* ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯ
* ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸಲು ಕೇಂದ್ರದ ಬೇಜವಾಬ್ದಾರಿ ಕಾರಣ
* ಭಾರತ ಮಾತ್ರ ಯುದ್ಧ ಶುರುವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ
ಬೆಂಗಳೂರು(ಮಾ.03): ಉಕ್ರೇನ್‌ನಲ್ಲಿ ಭಾರತೀಯರು ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರದ ಬೇಜವಾಬ್ದಾರಿ ಕಾರಣ. ಇವರ ನಿರ್ಲಕ್ಷ್ಯದಿಂದಲೇ ಕರ್ನಾಟಕದ(Karnataka) ವಿದ್ಯಾರ್ಥಿ ನವೀನ್(Naveen) ಪ್ರಾಣ ಕಳೆದುಕೊಂಡರು. ಹೀಗಿದ್ದರೂ ನರೇಂದ್ರ ಮೋದಿ ಸರ್ಕಾರ ಭಾರತೀಯರನ್ನು ಕರೆತರುವ ಕಾರ್ಯಾಚರಣೆಗೂ ಗಂಗಾ ನದಿಯ ಹೆಸರಿಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ. ಇದು ಅವರ ರಾಜಕೀಯದ ದುರ್ಬುದ್ಧಿಗೆ ಸಾಕ್ಷಿ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಯುದ್ಧಗ್ರಸ್ತ ಉಕ್ರೇನ್‌ನಲ್ಲಿ ಸಂಕಷ್ಟಕ್ಕೆ ಈಡಾಗಿರುವ ಭಾರತೀಯರು(Indians) ಮುಖ್ಯವಾಗಿ ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸಲು ಕೇಂದ್ರದ ಬೇಜವಾಬ್ದಾರಿ ಕಾರಣ. ಕಳೆದ ಕೆಲವು ತಿಂಗಳುಗಳಿಂದ ಉಕ್ರೇನ್ ಮತ್ತು ರಷ್ಯಾ ನಡುವೆ ಯಾವುದೇ ಕ್ಷಣದಲ್ಲಿ ಯುದ್ಧ ಸ್ಫೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ವಿಶ್ವದ ಹಲವಾರು ದೇಶಗಳು ಅಲ್ಲಿರುವ ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿತ್ತು. ಆದರೆ ಭಾರತ(India) ಮಾತ್ರ ಯುದ್ಧ(War) ಶುರುವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ತನ್ನನ್ನು ವಿಶ್ವಗುರು ಎಂದು ಕೊಂಡಾಡುತ್ತಾ ಭಕ್ತರು ನಡೆಸುತ್ತಿರುವ ಬಹುಪರಾಕ್ ಭಜನೆಗೆ ಪ್ರಧಾನಿಯವರು ತಲೆ ತೂಗುತ್ತಾ ಕಾಲಹರಣ ಮಾಡಿದರೇ ವಿನಹ ಯುದ್ಧಗ್ರಸ್ತ ಉಕ್ರೇನ್‌ನಲ್ಲಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಗಮನ ನೀಡಲೇ ಇಲ್ಲ ಎಂದು ಕಿಡಿ ಕಾರಿದ್ದಾರೆ.
Harsha Murder Case: 'ಸಿದ್ದರಾಮಯ್ಯ ಅಲ್ಲ, ಸಿದ್ದರಾಮ ಮುಲ್ಲಾ...'
ನಮ್ಮೊಳಗಿನ ರಾಜಕೀಯ ಭಿನ್ನಾಭಿಪ್ರಾಯಗಳು, ಸೈದ್ಧಾಂತಿಕ ವ್ಯತ್ಯಾಸಗಳು ಏನೇ ಇದ್ದರೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯವಾಗಿದೆ. ಈ ಕರ್ತವ್ಯ ಪ್ರಜ್ಞೆಯಿಂದಾಗಿ ಕೇಂದ್ರ ಸರ್ಕಾರದ ವೈಫಲ್ಯಗಳ ಪಟ್ಟಿಯನ್ನು ಪೂರ್ಣವಾಗಿ ನೀಡಲು ನಾನು ಬಯಸುವುದಿಲ್ಲ. ಉಕ್ರೇನ್(Ukraine) ಮತ್ತು ರಷ್ಯಾ(Russia) ನಡುವಿನ ಈಗಿನ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ(Government of India) ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಲೇ ಬೇಕಾಗುತ್ತದೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ಜವಾಬ್ದಾರಿ ಮರೆತು ವರ್ತಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯುದ್ಧ ನಡೆಯುತ್ತಿರುವ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚರಣೆ ಭಾರತಕ್ಕೆ ಹೊಸದೇನಲ್ಲ. ಹಿಂದೆಯೂ ಗಲ್ಪ್ ಯುದ್ಧ ನಡೆಯುತ್ತಿದ್ದಾಗ ಸುಮಾರು ಒಂದೂವರೆ ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿತ್ತು. ಲಿಬಿಯಾದ ಯುದ್ಧದ ಸಮಯದಲ್ಲಿ ಸುಮಾರು 15,000 ಮತ್ತು ಯೆಮನ್ ಯುದ್ಧ ಕಾಲದಲ್ಲಿ ಅಂದಾಜು 5,000 ಭಾರತೀಯರನ್ನು ಆಗಿನ ಕಾಂಗ್ರೆಸ್ ಸರ್ಕಾರ ಭಾರತಕ್ಕೆ ಕರೆತಂದಿತ್ತು. ಆಗಿನ ಕಾಂಗ್ರೆಸ್ ಸರ್ಕಾರ ಇಲ್ಲವೇ ಕಾಂಗ್ರೆಸ್ ಪಕ್ಷ ಆ ಕಾರ್ಯಚಾರಣೆ ಬಗ್ಗೆ ನರೇಂದ್ರ ಮೋದಿ(Narendra Modi) ಸರ್ಕಾರದಂತೆ ಪ್ರಚಾರ ಮಾಡಿ ಅದನ್ನು ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿರಲಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ
ರಾಮನಗರ: ಸರ್ಕಾರ ನಿಯಮ ಪಾಲನೆ, ನ್ಯಾಯಾಲಯ ಆದೇಶ ಪಾಲನೆ ಉದ್ದೇಶ ಹಾಗೂ ಜನರ ಆರೋಗ್ಯ ದೃಷ್ಟಿಯಿಂದ ಮೇಕೆದಾಟು ಪಾದಯಾತ್ರೆಯನ್ನ(Mekedatu Padayatra) ಸ್ಥಗಿತಗೊಳಿಸಿದ್ದೆವು. ಫೆ.27 ರಿಂದ ಐದು ದಿನ ಪಾದಯಾತ್ರೆಯನ್ನ ಆರಂಭಿಸಿದ್ದೇವೆ. ಈ ಯೋಜನೆ ನಾವು ಅಧಿಕಾದಲ್ಲಿದ್ದಾಗಲೇ ಡಿಪಿಆರ್ ಸಿದ್ದಪಡಿಸಿದ್ದವು. ಬಿಜೆಪಿ ಸರ್ಕಾರ ಹೆದರಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕಾಲ ಹರಣ ಮಾಡಿತೆಂದು ಸುಳ್ಳು ಜಾಹೀರಾತು ನೀಡುತ್ತಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹರಿಹಾಯ್ದಿದ್ದರು.