
ಬೆಂಗಳೂರು(ಅ.09): ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರದಿಂದ ಮಂಗಳವಾರದ ತನಕ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ ಬೆಳಗ್ಗೆ 8.30ರ ತನಕ ರಾಜ್ಯ ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಆ ಬಳಿಕ ರಾಜ್ಯದಲ್ಲಿ ಭಾರಿ ಮಳೆ ಇನ್ನಷ್ಟು ವಿಸ್ತರಿಸಲಿದ್ದು, ಈ ಜಿಲ್ಲೆಗಳ ಜೊತೆಗೆ ಯಾದಗಿರಿ, ರಾಯಚೂರು, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂಗಾರು ಬೆಳೆನಷ್ಟ, ಕೈ ಹಿಡಿಯುವುದೇ ಹಿಂಗಾರು..!
ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿತ್ತು. ಆದಾಗ್ಯೂ ಕೆಲವೆಡೆ ಭರ್ಜರಿ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ, ತುಮಕೂರಿನ ಕುಣಿಗಲ್‌ನಲ್ಲಿ ತಲಾ 5 ಸೆಂ.ಮೀ, ಬೆಂ. ಗ್ರಾಮಾಂತರದ ನೆಲಮಂಗಲ 3, ಬೆಂಗಳೂರು ನಗರದ ಜಿಕೆವಿಕೆ, ಚಿಕ್ಕಬಳ್ಳಾಪುರದ ಚಿಂತಾಮಣಿ 2 ಸೆಂ.ಮೀ ಮಳೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ