NEET UG 2026 : ಇಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ; ರಾಜ್ಯದಲ್ಲಿ ಹೇಗಿದೆ ಸಿದ್ಧತೆ?

Kannadaprabha News   | Kannada Prabha
Published : May 03, 2026, 06:32 AM IST
NEET UG 2026

ಸಾರಾಂಶ

ಶಿವಮೊಗ್ಗ ಮತ್ತು ವಿಜಯಪುರದಲ್ಲಿ ನಡೆಯಲಿರುವ ನೀಟ್-ಯುಜಿ 2026 ಪರೀಕ್ಷೆಗೆ ಜಿಲ್ಲಾಡಳಿತಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪಾರದರ್ಶಕ ಮತ್ತು ಸುಸೂತ್ರ ಪರೀಕ್ಷೆಗಾಗಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.

ಶಿವಮೊಗ್ಗ ವಿಜಯಪುರ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET-UG 2026) ಮೇ 3 ರಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (ಪ್ರ) ಎನ್. ಹೇಮಂತ್ ತಿಳಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ನೀಟ್ ಪರೀಕ್ಷೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಶಿವಮೊಗ್ಗ ನಗರದ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಿದ್ದು, ಒಟ್ಟು 4577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.

ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪೂರೈಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಆಸನ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೇಂದ್ರದೊಳಗೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಗೂ ಸ್ಮಾರ್ಟ್ ವಾಚ್‌ಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಇಂತಹ ವಸ್ತುಗಳನ್ನು ತಂದಿದ್ದಲ್ಲಿ, ಅಭ್ಯರ್ಥಿಗಳ ಸ್ವಂತ ಜವಾಬ್ದಾರಿಯ ಮೇಲೆ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ನಿಯೋಜಿತ ಸಿಬ್ಬಂದಿ ಮಾತ್ರ ಹಾಜರಿರಲು ಅನುಮತಿ ನೀಡಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

ಇಂದು ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ವಿಜಯಪುರ: ನಗರದ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆಯು ಇಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಯಲ್ಲಿನ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಬೆಳಗ್ಗೆ 9.30ರಿಂದ ಪರೀಕ್ಷೆ ಮುಕ್ತಾಯವಾಗುವ ವರೆಗೆ ತೆರೆಯದಂತೆ ಆದೇಶಿಸಲಾಗಿದೆ. ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರರು ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಗೆ ಪರಂ ಆಕ್ರೋಶ, ಬಲಿಷ್ಠ ಆರ್ಥಿಕತೆ ಅಂತೀರಿ, ಜನರ ಮೇಲೆ ಹೊರೆ ಹಾಕುವುದೇಕೆ?
ಬಜೆಟ್‌ನ ಘೋಷಣೆಗಳೆಲ್ಲ ಮೇ ಅಂತ್ಯದೊಳಗೇ ಜಾರಿಯಾಗಬೇಕು: ಸಿಎಂ ವಾರ್ನಿಂಗ್!