
ಚಿಕ್ಕಬಳ್ಳಾಪುರ (ಡಿ.26): ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ನಂದಿ ಹಿಲ್ಸ್ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.
ಹೊಸವರ್ಷಕ್ಕೆ ಕೆಲವೇ ದಿನಗಳು ಬಾಕಿ; ಗೃಹ ಸಚಿವ ಪರಮೇಶ್ವರ ಕೊಟ್ಟ ಸೂಚನೆ ಏನು?
ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಡ್ರಿಂಕ್ ಆಂಡ್ ಡ್ರೈವ್ ಅಪಘಾತ ತಡೆಯುವ ಉದ್ದೇಶದಿಂದ ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಿದೆ.
ನಂದಿಗಿರಿಧಾಮದಲ್ಲಿ ಡಿಸೆಂಬರ್ 31ರಂದು ರೂಮ್ ಬುಕಿಂಗ್ ಸಹ ರದ್ದುಪಡಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಬಂಗಾರಪ್ಪ ಪುಣ್ಯಸ್ಮರಣೆ: ಬಿಜೆಪಿ ನಾಯಕರ ವಿರುದ್ಧವೇ ಮಾಜಿ ಸಚಿವ ಅರವಿಂದ ಲಿಂಬಾವಳಿ ವಾಗ್ದಾಳಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ