
ಬೆಂಗಳೂರು (ಆ.27): ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ (Tibet Autonomous Region - TAR) ಉಂಟಾಗಿರುವ ಭೀಕರ ದಿಢೀರ್ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ ತಕ್ಷಣದ ಕ್ರಮ ಕೈಗೊಂಡಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ನಾಗರಿಕರ ಮಾಹಿತಿ ಸಂಗ್ರಹಿಸಲು ಮತ್ತು ಅವರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರವು ತುರ್ತು ಸಹಾಯವಾಣಿ ಹಾಗೂ ವಿಶೇಷ ಗೂಗಲ್ ಫಾರ್ಮ್ (Google Form) ಲಿಂಕ್ ಅನ್ನು ಬಿಡುಗಡೆ ಮಾಡಿದೆ.
ನೇಪಾಳ ಅಥವಾ ಟಿಬೆಟ್ ಭಾಗದಲ್ಲಿ ಸಿಲುಕಿರುವ ರಾಜ್ಯದ ಪ್ರವಾಸಿಗರು, ಯಾತ್ರಾರ್ಥಿಗಳು, ಅವರ ಕುಟುಂಬಸ್ಥರು ಹಾಗೂ ಟೂರ್ ಆಪರೇಟರ್‌ಗಳು ತಕ್ಷಣವೇ ಈ ಕೆಳಗಿನ ಮಾರ್ಗಗಳ ಮೂಲಕ ಮಾಹಿತಿ ಹಂಚಿಕೊಳ್ಳುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೋರಿದೆ.
ನೇಪಾಳ ಮತ್ತು ಟಿಬೆಟ್‌ನಲ್ಲಿ ಸಿಲುಕಿರುವವರ ವಿವರಗಳನ್ನು ತ್ವರಿತವಾಗಿ ಸರ್ಕಾರದ ಗಮನಕ್ಕೆ ತರಲು ವಿಶೇಷ ಲಿಂಕ್ ಒದಗಿಸಲಾಗಿದೆ. ಬಾಧಿತರ ಹೆಸರು, ಸಂಪರ್ಕ ಸಂಖ್ಯೆ, ಪ್ರಸ್ತುತ ಇರುವ ಸ್ಥಳ ಹಾಗೂ ತುರ್ತು ಅಗತ್ಯಗಳ ವಿವರಗಳನ್ನು ಈ ಫಾರ್ಮ್ ಮೂಲಕ ಭರ್ತಿ ಮಾಡಬಹುದು:
🔗 ಗೂಗಲ್ ಫಾರ್ಮ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ ಮಾಹಿತಿ ದಾಖಲಿಸಿ
ರಾಜ್ಯ ಸರ್ಕಾರ ಸಂಗ್ರಹಿಸುವ ಈ ಮಾಹಿತಿಯನ್ನು ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯ (MEA), ನೇಪಾಳದ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಚೀನಾದ ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಹಂಚಿಕೊಳ್ಳಲಾಗುತ್ತದೆ. ಇದರ ಮೂಲಕ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗರನ್ನು ರಕ್ಷಿಸಿ, ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು (Evacuation) ನಿರಂತರ ರಕ್ಷಣಾ ಕಾರ್ಯಾಚರಣೆ ಮತ್ತು ಅಗತ್ಯ ನೆರವನ್ನು ಸಂಯೋಜಿಸಲಾಗುತ್ತಿದೆ.
ಪ್ರವಾಹದಲ್ಲಿ ಸಿಲುಕಿರುವವರ ಕುಟುಂಬಸ್ಥರು ಆತಂಕಪಡದೆ, ಲಭ್ಯವಿರುವ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಅಥವಾ ಗೂಗಲ್ ಫಾರ್ಮ್ ಮೂಲಕ ನಿಖರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ