ಇದೀಗ ಆಸ್ಟ್ರೇಲಿಯಾ, ಸೌದಿ, ಅಮೆರಿಕಕ್ಕೂ ನಂದಿನಿ ತುಪ್ಪ ರಫ್ತು: ಸಿದ್ದರಾಮಯ್ಯ ಹಸಿರು ನಿಶಾನೆ

Published : Nov 26, 2025, 06:39 AM IST
Nandini ghee

ಸಾರಾಂಶ

ಕೆಎಂಎಫ್‌ ಮೊದಲ ಬಾರಿಗೆ 14 ಮೆಟ್ರಿಕ್‌ ಟನ್‌ ನಂದಿನಿ ತುಪ್ಪವನ್ನು ಅಮೆರಿಕ, ಆಸ್ಟ್ರೇಲಿಯಾ ಮತ್ತು ಸೌದಿ ಅರೇಬಿಯಾ ದೇಶಗಳಿಗೆ ರಫ್ತು ಮಾಡುತ್ತಿದ್ದು, ಈ ‘ನಂದಿನಿ ತುಪ್ಪದ ವಾಹನ’ಕ್ಕೆ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಿದರು.

ಬೆಂಗಳೂರು (ನ.26): ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಮೊದಲ ಬಾರಿಗೆ 14 ಮೆಟ್ರಿಕ್‌ ಟನ್‌ ನಂದಿನಿ ತುಪ್ಪವನ್ನು ಅಮೆರಿಕ, ಆಸ್ಟ್ರೇಲಿಯಾ ಮತ್ತು ಸೌದಿ ಅರೇಬಿಯಾ ದೇಶಗಳಿಗೆ ರಫ್ತು ಮಾಡುತ್ತಿದ್ದು, ಈ ‘ನಂದಿನಿ ತುಪ್ಪದ ವಾಹನ’ಕ್ಕೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಿದರು. ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಂದಿನಿ ತುಪ್ಪ ಸಾಗಿಸುವ ವಾಹನಕ್ಕೆ ಚಾಲನೆ ನೀಡಿ ಮಾತನಾಡಿ, ಕರ್ನಾಟಕದ ನಂದಿನಿ ತುಪ್ಪಕ್ಕೆ ದೇಶ, ವಿದೇಶಗಳಲ್ಲೂ ಬೇಡಿಕೆ ಹೆಚ್ಚುತ್ತಿದೆ. ಆಸ್ಟ್ರೇಲಿಯಾ, ಅಮೆರಿಕ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ನಂದಿನಿ ತುಪ್ಪ ರಫ್ತು ಮಾಡಲಾಗುತ್ತಿದೆ ಎಂದರು.

ಮೂಲತಃ ಮೈಸೂರು ಜಿಲ್ಲೆಯ ಕುಮಾರ ಎಂಬುವರು ಅಮೆರಿಕದಲ್ಲಿ ನೆಲೆಸಿದ್ದು, ಕೆಎಂಎಫ್‌ ಏಜೆನ್ಸಿ ಪಡೆದಿದ್ದಾರೆ. ಅತ್ಯುತ್ತಮ ಗುಣಮಟ್ಟದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ದೇಶ, ವಿದೇಶಗಳಲ್ಲಿ ಬೇಡಿಕೆ ಹೆಚ್ಚುತ್ತಿರುವುದು ಸಂತಸದ ಸಂಗತಿ. ಈ ಮೂಲಕ ರೈತರ ಸಂಸ್ಥೆ ಗುಣಮಟ್ಟದ ಹಾಲಿನ ಉತ್ಪನ್ನ ಮಾರಾಟ ಮಾಡುತ್ತಿದ್ದು, ರೈತರ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಕೆಎಂಎಫ್‌ ಮಾರುಕಟ್ಟೆ ವಿಸ್ತರಿಸುತ್ತಿದ್ದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.

ನಕಲಿ ತುಪ್ಪ ಮಾರಾಟಕ್ಕೆ ಕಡಿವಾಣ

ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್‌ ಮಾತನಾಡಿ, ನಂದಿನಿ ಹಾಲು, ತುಪ್ಪ, ಐಸ್ ಕ್ರೀಂ, ಸಿಹಿ ತಿನಿಸುಗಳಿಗೆ ಬೇಡಿಕೆ ಬಂದಿದೆ. ದುಬೈನಲ್ಲೂ ನಂದಿನಿ ಐಸ್ ಕ್ರೀಂಗೆ ಬೇಡಿಕೆ ಇದೆ. ಕರ್ನಾಟಕದವರೇ ಅಮೆರಿಕ, ಆಸ್ಟ್ರೇಲಿಯಾದಲ್ಲಿ ಏಜೆನ್ಸಿ ಮಾಡಿದ್ದು ಮಾರುಕಟ್ಟೆ ವಿಸ್ತರಣೆಗೆ ಸಹಕಾರಿಯಾಗಿದೆ ಎಂದ ಅವರು, ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟಕ್ಕೆ ಕಡಿವಾಣ ಹಾಕಲಾಗಿದೆ. ನಕಲಿ ತುಪ್ಪ ಮಾರುತ್ತಿರುವ ದೂರುಗಳು ಬಂದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!