Breaking: ರಾಮೇಶ್ವರಂ ಕೆಫೆ ಬ್ಲಾಸ್ಟ್‌, ಬಾಂಬರ್‌ನ ಮಾಹಿತಿಗೆ ಭರ್ಜರಿ ಬಹುಮಾನ ಘೋಷಿಸಿದ ಎನ್‌ಐಎ!

By Santosh NaikFirst Published Mar 6, 2024, 3:37 PM IST
Highlights

ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬ್ಲಾಸ್ಟ್‌ ನಡೆಸಿದ ಬಾಂಬರ್‌ನ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಭರ್ಜರಿ ಬಹುಮಾನ ಘೋಷಣೆ ಮಾಡಿದೆ.

ಬೆಂಗಳೂರು (ಮಾ.6): ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ತನ್ನ ತನಿಖೆಯನ್ನು ಇನ್ನಷ್ಟು ಚುರುಕು ಮಾಡಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ. ಅದಲ್ಲದೆ, ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ.ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಳಸಿ ಬಾಂಬ್‌ ಸ್ಫೋಟ ನಡೆಸಿದ ಶಂಕಿತನ ವಿಡಿಯೋಗಳು ಈಗಾಗಲೇ ವೈರಲ್‌ ಆಗಿದೆ. ಈ ವ್ಯಕ್ತಿಯ ಮಾಹಿತಿ ನೀಡಿ, ಆತನ ಬಂಧನಕ್ಕೆ ಕಾರಣವಾದಲ್ಲಿ ಅವರಿಗೆ 10 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಶಂಕಿತ ಉಗ್ರನ ಮಾಹಿತಿಯನ್ನು 08029510900, 8904241100  ತಿಳಿಸುವಂತೆ ಎನ್‌ಐಎ ತಿಳಿಸಿದ್ದು, ಮಾಹಿತಿ ನೀಡಿದ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ನಗರದ ವೈಟ್‌ಫೀಲ್ಡ್‌ ಸನಿಹದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ಚುರುಕುಗೊಳಿಸಿದ್ದು, ಕೆಲವು ಶಂಕಿತರ ಮಾಹಿತಿ ಮೇರೆಗೆ ಬೆಂಗಳೂರು ಮಾತ್ರವಲ್ಲ, ಹೊರ ರಾಜ್ಯಗಳಲ್ಲಿ ಸಹ ಕಾರ್ಯಾಚರಣೆ ನಡೆಸಿದೆ. ಇನ್ನು ಎನ್‌ಐಎ ತಂಡ ಈಗಾಗಲೇ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಅಪರಾಧ ಸ್ಥಳದ ಪರಿಶೀಲನೆ ನಡೆಸಿದೆ.

ರಾಮೇಶ್ವರ ಕೆಫೆ ಬಾಂಬ್‌ ಬ್ಲಾಸ್ಟ್‌ ಕೇಸ್‌: ಹೊರರಾಜ್ಯದಲ್ಲಿ ಎನ್‌ಐಎ ಶೋಧ

ಸ್ಥಳೀಯರ ಮಾಹಿತಿಯನ್ನೂ ಈ ವೇಳೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಕಫೆಯ ಮುಂಭಾಗದಲ್ಲಿಯೇ ಬಸ್‌ ನಿಲ್ದಾಣವಿದ್ದು, ಕೆಫೆಯವರೆಗೆ ಶಂಕಿತ ವ್ಯಕ್ತಿ ನಡೆದು ಬಂದ ದಾರಿಯನ್ನು ತನಿಖೆ ಮಾಡಿದೆ. ಘಟನೆ ನಡೆದ ಬಳಿಕ ಈತ ತಮಿಳುನಾಡು ಅಥವಾ ಕೆರಳ ರಾಜ್ಯಕ್ಕೆ ಹೋಗಿರಬಹುದು ಎನ್ನುವ ಶಂಕೆಯನ್ನೂ ಮಾಡಲಾಗಿದ್ದು, ಈ ರಾಜ್ಯಗಳಲ್ಲೂ ಕೂಡ ಎನ್‌ಐಎ ಕಾರ್ಯಾಚರಣೆಗೆ ಇಳಿದಿದೆ. ಪ್ರಕರಣದಲ್ಲಿ ಈವರೆಗೂ ಯಾರನ್ನೂ ವಶಕ್ಕೆ ಪಡೆದಿಲ್ಲ ಎನ್ನುವ ಮಾಹಿತಿಯನ್ನೂ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್‌ ಬ್ಲಾಸ್ಟ್‌ ಕೇಸ್‌ನಲ್ಲಿ ಐವರ ಬಂಧನ: ಸಿಎಂ ಸಿದ್ದರಾಮಯ್ಯ

NIA announces cash reward of 10 lakh rupees for information about bomber in Rameshwaram Cafe blast case of Bengaluru. Informants identity will be kept confidential. pic.twitter.com/F4kYophJFt

— NIA India (@NIA_India)

 

 

click me!