ಕರ್ನಾಟಕದಲ್ಲಿ ಇನ್ನೂ 3-4 ದಿನ ಭಾರೀ ಮಳೆ..!

Published : Aug 29, 2022, 03:00 AM IST
ಕರ್ನಾಟಕದಲ್ಲಿ ಇನ್ನೂ 3-4 ದಿನ ಭಾರೀ ಮಳೆ..!

ಸಾರಾಂಶ

ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ ಮುಂದಿನ ಮೂರ್ನಾಲ್ಕು ದಿನ ಮಳೆ ಅಬ್ಬರಿಸುವ ಸಾಧ್ಯತೆ: ಹವಾಮಾನ ಕೇಂದ್ರ ಮುನ್ಸೂಚನೆ 

ಬೆಂಗಳೂರು(ಆ.29):  ದಕ್ಷಿಣ ಒಳನಾಡಿನ ಬಹುತೇಕ ಕಡೆ ಎರಡು-ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ ಮುಂದಿನ ಮೂರ್ನಾಲ್ಕು ದಿನ ಮಳೆ ಅಬ್ಬರಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ವಿದರ್ಭದಿಂದ ಆಂಧ್ರ ಪ್ರದೇಶದ ದಕ್ಷಿಣ ತುದಿಯವರೆಗೆ ಟ್ರಫ್‌ ಹಬ್ಬಿರುವುದು, ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಅರಬ್ಬಿ ಸಮುದ್ರದ ಕೇರಳ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿರುವುದರಿಂದ ರಾಜ್ಯದ ಒಳನಾಡು ಮತ್ತು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಸೋಮವಾರ ಬೆಳಗ್ಗೆ 8.30ರ ತನಕ ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಂಭವವಿದ್ದು ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ.

Mandya: ಭಾರೀ ಮಳೆಗೆ ಕೊಚ್ಚಿ ಹೋದ ಸೇತುವೆ: ರಸ್ತೆ ಸಂಪರ್ಕ ಕಡಿತ

ಸೋಮವಾರದಿಂದ ಮಂಗಳವಾರ ಬೆಳಗ್ಗೆ 8.30ರವರೆಗೆ ಕಲಬುರಗಿ, ಗದಗ, ಧಾರವಾಡ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರದ ಬಳಿಕ ರಾಜ್ಯದ ಒಳನಾಡು ಮತ್ತು ಕರಾವಳಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ನೈಋುತ್ಯ ಮುಂಗಾರು ಚುರುಕಾಗಿತ್ತು. ದಕ್ಷಿಣ ಕನ್ನಡದ ಪಣಂಬೂರಿನಲ್ಲಿ 17 ಸೆಂ.ಮೀ., ಸುಬ್ರಹ್ಮಣ್ಯದಲ್ಲಿ 14 ಸೆಂ.ಮೀ. ಮಳೆಯಾಗಿತ್ತು. ಉಳಿದಂತೆ ಮಂಗಳೂರು, ಹಾವೇರಿಯ ಗುತ್ತಲ, ತುಮಕೂರಿನ ಮಧುಗಿರಿಯಲ್ಲಿ ತಲಾ 11, ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 10 ಸೆಂ.ಮೀ ಮಳೆ ಸುರಿದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ