ಕರ್ನಾಟಕದ 31ನೇ ಜಿಲ್ಲೆ ರಚನೆಗೆ ಸರ್ಕಾರದಿಂದ ಅಧಿಕೃತ ಅಧಿಸೂಚನೆ

By Suvarna News  |  First Published Dec 14, 2020, 10:16 PM IST

ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ವಿಜಯನಗರವನ್ನು ಹೊಸ ಜಿಲ್ಲೆಯನ್ನಾಗಿ ಮಾಡಿದ್ದು, ಹೊಸ ಆದೇಶವೊಂದು ಹೊರಬಿದ್ದಿದೆ. 


ಬಳ್ಳಾರಿ, (ಡಿ.14): ವಿಜಯನಗರ ನೂತನ ಜಿಲ್ಲೆ ಘೋಷಣೆ ವಿಚಾರವಾಗಿ ಸರ್ಕಾರದಿಂದ ಹೊಸ ಆದೇಶವೊಂದು ಹೊರಬಿದ್ದಿದೆ. 

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ನೂತನ ಜಿಲ್ಲೆ ರಚಿಸಲು ಸರ್ಕಾರ ಇಂದು (ಸೋಮವಾರ) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ನೂತನ ಜಿಲ್ಲೆ ರಚಿಸುವುದಾಗಿ ಹೇಳಲಾಗಿದೆ.

Latest Videos

undefined

ವಿಜಯನಗರ ಜಿಲ್ಲೆ ವ್ಯಾಪ್ತಿಗೆ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲೂಕುಗಳನ್ನು ಸೇರಿಸಲಾಗಿದೆ. 

ಬಳ್ಳಾರಿ ವಿಭಜನೆ : ಕನ್ನಡದ ಮೇಲೇನು ಪರಿಣಾಮ?

ಕುರುಗೋಡು, ಸಿರುಗುಪ್ಪ, ಕಂಪ್ಲಿ, ಸಂಡೂರು ಹಾಗೂ ಬಳ್ಳಾರಿ ತಾಲೂಕುಗಳನ್ನು ಬಳ್ಳಾರಿ ಜಿಲ್ಲೆ ವ್ಯಾಪ್ತಿಗೆ ತರಲಾಗಿದೆ. ಬಳ್ಳಾರಿಯು ಬಳ್ಳಾರಿ ಜಿಲ್ಲಾ ಕೇಂದ್ರವಾಗಿರಲಿದ್ದು, ಹೊಸಪೇಟೆ ನೂತನ ವಿಜಯನಗರ ಜಿಲ್ಲಾ ಕೇಂದ್ರ ಆಗಲಿದೆ.

ಆಕ್ಷೇಪ ಸಲ್ಲಿಸಲು ಕಾಲಾವಕಾಶ
ಹೊಸ ಜಿಲ್ಲಾ ರಚನೆಗೆ ಆಕ್ಷೇಪ ಅಥವಾ ಸಲಹೆ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪ ಮತ್ತು ಸಲಹೆಗಳನ್ನು ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಲು ತಿಳಿಸಲಾಗಿದೆ. ಸರ್ಕಾರ ಅಧಿಸೂಚನೆ ಹೊರಡಿಸಿದ ದಿನದಿಂದ ಒಂದು ತಿಂಗಳವರೆಗೆ ಈ ಅವಕಾಶ ಇರಲಿದೆ.

click me!