* ಕರ್ನಾಟಕದಲ್ಲಿ ಕೊರೋನಾ ಕೊಂಚ ಏರಿಕೆ
* 347 ಹೊಸ ಕೊರೋನಾ ಪ್ರಕರಣಗಳು ಪತ್ತೆ
* 10 ಮಂದಿ ಮಹಾಮಾರಿ ಕೊರೋನಾಗೆ ಬಲಿ
ಬೆಂಗಳೂರು, (ಅ.30): ಕರ್ನಾಟಕದಲ್ಲಿ (Karnataka) ಕೊರೋನಾ ಪಾಸಿಟಿವ್ ಕೇಸ್ ಹಾಗೂ ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡುಬಂದಿದ್ದು, ಇಂದು (ಅ.30) ಒಟ್ಟು 347 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 10 ಮಂದಿ ಸಾವನ್ನಪ್ಪಿದ್ದಾರೆ.
ಈ ಮೂಲಕ, ರಾಜ್ಯದಲ್ಲಿ ಕೊರೋನಾ ಸೋಂಕಿತರ (Coronavirus) ಸಂಖ್ಯೆ 29,88,041 ಕ್ಕೆ ಏರಿಕೆಯಾಗಿದ್ರೆ, ಸೋಂಕಿತರ ಪೈಕಿ 29,41,233 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಈವರೆಗೆ ಕೊರೋನಾದಿಂದ 38,071 ಜನ ಸಾವನ್ನಪ್ಪಿದ್ದಾರೆ.
undefined
ದೀಪಾವಳಿ, ಕನ್ನಡ ರಾಜ್ಯೋತ್ಸವ ಆಚರಣೆಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ
ರಾಜ್ಯದಲ್ಲಿ 8,708 ಕೊರೋನಾ ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಮರಣ ಪ್ರಮಾಣ ಶೇ.2.88 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.31 ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಶನಿವಾರ ಒಟ್ಟು 1,66,234 ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದೆ. ಒಟ್ಟು 1,08,868 ಸ್ಯಾಂಪಲ್ (ಆರ್‍ಟಿ ಪಿಸಿಆರ್ 88,463 + 20,405 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಬೆಂಗಳೂರಿನಲ್ಲಿ ಇಂದು(ಶನಿವಾರ) ಒಂದೇ ದಿನ 166 ಜನರಿಗೆ ಸೋಂಕು ದೃಢಪಟ್ಟಿದ್ದು, 4 ಜನ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ, ಬೆಂಗಳೂರಲ್ಲಿ ಕೊರೋನಾ ಸಂಖ್ಯೆ 12,51,735 ಕ್ಕೆ ಏರಿಕೆಯಾಗಿದ್ರೆ,ಈವರೆಗೆ 16,274 ಜನರು ಮೃತಟ್ಟಿದ್ದಾರೆ.
12,51,735 ಸೋಂಕಿತರ ಪೈಕಿ 12,28,855 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ 6,605 ಕೊರೋನಾ ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಕೊರೋನಾ ಕೇಸ್ ವಿವರ
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 166, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 2, ಚಿತ್ರದುರ್ಗ 1, ದಕ್ಷಿಣ ಕನ್ನಡ 21, ದಾವಣಗೆರೆ 4, ಧಾರವಾಡ 1, ಗದಗ 0, ಹಾಸನ 13, ಹಾವೇರಿ 0, ಕಲಬುರಗಿ 1, ಕೊಡಗು 9, ಕೋಲಾರ 3, ಕೊಪ್ಪಳ 0, ಮಂಡ್ಯ 8, ಮೈಸೂರು 44, ರಾಯಚೂರು 0, ರಾಮನಗರ 1, ಶಿವಮೊಗ್ಗ 9, ತುಮಕೂರು 19, ಉಡುಪಿ 14, ಉತ್ತರ ಕನ್ನಡ 14, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ದೀಪಾವಳಿಗೆ ಗೈಡ್‌ಲೈನ್ಸ್
ರಾಜ್ಯದ ಜನತೆಯ ಹಿತದೃಷ್ಠಿಯಿಂದ ಮತ್ತು ಕೋವಿಡ್ ( Covid) ಹರಡುವಿಕೆಯನ್ನ ತಡೆಗಟ್ಟುವ ನಿಟ್ಟಿನಲ್ಲಿ, ದೀಪಾವಳಿ ಹಬ್ಬದ ಆಚರಣೆಯನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಹೊಸ ಗೈಡ್‌ಲೈನ್ಸ್ ಸಹ ರಿಲೀಸ್ ಮಾಡಿದೆ.
ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ. ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ದೀಪಾವಳಿಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ.
ಹಸಿರು ಪಟಾಕಿ ಮಾತ್ರ ಮಾರಾಟ ಮತ್ತು ಹಚ್ಚಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ, ನವೆಂಬರ್ 01ರಿಂದ 10ರ ವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.