ಆಧಾರ್‌ ಕಾರ್ಡ್‌ ಇಲ್ಲದ್ದಕ್ಕೆ ಚಿಕಿತ್ಸೆ ಸಿಗದೆ ತಾಯಿ, ಮಕ್ಕಳ ಸಾವು ಪ್ರಕರಣ: ಸರ್ಕಾರದಿಂದ ನೂತನ ಮಾರ್ಗಸೂಚಿ ಪ್ರಕಟ

By Girish Goudar  |  First Published Nov 4, 2022, 11:28 AM IST

ತುಮಕೂರಿನಲ್ಲಿ ಆಧಾರ್‌ ಕಾರ್ಡ್‌ ಇಲ್ಲದ್ದಕ್ಕೆ ಚಿಕಿತ್ಸೆ ಸಿಗದೆ ಬಾಣಂತಿ, ನವಜಾತ ಶಿಶುಗಳ ಸಾವಿನ ಪ್ರಕರಣದ ಬಳಿಕ ಎಚ್ಚೆತ್ತ ಆರೋಗ್ಯ ಇಲಾಖೆ


ಬೆಂಗಳೂರು(ನ.04):  ತುಮಕೂರಿನಲ್ಲಿ ಆಧಾರ್‌ ಕಾರ್ಡ್‌ ಇಲ್ಲದ್ದಕ್ಕೆ ಚಿಕಿತ್ಸೆ ಸಿಗದೆ ಬಾಣಂತಿ, ನವಜಾತ ಶಿಶುಗಳ ಸಾವಿನ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಯನ್ನ ಹೊರಡಿಸಿದೆ ಆರೋಗ್ಯ ಇಲಾಖೆ.  

ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳು ಅವಶ್ಯವಿರುವುದಿಲ್ಲ. ರೋಗಿ ಯಾವುದೇ ದಾಖಲೆ, ತಾಯಿ ಕಾರ್ಡ್, ಆಧಾರ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಚಿಕಿತ್ಸೆ ನೀಡಬೇಕು. ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿರುತ್ತದೆ. ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ. ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದು. ಇಂತಹ ಘಟನೆಯು ಮರುಕಳಿಸಿದರೆ ಅಂತಹ ಅಧಿಕಾರಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗತ್ತೆ. ಅಲ್ಲದೇ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುವುದು ಎಂದು ಸೂಚನೆ ಹೊರಡಿಸಿದೆ. 

Tap to resize

Latest Videos

ಆಧಾರ್‌ ಕಾರ್ಡ್‌ ಇಲ್ಲದ್ದಕ್ಕೆ ಚಿಕಿತ್ಸೆ ಸಿಗದೆ ತಾಯಿ, ಇಬ್ಬರು ಮಕ್ಕಳು ಸಾವು

ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಅವಳಿ ಮಕ್ಕಳು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆರಿಗೆ ವಾರ್ಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯಾಧಿಕಾರಿ ಹಾಗೂ ಶುಶ್ರೂಷಾಧಿಕಾರಿಗಳನ್ನ ಅಮಾನತು ಮಾಡಲಾಗಿದೆ. ವೈದ್ಯಾಧಿಕಾರಿ ಹಾಗೂ ಶುಶ್ರೂಷಾಧಿಕಾರಿಗಳನ್ನು ಅಮಾನತ್ತುಗೊಳಿಸಿ ಆರೋಗ್ಯ ಇಲಾಖೆಯ ಆಯುಕ್ತ ಡಿ.ರಂದೀಪ್ ಆದೇಶ ಹೊರಡಿಸಿದ್ದಾರೆ. 

click me!