
ಬೆಂಗಳೂರು(ಮೇ.17): ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದ್ದು(Rain), ರಾಜ್ಯ ಹವಾಮಾನ ಇಲಾಖೆ ಬುಧವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ರೆಡ್ ಅಲರ್ಟ್(Red Alert) ಘೋಷಿಸಿದೆ.
ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದ(Karnataka) ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ. ಮುಖ್ಯವಾಗಿ ಕರಾವಳಿಯಲ್ಲಿ ಮಂಗಳವಾರ ಮತ್ತು ಬುಧವಾರ ನಿರಂತರ ಮಳೆಯಾಗಲಿದ್ದು, ಅದರಲ್ಲೂ ಬುಧವಾರ ಕರಾವಳಿಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿಯೂ ಐದು ದಿನ ಸಾಧಾರಣ ಮಳೆ ಇರಲಿದ್ದು, ಕೆಲ ಪ್ರದೇಶಗಳಲ್ಲಿ ಮಾತ್ರ ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ(Department of Meteorology) ತಜ್ಞ ಪ್ರಸಾದ್ ಹೇಳಿದ್ದಾರೆ.
ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಗುಡುಗು, ಸಿಡಿಲಿನ ಅಬ್ಬರಕ್ಕೆ ನೂರಾರು ಜಾನುವಾರುಗಳು ಬಲಿ
ಯೆಲ್ಲೋ ಅಲರ್ಟ್:
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮೇ 17ರಿಂದ 20ವರೆಗೂ ಯೆಲ್ಲೋ ಅಲರ್ಟ್(Yellow Alert) ಘೋಷಿಸಲಾಗಿದೆ.
ಕೇರಳದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ: ರೆಡ್ ಅಲರ್ಟ್ ಪ್ರಕಟ
ಕಾಫಿನಾಡಿನಲ್ಲಿ ಮಳೆ ಅಬ್ಬರ: ಸಿಡಿಲು ಬಡಿದು 18 ಕುರಿ ಸಾವು!
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಸೋಮವಾರ ಧಾರಾಕಾರವಾಗಿ ಮಳೆ (Rain) ಸುರಿದಿದೆ. ಜಿಲ್ಲೆಯ ಬಯಲು, ಮಲೆನಾಡಿನ ಭಾಗದಲ್ಲಿ ಸಂಜೆ ನಂತರ ಮಳೆ ಸುರಿದಿದೆ. ಮಳೆಯಿಂದ ಬಯಲು ಭಾಗದಲ್ಲಿ ಕೆಲಕಾಲ ನೀರಿನಿಂದ ಜಲಾವೃತ್ತವಾಗಿ ಸಿಡಿಲು ಸಿಡಿಲು ಬಡಿದು 18 ಕುರಿಗಳು (Sheep) ಸಾವನ್ನಪ್ಪಿದ್ದರೆ ಮಲೆನಾಡಿನ ಭಾಗದಲ್ಲಿ ಬೃಹದಾಕಾರದ ಮರ ಬಿದ್ದು ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು.
ಸಿಡಿಲು ಬಡಿದು 18 ಕುರಿ ಸಾವು:
ಸಿಡಿಲು ಬಡಿದು ರಸ್ತೆಯಲ್ಲಿ ನಡೆಯುತ್ತಿರುವಾಗ 18 ಕುರಿಗಳು ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಶಿವನಿ ಸಮೀಪದ ಶಂಭೈನೂರು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮಾರಿಕಣಿವೆ ಮೂಲದ ಕುರಿಗಾಯಿ ಮಾಲೀಕ ಸುಮಾರು 300ಕ್ಕೂ ಅಧಿಕ ಕುರಿಗಳೊಂದಿಗೆ ಚಿತ್ರದುರ್ಗ-ಚಿಕ್ಕಮಗಳೂರು ಜಿಲ್ಲೆಯ ಗಡಿ ತಾಲೂಕು ಅಜ್ಜಂಪುರಕ್ಕೆ ಬಂದಿದ್ದರು. ತೋಟದಲ್ಲಿ 1-2 ದಿನ ಕುರಿಗಳ ಮೇಯಿಸಿದರೆ ಕುರಿ ಗೊಬ್ಬರಕ್ಕಾಗಿ ಸಾವಿರಾರು ರೂಪಾಯಿ ಹಣ ನೀಡುತ್ತಾರೆ. ಹಾಗಾಗಿ, ತೋಟದಲ್ಲಿ ಕುರಿಗಳನ್ನ ಮೇಯಿಸಲು ಬಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ