ಕರ್ನಾಟಕದಲ್ಲಿ ಮೈಕೊರೆಯುವ ಚಳಿಯ ಮಧ್ಯೆ ಮಳೆ..!

By Girish GoudarFirst Published Jan 24, 2023, 1:15 PM IST
Highlights

ಗರಿಷ್ಠ ಮತ್ತು ಕನಿಷ್ಠ ತಾಪಮಾನ 26 ಮತ್ತು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಲಘು ಮಳೆಯಾಗುವ ಸಾಧ್ಯತೆ. 

ಬೆಂಗಳೂರು(ಜ.24):  ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಬಂಗಾಳಕೊಲ್ಲಿ ಉಪಸಾಗರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಳವಾದ ಬೆನ್ನಲ್ಲೇ ರಾಜ್ಯದಲ್ಲಿ ಚಳಿಯ ಅಬ್ಬರ ಬಲು ಜೋರಾಗಿಯೇ ಇದೆ. ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಮುಂದಿನ 24 ಗಂಟೆಗಳ ಕಾಲ ಬೆಳಿಗ್ಗೆ ಮಂಜು ಮುಸುಕಿದ  ಮೋಡ ಕವಿದ ವಾತಾವರಣ ಇರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಗರಿಷ್ಠ ಮತ್ತು ಕನಿಷ್ಠ ತಾಪಮಾನ 26 ಮತ್ತು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಲಘು ಮಳೆಯಾಗುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. 

ಉತ್ತರ ಭಾರತಕ್ಕೆ ಶೀತ ಮಾರುತ ಹೊಡೆತ: ಜಮ್ಮು ರಾಜಸ್ಥಾನದಲ್ಲಿ ಮೈನಸ್‌ ತಾಪಮಾನ

ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 16 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

click me!