
ಕನ್ನಡಪ್ರಭ ವಾರ್ತೆ ಬೆಂಗಳೂರು (ಏ.13): ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಮುಸ್ಲಿಮರ ಬಂಡಾಯಕ್ಕೆ ಪರೋಕ್ಷ ಚಿತಾವಣೆ ಮಾಡಿದ ಆರೋಪ ನಜೀರ್ ಅಹ್ಮದ್ ವಿರುದ್ಧ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ತಲೆದಂಡಕ್ಕೆ ಹೈಕಮಾಂಡ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದರು ಎನ್ನಲಾಗಿದೆ.
ಭಾನುವಾರ ನಜೀರ್ ಅಹ್ಮದ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸಿದ್ದರಾಮಯ್ಯ ಚಿಕ್ಕಮಗಳೂರು ಪ್ರವಾಸದಲ್ಲಿ ಇದ್ದ ಕಾರಣ ಭೇಟಿ ಮಾಡಿಲ್ಲ. ಸೋಮವಾರ ಮುಖ್ಯಮಂತ್ರಿಗಳು ವಾಪಸ್ ಭೇಟಿ ಮಾಡುವ ಸಾಧ್ಯತೆಯಿದ್ದು, ಈ ವೇಳೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ