
ಬೆಂಗಳೂರು(ಆ.14): ಫೇಸ್‌ಬುಕ್‌ನಲ್ಲಿ ಇಸ್ಲಾಂ ಧರ್ಮಗುರು ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಸಲುವಾಗಿ ಆರೋಪಿ ನವೀನ್‌ನನ್ನು ಸಿಸಿಬಿ ಐದು ದಿನಗಳ ಕಾಲ ವಶಕ್ಕೆ ಪಡೆದಿದೆ.
"
ಫೇಸ್‌ಬುಕ್‌ನಲ್ಲಿ ನವೀನ್ ವಿವಾದಾತ್ಮಕ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ಗಲಭೆಗೆ ಕಾರಣವಾಗಿತ್ತು. ಮಂಗಳವಾರ ರಾತ್ರಿ ಸಿಸಿಬಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ತನಿಖೆ ಸಲುವಾಗಿ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಗಲಭೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ನವೀನ್ ಹತ್ಯೆಗೆ ಸಂಚು?
ತನ್ನದೇ ಸ್ಥಾನಮಾನಕ್ಕೆ ಯತ್ನ:
ಹಲವು ದಿನಗಳಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ರೀತಿಯ ಪೋಸ್ಟ್‌ಗಳನ್ನು ನವೀನ್ ಹಾಕುತ್ತಿದ್ದ. ಇತ್ತೀಚಿಗೆ ತಮ್ಮ ಸೋದರ ಮಾವ, ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರೊಂದಿಗೆ ದೂರವಾಗಿದ್ದ ನವೀನ್, ತನ್ನದೇ ರಾಜಕೀಯ ಸ್ಥಾನ ಪಡೆಯಲು ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ನವೀನ್ ಯಾವ ಪಕ್ಷದಲ್ಲಿದ್ದ ಎಂಬ ಬಗ್ಗೆ ತೀವ್ರ ಚರ್ಚೆ ಉಂಟಾಗಿದೆ. ಆತನ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪರಸ್ಪರ ಟೀಕೆ ಮಾಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ