
ಬೆಂಗಳೂರು, (ಜುಲೈ.06): ಈಗಾಗಲೇ ಕರ್ನಾಟಕದ ಹಲವೆಡೆ ವರುಣನ ಅಬ್ಬರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲಾಗಿದೆ. ಇದೀಗ ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣದಿಂದ ಭಾರೀ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬಿಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು
KSNDMC ಹೇಳಿದೆ.
Karnataka Rain Live Updates: ಹೆಚ್ಚಾಯ್ತು ಜಲಾಶಯಗಳ ಒಳಹರಿವು, ಡ್ಯಾಮ್‌ಗಳ ಇಂದಿನ ನೀರಿನ ಮಟ್ಟ ಎಷ್ಟು?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 3 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಮಲೆನಾಡು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಹೌದು...ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಎಲ್ಲಾ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ರಕ್ಷಣೆ ಪರಿಹಾರ ಕಾರ್ಯಚರಣೆಗೆ SDRF ತಂಡ ಸಜ್ಜು
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದೆ. ಈ ಹಿನ್ನೆಲೆ ರಕ್ಷಣೆ ಪರಿಹಾರ ಕಾರ್ಯಚರಣೆಗೆ ಎಸ್ಡಿಆರ್ಎಫ್ ತಂಡಗಳು ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಇಂದು(ಬುಧವಾರ) ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಎಸ್ಡಿಆರ್ಎಫ್ ತಂಡಗಳೊಂದಿಗೆ ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ-ಸೂಚನೆ ನೀಡಿರುವೆ. ಭಾರಿ ಮಳೆ ಬಾಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತನಾಡಿ ತುರ್ತಾಗಿ ಪರಿಹಾರ ವ್ಯವಸ್ಥೆ ಮಾಡಲು ತಿಳಿಸಿದ್ದೇನೆ ಎಂದರು.
ಅಗತ್ಯ ನೆರವು ನೀಡಲು ಸರ್ಕಾರ ಸಿದ್ಧವಿದೆ. ಯಾವ ಸಮಸ್ಯೆ ಎದುರಾದರೂ ತಕ್ಷಣ ಗಮನಕ್ಕೆ ತಂದು ಬಗೆಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ