ಬಕ್ರೀದ್‌ ನಮಾಜ್‌ ನಿಯಮ ಸಡಿಲಿಕೆ: ಮಸೀದಿಯಲ್ಲಿ ಪ್ರಾರ್ಥನೆಗೆ ಅವಕಾಶ

By Kannadaprabha NewsFirst Published Jul 18, 2021, 7:27 AM IST
Highlights

* ಮಸೀದಿಗಳಲ್ಲಿ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಪ್ರಾರ್ಥನೆಗೆ ಅವಕಾಶ
* ಮಸೀದಿಯಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಡ್ಡಾಯ
* ಜುಲೈ 21ರಂದು ಬಕ್ರೀದ್‌ ಹಬ್ಬ

ಬೆಂಗಳೂರು(ಜು.18): ಬಕ್ರೀದ್‌ ಹಬ್ಬದ ವೇಳೆ ಮಸೀದಿಗಳಲ್ಲಿ 50 ಜನರು ಮೀರದಂತೆ ಪ್ರಾರ್ಥನೆ ಮಾಡಲು ಅವಕಾಶ ನೀಡಿದ್ದ ಆದೇಶವನ್ನು ಪರಿಷ್ಕರಿಸಲಾಗಿದ್ದು, ಆಯಾ ಮಸೀದಿಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ.50 ರಷ್ಟು ಜನರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಬಹುದು ಎಂದು ಸರ್ಕಾರ ಆದೇಶಿಸಿದೆ.

ಜುಲೈ 21ರಂದು ಬಕ್ರೀದ್‌ ಹಬ್ಬದ ಪ್ರಯುಕ್ತ ಯಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರದೊಂದಿಗೆ ಸಾಮೂಹಿಕ ಪ್ರಾರ್ಥನೆ ನಡೆಸಬಹುದು. ಮಸೀದಿಗಳಲ್ಲಿ 50 ಜನಕ್ಕಿಂತ ಹೆಚ್ಚು ಜನ ಭಾಗವಹಿಸುವಂತಿಲ್ಲ ಎಂದು ಶುಕ್ರವಾರದ ಆದೇಶದಲ್ಲಿ ತಿಳಿಸಲಾಗಿತ್ತು.

ಕೃಷ್ಣಜನ್ಮಭೂಮಿ ವಿವಾದ: ಜಾಮಾ ಮಸೀದಿ ಸರ್ವೆಗೆ ಮಥುರಾ ಕೋರ್ಟ್‌ನಲ್ಲಿ ಮನವಿ!

ಶನಿವಾರ ಪರಿಷ್ಕೃತ ಆದೇಶ ಹೊರಡಿಸಿ,ಈ ಸಂಬಂಧ ಯಾವುದೇ ಗೊಂದಲಗಳು ಉಂಟಾಗದಂತೆ ಸ್ಪಷ್ಟೀಕರಣವನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯೇ ನೀಡಬೇಕು ಎಂದು ತಿಳಿಸಲಾಗಿದೆ.
 

click me!