ಕರ್ನಾಟಕದಲ್ಲಿ ಇನ್ನೂ 4-5 ದಿನ ಮಳೆ..!

Published : Nov 25, 2022, 08:30 AM IST
ಕರ್ನಾಟಕದಲ್ಲಿ ಇನ್ನೂ 4-5 ದಿನ ಮಳೆ..!

ಸಾರಾಂಶ

ಒಂದೆಡೆ ಮಳೆ ಹೆಚ್ಚುತ್ತಿರುವುದರಿಂದ ರಾಜ್ಯದಲ್ಲಿ ಕನಿಷ್ಠ ತಾಪಮಾನದಲ್ಲಿ ಏರಿಕೆ ಆಗಿದೆ. ಎರಡ್ಮೂರು ದಿನಗಳ ಹಿಂದೆ ರಾಜ್ಯದ ಹಲವು ಭಾಗದಲ್ಲಿ 15 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದ್ದ ತಾಪಮಾನ ಈಗ ಏರಿಕೆ ಕಂಡಿದೆ. 

ಬೆಂಗಳೂರು(ನ.25):  ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಕೇಂದ್ರ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ. ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿಯೂ ಹೆಚ್ಚಿನ ಮಳೆ ಸುರಿಯುವ ಸಂಭವವಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.

ರಾಜ್ಯಾದ್ಯಂತ ಎರಡು ದಿನ ಹಗುರ ಮಳೆ ಸಾಧ್ಯತೆ

ಕಳೆದೆರಡು ದಿನಗಳಿಂದ ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದ್ದು ಬೆಳಗಾವಿಯ ಲೋಂಡಾದಲ್ಲಿ 4 ಸೆಂ.ಮೀ, ಕೋಲಾರದ ಮಾಲೂರು, ರಾಮನಗರ ತಲಾ 3, ಹೊಸಕೋಟೆ, ಕೆಎಸ್‌ಎನ್‌ಡಿಎಂಸಿ ಆವರಣ, ಕನಕಪುರದಲ್ಲಿ ತಲಾ 2, ಚಿಕ್ಕಮಗಳೂರು, ಮೈಸೂರು, ಟಿ. ನರಸೀಪುರ, ಶ್ರೀರಂಗಪಟ್ಟಣ, ಮಳವಳ್ಳಿ, ತೊಂಡೇಭಾವಿ, ಗೌರಿಬಿದನೂರು, ಗುಬ್ಬಿ, ಮಧುಗಿರಿ, ತುಮಕೂರು ಮತ್ತು ಚನ್ನಪಟ್ಟಣದಲ್ಲಿ ತಲಾ ಒಂದು ಸೆಂ.ಮೀ. ಮಳೆಯಾಗಿದೆ.

ತಾಪಮಾನದಲ್ಲಿಯೂ ಏರಿಕೆ:

ಒಂದೆಡೆ ಮಳೆ ಹೆಚ್ಚುತ್ತಿರುವುದರಿಂದ ರಾಜ್ಯದಲ್ಲಿ ಕನಿಷ್ಠ ತಾಪಮಾನದಲ್ಲಿ ಏರಿಕೆ ಆಗಿದೆ. ಎರಡ್ಮೂರು ದಿನಗಳ ಹಿಂದೆ ರಾಜ್ಯದ ಹಲವು ಭಾಗದಲ್ಲಿ 15 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದ್ದ ತಾಪಮಾನ ಈಗ ಏರಿಕೆ ಕಂಡಿದೆ. ಆದರೆ ಗರಿಷ್ಠ ತಾಪಮಾನದಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ