ಕರ್ನಾಟಕದಲ್ಲಿ ಮುಂದಿನ 4 ದಿನ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ

By Girish Goudar  |  First Published Mar 30, 2023, 8:22 AM IST

ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಸಾಧ್ಯತೆ ಇದೆ. 


ಬೆಂಗಳೂರು(ಮಾ.30):  ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಏಪ್ರಿಲ್ 4 ರ ವರೆಗೆ ಮಳೆ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಸಾಧ್ಯತೆ ಇದೆ. 

Tap to resize

Latest Videos

Raichur: ಅಕಾಲಿಕ ಮಳೆಗೆ ಮಣ್ಣಿನ ಮನೆ ಕುಸಿತ: ಬಾಲಕಿ ಸಾವು

ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

click me!