ರಾಜ್ಯಾದ್ಯಂತ 4 ದಿನ ಭಾರಿ ಮಳೆ : 30 ಜಿಲ್ಲೆಗಳಿಗೂ ಅಲರ್ಟ್‌

By Kannadaprabha NewsFirst Published Oct 21, 2019, 9:55 AM IST
Highlights

ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಬೆಂಗಳೂರು [ಅ.21]:  ರಾಜ್ಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ 30 ಜಿಲ್ಲೆಗಳಿಗೂ ಭಾರತೀಯ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಹಿಂಗಾರು ಚುರುಕುಗೊಂಡಿದ್ದು, ರಾಜ್ಯದ 30 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ 65 ರಿಂದ 115 ಮಿ.ಮೀ.ವರೆಗೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕರಾವಳಿಯ ಮೂರು, ದಕ್ಷಿಣ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಳಗಾವಿಯ ಕಿತ್ತೂರಿನಲ್ಲಿ ಅತಿ ಹೆಚ್ಚು 15 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ಉತ್ತರ ಕನ್ನಡದ ಹಳಿಯಾಳದಲ್ಲಿ 9, ಹಾವೇರಿ, ಬೆಳಗಾವಿಯ ಲೋಂಡದಲ್ಲಿ ತಲಾ 8, ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ 7 ಸೆಂ.ಮೀ. ಮಳೆಯಾದ ವರದಿಯಾಗಿದೆ.

click me!