ರಾಜ್ಯದಲ್ಲಿ ಇನ್ನೆರಡು ದಿನ ಮಳೆ : ಎಲ್ಲೆಲ್ಲಿ..?

By Web DeskFirst Published Nov 17, 2018, 7:25 AM IST
Highlights

ಗಜ ಚಂಡಮಾರುತದಿಂದ ತಮಿಳುನಾಡು ಹಾಗೂ ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನು ಎರಡು ದಿನ  ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
 

ಬೆಂಗಳೂರು :  ಗಜ ಚಂಡಮಾರುತದ ಪ್ರಭಾವದಿಂದ ತಮಿಳುನಾಡು ಹಾಗೂ ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನು ಎರಡು ದಿನ ಮೋಡಕವಿದ ವಾತಾವರಣ ಹಾಗೂ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

‘ಗಜ’ ಚಂಡಮಾರುತ ಗುರುವಾರ ಸಂಜೆ ತಮಿಳುನಾಡಿನ ಕರಾವಳಿ ಮೂಲಕ ಭೂ ಭಾಗವನ್ನು ಪ್ರವೇಶಿಸಿದ್ದು, ತಮಿಳುನಾಡಿನ ಚೆನ್ನೈ ಸೇರಿದಂತೆ ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. 

ಇನ್ನು ಎರಡು ದಿನಗಳ ಕಾಲ ತಮಿಳುನಾಡು ಹಾಗೂ ಕೇರಳದಲ್ಲಿ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಮೇಲೆ ಗಜ ಚಂಡಮಾರುತದ ಪ್ರಭಾವ ಹೆಚ್ಚಾಗಿಲ್ಲ. ಹಾಗಾಗಿ, ಹೆಚ್ಚಿನ ಮಳೆ ನಿರೀಕ್ಷೆ ಇಲ್ಲ. ಇನ್ನು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇನ್ನು ಎರಡು ದಿನ ಮೋಡ ಕವಿದ ವಾತಾವರಣ ಉಂಟಾಗಲಿದೆ.

click me!