ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್​ ತಪ್ಪಿಸುತ್ತಿದ್ದವರಿಗೆ ಬಿಗ್‌ಶಾಕ್!

Published : Feb 08, 2025, 12:01 PM IST
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್​ ತಪ್ಪಿಸುತ್ತಿದ್ದವರಿಗೆ ಬಿಗ್‌ಶಾಕ್!

ಸಾರಾಂಶ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದೆ. ಎಕ್ಸ್‌ಪ್ರೆಸ್ ವೇನಲ್ಲಿ ಟೋಲ್ ಕಟ್ಟದೆ ಹಾಗೆಯೇ ಸರ್ವೀಸ್‌ ರಸ್ತೆಯಲ್ಲಿ ಹೋಗುತ್ತಿದ್ದ ಸವಾರರಿಗೆ ಬ್ರೇಕ್‌ ಹಾಕಲು ಬಿಡದಿ ಬಳಿಯ ನಿರ್ಗಮನ (ಎಕ್ಸಿಟ್) ರಸ್ತೆಯನ್ನು ಬಂದ್ ಮಾಡಲಾಗಿದೆ.   

ರಾಮನಗರ (ಫೆ.08): ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದೆ. ಎಕ್ಸ್‌ಪ್ರೆಸ್ ವೇನಲ್ಲಿ ಟೋಲ್ ಕಟ್ಟದೆ ಹಾಗೆಯೇ ಸರ್ವೀಸ್‌ ರಸ್ತೆಯಲ್ಲಿ ಹೋಗುತ್ತಿದ್ದ ಸವಾರರಿಗೆ ಬ್ರೇಕ್‌ ಹಾಕಲು ಬಿಡದಿ ಬಳಿಯ ನಿರ್ಗಮನ (ಎಕ್ಸಿಟ್) ರಸ್ತೆಯನ್ನು ಬಂದ್ ಮಾಡಲಾಗಿದೆ. ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಇದ್ದ ಸಂಪರ್ಕವನ್ನು ಕಡಿತಗೊಳಿಸಿದೆ. ಮೈಸೂರಿನಿಂದ ಬರುತ್ತಿದ್ದ ವಾಹನ ಸವಾರರು ಬಿಡದಿಯಿಂದ ಮುಂದೆ ಸರ್ವೀಸ್‌ ರಸ್ತೆಗೆ ಇಳಿದು ಟೋಲ್‌ ತಪ್ಪಿಸಿಕೊಳ್ಳುತ್ತಿದ್ದರು. 

ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸಿ ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟದೇ ಸರ್ವೀಸ್ ರಸ್ತೆ ಮೂಲಕ ಬೆಂಗಳೂರು ತಲುಪುತ್ತಿದ್ದರು. ಹೀಗಾಗಿ, ಟೋಲ್‌ ತಪ್ಪಿಸುವ ವಾಹನಗಳಿಗೆ ಕಡಿವಾಣ ಹಾಕಲು ಹೆದ್ದಾರಿ ಪ್ರಾಧಿಕಾರ ಪ್ರವೇಶಕ್ಕೆ ಮಾತ್ರ ಅವಕಾಶ ಕೊಟ್ಟು, ನಿರ್ಮಗನ ರಸ್ತೆಯನ್ನು ಬಂದ್‌ ಮಾಡಿದೆ. ಇದೀಗ ಸರ್ವಿಸ್ ರಸ್ತೆಯನ್ನೇ ಬಂದ್ ಮಾಡಿದ್ದರಿಂದ ಬೆಂಗಳೂರಿಗೆ ಬರುವ ವಾಹನ ಸವಾರರು ಶೇಷಗಿರಿಹಳ್ಳಿ ಬಳಿ ಟೋಲ್ ಪಾವತಿಸಿಯೇ ಬರಬೇಕಾದ ಅನಿವಾರ್ಯತೆ ಎದುರಾಗಿದೆ. ಹೆದ್ದಾರಿ ಪ್ರಾಧಿಕಾರದ ಈ ನಡೆಗೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

ಜಾರಿಯಾಗುತ್ತಿದೆ ಹೊಸ ಟೋಲ್ ಟ್ಯಾಕ್ಸ್ ಸ್ಮಾರ್ಟ್ ಕಾರ್ಡ್; ಇದು ವರವೋ? ಹೊಸ ರೀತಿಯ ತೆರಿಗೆಯೋ?

ಬಿಡದಿ ಬಳಿ ಎಕ್ಸಿಟ್‌ ಬಂದ್‌: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದೆ. ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಕಟ್ಟದೆ ಎಸ್ಕೇಪ್‌ ಆಗುವುದನ್ನು ತಪ್ಪಿಸಲು ಬಿಡದಿ ಬಳಿಯ ನಿರ್ಗಮನ (ಎಕ್ಸಿಟ್) ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಂದ್ ಮಾಡಿದೆ. ಈ ಮೂಲಕ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಇದ್ದ ಸಂಪರ್ಕವನ್ನು ಕಡಿತಗೊಳಿಸಿದೆ. ಮೈಸೂರಿನಿಂದ ಬರುತ್ತಿದ್ದ ವಾಹನ ಸವಾರರು ಬಿಡದಿಯಿಂದ ಮುಂದೆ ಸರ್ವೀಸ್‌ ರಸ್ತೆಗೆ ಇಳಿದು ಟೋಲ್‌ ತಪ್ಪಿಸಿಕೊಳ್ಳುತ್ತಿದ್ದರು. ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸಿ ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟದೇ ಸರ್ವೀಸ್ ರಸ್ತೆ ಮೂಲಕ ಬೆಂಗಳೂರು ತಲುಪುತ್ತಿದ್ದರು. 

ಹೀಗಾಗಿ ಟೋಲ್‌ ತಪ್ಪಿಸುವ ವಾಹನಗಳಿಗೆ ಕಡಿವಾಣ ಹಾಕಲು ಹೆದ್ದಾರಿ ಪ್ರಾಧಿಕಾರ ಎಂಟ್ರಿಗೆ ಮಾತ್ರ ಅವಕಾಶ ಕೊಟ್ಟು, ಎಕ್ಸಿಟ್‌ ರಸ್ತೆಯನ್ನು ಬಂದ್‌ ಮಾಡಿದೆ. ಇದೀಗ ಇದಕ್ಕೆ ಹೆದ್ದಾರಿ ಪ್ರಾಧಿಕಾರ ಸರ್ವಿಸ್ ರಸ್ತೆಯನ್ನೇ ಬಂದ್ ಮಾಡಿದೆ. ಹೀಗಾಗಿ ಬೆಂಗಳೂರಿಗೆ ಬರುವ ವಾಹನ ಸವಾರರು ಶೇಷಗಿರಿಹಳ್ಳಿ ಟೋಲ್ ಪಾವತಿಸಿ ಬರಬೇಕಾದ ಅನಿವಾರ್ಯತೆ ಎದುರಾಗಿದೆ. ಹೆದ್ದಾರಿ ಪ್ರಾಧಿಕಾರದ ನಡೆಗೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಸೂಚನಾ ಫಲಕವನ್ನೂ ಅಳವಡಿಸದೆ ಏಕಾಏಕಿ ಎಕ್ಸಿಟ್‌ ರಸ್ತೆಯನ್ನು ಬಂದ್‌ ಮಾಡಿರುವುದು ಸರಿಯಲ್ಲ. ರಾಮನಗರದಿಂದ ಬೆಂಗಳೂರಿಗೆ ಹೋಗುವುದಕ್ಕೂ ದುಬಾರಿ ಟೋಲ್ ಕಟ್ಟಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

ದಿವ್ಯಾಂಗ ಮಹಿಳೆಗೆ 40 ರೂಪಾಯಿ ಟೋಲ್‌ ಚಾರ್ಜ್‌ ಹಾಕಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಭಾರೀ ದಂಡ!

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ ನಲ್ಲಿ ಟೋಲ್ ಶುಲ್ಕ ವಿಚಾರವಾಗಿ ಸಾಕಷ್ಟು ಅಡೆತಡೆಗಳು ಎದುರಾಗಿದ್ದವು. ಸರ್ವಿಸ್ ರಸ್ತೆ ಪೂರ್ಣಗೊಳಿಸದೆ ಟೋಲ್ ವಿಧಿಸಬಾರದೆಂದು ವಿವಿಧ ಸಂಘಟನೆಗಳು ಮಾತ್ರವಲ್ಲದೆ ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಇದರ ನಡುವೆಯೂ ಟೋಲ್ ಶುಲ್ಕ ಸಂಗ್ರಹಣೆ ಆರಂಭವಾದ ಬಳಿಕ ಮೂರು ಬಾರಿ ಪರಿಷ್ಕರಣೆಗೆ ಒಳಪಟ್ಟಿತು. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ 2023 ಜು.1 ರಿಂದ ಪೂರ್ಣ ಪ್ರಮಾಣದ ಟೋಲ್ ಸಂಗ್ರಹಣೆ ಆರಂಭವಾಗಿತ್ತು. ರಾಜ್ಯದಲ್ಲಿರುವ ಬೇರೆ ರಾಷ್ಟ್ರೀಯ ಹೆದ್ದಾರಿಗಳಿಗೆ ಹೋಲಿಕೆ ಮಾಡಿದಲ್ಲಿ ಬೆಂಗಳೂರು – ಮೈಸೂರು ನಡುವಿನ ಎಕ್ಸ್ ಪ್ರೆಸ್ ವೇ ಅತ್ಯಂತ ಕಡಿಮೆ ಅವಧಿಯಲ್ಲಿಯೇ ಕಣ್ಮಣಿಕೆ – ಶೇಷಗಿರಿಹಳ್ಳಿ ಟೋಲ್ ನಲ್ಲಿ 278.91 ಕೋಟಿ ರು. ಸಂಗ್ರವಾಗಿತ್ತು. ಇನ್ನು 2024-25ನೇ ಸಾಲಿನಲ್ಲಿ 167.32 ಕೋಟಿ ರು. ಟೋಲ್ ಶುಲ್ಕ ವಸೂಲಿಯಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ಜನ್ಮದಿನದಂದೇ ಹೆಚ್‌ಡಿಕೆ ತೋಳಿಗೆ ಬಂತು ದೈವಿ ಶಕ್ತಿ! 'ಶಿವ ತಾಯತ' ಕಟ್ಟಿದ ಬಿಜೆಪಿ ಕಾರ್ಯಕರ್ತರು!