟ್ರೋದಲ್ಲಿ ಸಮಸ್ಯೆ ಕಾಣಿಸಿಕೊಂಡು ಕೆಟ್ಟು ನಿಂತ ಘಟನೆ ನಡೆದಿದೆ. ಪ್ರಮುಖ ಸಮಯದಲ್ಲೇ ಮೆಟ್ರೋ ಕೈಕೊಟ್ಟು ಪ್ರಯಾಣಿಕರು ಪರದಾಡುವ ಸ್ಥಿತಿ ಎದುರಾಗಿದೆ.
ರೈಲ್ವೇ ಹಳಿ, ಮೆಟ್ರೋ ರೈಲು, ಸಿಗ್ನಲಿಂಗ್ ವೈಫಲ್ಯತೆ ಸೇರಿದಂತೆ ನೂರೆಂಟು ಸಮಸ್ಯೆಗಳು ಮೆಟ್ರೋ ಪ್ರಯಾಣಿಕರನ್ನು ಹೈರಾಣಾಗುವಂತೆ ಮಾಡಿದೆ. 2024 ರಿಂದ 2026ರ ಈ ವರೆಗೆ ನಮ್ಮ ಮೆಟ್ರೋದಲ್ಲಿ 21 ಬಾರಿ ಸಮಸ್ಯೆ ಕಾಣಿಸಿಕೊಂಡು ಕೆಟ್ಟು ನಿಂತಿದೆ. ಪ್ರಯಾಣ ನಡುವೆ ಮೆಟ್ರೋ ಸಮಸ್ಯೆ ಕಾಣಿಸಿಕೊಂಡು ಪ್ರಯಾಣಿಕರು ಅರ್ಧ ದಾರಿಯಲ್ಲೇ ಇಳಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಪದೇ ಪದೇ ತಾಂತ್ರಿಕ ದೋಷ ಕಾಣಿಸಿಕೊಳ್ತಿರುವ ಹಿನ್ನೆಲೆ ಪ್ರಯಾಣಿಕರಲ್ಲಿ ಆತಂಕ ಹೆಚ್ಚಾಗಿದೆ. ಪ್ರಮುಖವಾಗಿ ಹಳಿ ಮೆಟ್ರೋ ನಮ್ಮ ಮೆಟ್ರೋ ಪ್ರಯಾಣಿಕರ ನಿದ್ದೆ ಗೆಡಿಸುತ್ತಿದೆ. ಕಳೆದ 3 ವರ್ಷಗಳಲ್ಲಿ 11 ಬಾರಿ ಹಳದಿ ಮಾರ್ಗದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ನಿನ್ನೆ (ಜೂ.25) ಸಂಜೆ ನೇರಳೆ ಮಾರ್ಗದಲ್ಲಿ ಮೆಟ್ರೋ ಸಮಸ್ಯೆಯಾಗಿದೆ. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಬಾಗಿಲುಗಳು ಕ್ಲೂಸ್ ಆಗದೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಪರಿಣಾಮ ಮೆಟ್ರೋ ಸಂಚಾರ ವ್ಯತ್ಯಯವಾಗಿತ್ತು. 10 ನಿಮಿಷಗಳ ಕಾಲ ಮೆಟ್ರೋ ಸಮಸ್ಯೆ ಎದುರಿಸಿತ್ತು. ವೈಟ್ ಫೀಲ್ಡ್ ನಿಂದ ಚಲ್ಲಘಟ್ಟ ಕಡೆ ಹೋಗುತಿದ್ದ ಮೆಟ್ರೋ, ಸುಮಾರು 7.50 ಕ್ಕೆ ಕಬ್ಬನ್ ಪಾರ್ಕ್ ಬಳಿ ಬಂದಾಗ ಸಮಸ್ಯೆ ಕಾಣಿಸಿಕೊಂಡಿದೆ. ಪರಿಣಾಮ ಈ ಹಿನ್ನೆಲೆ ವೈಟ್ ಫೀಲ್ಡ್ ಕಡೆಯಿಂದ ಬರುತಿದ್ದ ಎಲ್ಲಾ ಮೆಟ್ರೋ ವ್ಯತ್ಯಯವಾಗಿದೆ. 10 ನಿಮಿಷಗಳ ಬಳಿಕ ಮೆಟ್ರೋ ತಾಂತ್ರಿಕ ಸಮಸ್ಯೆ ಬಗೆ ಹರಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ