ಮಧ್ಯಮ ಹಂತದ ಪೊಲೀಸರಿಗೆ ಎನ್‌ಡಿಎ ಮಾದರಿ ತರಬೇತಿ: ಸಿಎಂ ಬೊಮ್ಮಾಯಿ

Published : Dec 12, 2022, 12:41 PM IST
ಮಧ್ಯಮ ಹಂತದ ಪೊಲೀಸರಿಗೆ ಎನ್‌ಡಿಎ ಮಾದರಿ ತರಬೇತಿ: ಸಿಎಂ ಬೊಮ್ಮಾಯಿ

ಸಾರಾಂಶ

ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ(ಎನ್‌ಡಿಎ) ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬೆಂಗಳೂರು (ಡಿ.12): ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ(ಎನ್‌ಡಿಎ) ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜಭವನದಲ್ಲಿ ಭಾನುವಾರ ನಡೆದ ವಿಶಿಷ್ಟಸೇವೆಗೈದ ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪೊಲೀಸ್‌ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ತಳ ಹಂತ ಪೊಲೀಸರು ಹಾಗೂ ಐಪಿಎಸ್‌ಗಳ ತರಬೇತಿ ಚೆನ್ನಾಗಿ ಆಗುತ್ತಿದೆ. ಆದರೆ ಮಧ್ಯಮ ಹಂತದಲ್ಲಿ ಪೊಲೀಸರ ತರಬೇತಿ ಇನ್ನೂ ಪರಿಣಾಮಕಾರಿಯಾಗಿ ಆಗಬೇಕಿದೆ. ಇದಕ್ಕೆ ಪ್ರತ್ಯೇಕ ತರಬೇತಿ ಸಂಸ್ಥೆ, ಪಠ್ಯ ಹಾಗೂ ವಿವಿಧ ಕೋರ್ಸುಗಳ ಮೂಲಕ ಅವರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸುವ ವ್ಯವಸ್ಥೆ ಮಾಡಬೇಕಿದೆ ಎಂದರು.

ಪ್ರತಿ ವಿಭಾಗಕ್ಕೆ 2 ಫೋರೆನ್ಸಿಕ್‌ ಲ್ಯಾಬ್‌: ಪೊಲೀಸ್‌ ವ್ಯವಸ್ಥೆಯನ್ನು ಬಹಳ ಆಧುನೀಕರಣ ಮಾಡಿದ್ದೇವೆ. ಫೋರೆನ್ಸಿಕ್‌ ಲ್ಯಾಬ್‌ ಆಧುನೀಕರಣ ಮಾಡಲಾಗಿದೆ. ಅಪರಾಧ ಶೋಧನೆಯಲ್ಲಿ ಆಧುನಿಕ ಫೋರೆನ್ಸಿಕ್‌ ಲ್ಯಾಬ್‌ನ ಅವಶ್ಯಕತೆಯಿದ್ದು, ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ಈ ಪ್ರಯೋಗಾಲಯ ಸ್ಥಾಪಿಸಲಾಗಿದೆ. ರಾಜ್ಯದ ಪ್ರತಿಯೊಂದು ವಿಭಾಗದಲ್ಲಿ ಕನಿಷ್ಠ ಎರಡು ಫೋರೆನ್ಸಿಕ್‌ ಲ್ಯಾಬ್‌ ಸ್ಥಾಪಿಸಬೇಕು ಎಂದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಮಾತನಾಡಿ, ದೇಶದ ಭದ್ರತೆ, ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹಾಗೂ ಜನರ ಸೇವೆಯಲ್ಲಿ ಪೊಲೀಸ್‌ ಇಲಾಖೆಯ ಸೈನಿಕರು ಮತ್ತು ಅಧಿಕಾರಿಗಳು ತೋರಿದ ಶೌರ್ಯ ಅನುಪಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್‌: ಸಿಎಂ ಸಭೆ ತೀರ್ಮಾನ

ಗೃಹ ಇಲಾಖೆಗೆ ಹೆಚ್ಚಿನ ಅನುದಾನ: ಪೊಲೀಸ್‌ ಇಲಾಖೆಯ ಸಿಬ್ಬಂದಿಗಳಿಗೆ ಉತ್ತಮ ವಾತಾವರಣ ಸೃಷ್ಟಿಸಲು ಹಾಗೂ ಇಲಾಖೆ ಬಲವರ್ಧನೆಗೆ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ. ಪ್ರಸಕ್ತ ವರ್ಷ ಸುಮಾರು 200 ಕೋಟಿ ರು. ವೆಚ್ಚದಲ್ಲಿ ಒಟ್ಟು 117 ಸುಸಜ್ಜಿತ ಪೊಲೀಸ್‌ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ರಾಜ್ಯ ಪೊಲೀಸರಿಗೆ ಅತ್ಯುತ್ತಮ ವಸತಿ ಸೌಲಭ್ಯ ಕಲ್ಪಿಸುವುದು, ಸೈಬರ್‌ ಕ್ರೈಂ ವಿಭಾಗದ ಬಲಪಡಿಸುವುದು ಸೇರಿ ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು. ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌, ನಗರ ಪೊಲೀಸ್‌ ಆಯುಕ್ತ ಸಿ.ಎಚ್‌.ಪ್ರತಾಪ್‌ ರೆಡ್ಡಿ ಉಪಸ್ಥಿತರಿದ್ದರು.

2ಎ ಮೀಸಲಾತಿ ಘೋಷಿಸದಿದ್ರೆ ಸುವರ್ಣಸೌಧಕ್ಕೆ ಮುತ್ತಿಗೆ: ಜಯಮೃತ್ಯುಂಜಯ ಶ್ರೀ

ಗುಜರಾತ್‌ ಸಿಎಂ ಶಪಥಕ್ಕೆ ಇಂದು ಬೊಮ್ಮಾಯಿ: ಸೋಮವಾರ ನಡೆಯಲಿರುವ ಗುಜರಾತ್‌ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರ ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟದ ಕೆಲವು ಸಚಿವರ ಜತೆ ಸೋಮವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುಜರಾತ್‌ನಲ್ಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ
ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!