Karnataka Rains: ಕರ್ನಾಟಕದಲ್ಲಿ ಇನ್ನೂ 2 ದಿನ ಭಾರೀ ಮಳೆ

Published : Sep 07, 2022, 04:00 AM IST
Karnataka Rains: ಕರ್ನಾಟಕದಲ್ಲಿ ಇನ್ನೂ 2 ದಿನ ಭಾರೀ ಮಳೆ

ಸಾರಾಂಶ

20 ಸೆಂ.ಮೀ.ಗಿಂತ ಹೆಚ್ಚು ಮಳೆ ಸಾಧ್ಯತೆ, ಮಲೆನಾಡಲ್ಲಿ ಆರೆಂಜ್‌, ಉಳಿದೆಡೆ ಯಲ್ಲೋ ಅಲರ್ಟ್‌

ಬೆಂಗಳೂರು(ಸೆ.07): ರಾಜ್ಯದಲ್ಲಿ ವರುಣನ ಆರ್ಭಟ ಈ ವಾರ ಪೂರ್ತಿ ಇರಲಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮತ್ತೆ ಭಾರಿಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬುಧವಾರ ಬೆಳಗ್ಗೆ 8.30ರಿಂದ ಗುರುವಾರ ಬೆಳಗ್ಗೆ 8.30ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 20.44 ಸೆಂ.ಮೀಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ನೀಡಲಾಗಿದೆ.

ಬುಧವಾರ ಬೆಳಗ್ಗೆ 8.30ರ ತನಕ ಕರಾವಳಿ ಮತ್ತು ಮಲೆನಾಡಿನ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಅತಿ ಭಾರಿ ಮಳೆಯ ಆರೆಂಜ್‌ ಅಲರ್ಟ್‌ (11.56 ಸೆಂ.ಮೀ ನಿಂದ 20.44 ಸೆಂ.ಮೀ) ನೀಡಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್‌ (6.45 ಸೆಂ.ಮೀ ನಿಂದ 11.55 ಸೆಂ.ಮೀ) ಪ್ರಕಟಿಸಲಾಗಿದೆ.

Chikkamagaluru Rains; ಮಳೆ ಆರ್ಭಟಕ್ಕೆ ಮಲೆನಾಡು ತತ್ತರ, ಹಲವು ವರ್ಷಗಳ ನಂತರ ದಾಖಲೆಯ ಮಳೆ

ಗುರುವಾರದಿಂದ ಶುಕ್ರವಾರ ಬೆಳಗ್ಗೆ 8.30ರ ತನಕ ಕರಾವಳಿ, ಚಿಕ್ಕಮಗಳೂರು, ಬೆಳಗಾವಿಗೆ ಆರೆಂಜ್‌ ಅಲರ್ಟ್‌, ಕೊಡಗು, ಹಾಸನ, ಕೋಲಾರ, ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಬೀದರ್‌, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಶುಕ್ರವಾರದಿಂದ ಶನಿವಾರ ಬೆಳಗ್ಗೆ 8.30ರ ತನಕ ಕರಾವಳಿ, ಬೆಳಗಾವಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌, ಮಲೆನಾಡು, ಹಾವೇರಿ, ಧಾರವಾಡ, ಕೊಪ್ಪಳ, ಯಾದಗಿರಿ, ಕಲಬುರಗಿ ಮತ್ತು ಬೀದರ್‌ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ.
ಶನಿವಾರ ಬೆಳಗ್ಗೆ 8.30ರಿಂದ ಭಾನುವಾರ ಬೆಳಗ್ಗೆ 8.30ರ ತನಕ ಕರಾವಳಿ, ಮಲೆನಾಡು, ಹಾವೇರಿ, ಧಾರವಾಡ, ಗದಗ ಮತ್ತು ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ನಿನ್ನೆ ರಾಜ್ಯದಲ್ಲಿ ಭಾರಿ ಮಳೆ:

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಒಳನಾಡಿನಲ್ಲಿ ಭಾರಿ ಮಳೆಯಾಗಿದೆ. ಕರಾವಳಿಯ ಅನೇಕ ಕಡೆ ಮಳೆ ಚುರುಕಾಗಿತ್ತು. ಬಾಗಲಕೋಟೆಯ ಲೋಕಾಪುರ 16 ಸೆಂ.ಮೀ, ಧಾರವಾಡದ ಅಣ್ಣಿಗೇರಿ 15, ಗದಗ ಮತ್ತು ಬಾದಾಮಿಯಲ್ಲಿ ತಲಾ 12, ಬಾಗಲಕೋಟೆ, ಶಿರಹಟ್ಟಿ, ಲಕ್ಷ್ಮೇಶ್ವರ ತಲಾ 11, ಗದಗದ ಬೆಳ್ಳಟ್ಟಿ, ಬಾಗಲಕೋಟೆಯ ರಬಕವಿಯಲ್ಲಿ ತಲಾ 9 ಸೆಂ.ಮೀ. ಮಳೆಯಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!