ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮುಂದಿನ 3 ದಿನ ಮಳೆ

Published : Nov 27, 2022, 07:57 AM ISTUpdated : Nov 27, 2022, 08:13 AM IST
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮುಂದಿನ 3 ದಿನ ಮಳೆ

ಸಾರಾಂಶ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ 

ಬೆಂಗಳೂರು(ನ.27):  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಅಂತ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಹಾವೇರಿ ಮತ್ತು ವಿಜಯಪುರ ಇತರ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಅಂತ ಮಾಹಿತಿ ನೀಡಿದೆ.  

ಕರ್ನಾಟಕದಲ್ಲಿ ಇನ್ನೂ 4-5 ದಿನ ಮಳೆ..!

ಹಿಂಗಾರು ಮಳೆ: 10 ಲಕ್ಷ ಹೆಕ್ಟೇರ್‌ ಕಡಿಮೆ ಬಿತ್ತನೆ

ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ಹಿಂಗಾರು ಬಿತ್ತನೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ಕೃಷಿ ಇಲಾಖೆಯ ನಿಗದಿತ ಗುರಿಗಿಂತ ಬರೋಬ್ಬರಿ 10 ಲಕ್ಷ ಹೆಕ್ಟೇರ್‌ಗೂ ಅಧಿಕ ಪ್ರಮಾಣದಲ್ಲಿ ಕಡಿಮೆ ಬಿತ್ತನೆಯಾಗಿದೆ. ಇಲಾಖೆ ಅಂಕಿ ಅಂಶಗಳ ಪ್ರಕಾರ ನ.10ರವರೆಗೆ ರಾಜ್ಯಾದ್ಯಂತ ಒಟ್ಟಾರೆ 26.68 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಆಗಬೇಕಿತ್ತಾದರೂ 16.30 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದೆ. ನೀರಾವರಿ ಪ್ರದೇಶದಲ್ಲಿ 6.42 ಲಕ್ಷ ಹೆಕ್ಟೇರ್‌ ಗುರಿಗೆ ಬದಲಾಗಿ 2.68 ಲಕ್ಷ ಹೆಕ್ಟೇರ್‌ನಲ್ಲಿ ಹಾಗೂ ಮಳೆಯಾಶ್ರಿತದಲ್ಲಿ 20.26 ಲಕ್ಷ ಹೆಕ್ಟೇರ್‌ ಗುರಿಗೆ ಬದಲಾಗಿ 13.63 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ.

ಏಕದಳ ಧಾನ್ಯ, ದ್ವಿದಳ ಧಾನ್ಯ, ಎಣ್ಣೆ ಕಾಳು, ವಾಣಿಜ್ಯ ಬೆಳೆಗಳು ನೀರಾವರಿ ಮತ್ತು ಮಳೆಯಾಶ್ರಿತ ಪ್ರದೇಶದಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆಯಾಗಿಲ್ಲ. ಹಿಂದಿನ ವರ್ಷ ಸೇರಿದಂತೆ ಕಳೆದ ಕೆಲ ವರ್ಷಗಳ ವಾಡಿಕೆಗಿಂತಲೂ ಕಡಿಮೆ ವಿಸ್ತೀರ್ಣದಲ್ಲಿ ಬೆಳೆಗಳನ್ನು ಬೆಳೆಯಲಾಗಿದೆ. ಭತ್ತ, ಜೋಳ, ರಾಗಿ, ಮೆಕ್ಕೆಜೋಳ ಸೇರಿದಂತೆ ಏಕದಳ ಧಾನ್ಯಗಳಲ್ಲಿ ಶೇ.47ರಷ್ಟುಸಾಧನೆಯಾಗಿದ್ದು,11.15 ಲಕ್ಷ ಹೆಕ್ಟೇರ್‌ಗೆ ಬದಲಾಗಿ 5.22 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ