ನಾಡಿನ ಹಿತದೃಷ್ಟಿಯಿಂದ Siddaramaiah ಪೂರ್ಣಾವಧಿ ಸಿಎಂ ಆಗುವುದು ಸೂಕ್ತ: ನಿಡುಮಾಮಿಡಿ ಶ್ರೀ

Kannadaprabha News, Ravi Janekal |   | Kannada Prabha
Published : Nov 04, 2025, 10:39 AM IST
Nidumamidi Mutt seer on Siddaramaiah full term CM

ಸಾರಾಂಶ

ಚಿಕ್ಕಬಳ್ಳಾಪುರದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ, ನಿಡುಮಾಮಿಡಿ ಮಠದ ಶ್ರೀ ಚೆನ್ನಮಲ್ಲ ವೀರಭದ್ರ ದೇಶಿಕೇಂದ್ರ ಸ್ವಾಮೀಜಿ ಅವರು, ಕಾಂಗ್ರೆಸ್ ಪಕ್ಷದ ಹಾಗೂ ನಾಡಿನ ಹಿತದೃಷ್ಟಿಯಿಂದ ಸಿದ್ದರಾಮಯ್ಯನವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಸೂಕ್ತ ಎಂದಿದ್ದಾರೆ.

ಚಿಕ್ಕಬಳ್ಳಾಪುರ (ನ.4): ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪೂರ್ಣಾವಧಿ ಅಧಿಕಾರದಲ್ಲಿ ಮುಂದುವರಿಯುವುದು ಉತ್ತಮ ಎಂದು ಸಿಎಂ ಸಿದ್ದರಾಮಯ್ಯ ಪರ ನಿಡುಮಾಮಿಡಿ ಮಠದ ಶ್ರೀ ಚೆನ್ನಮಲ್ಲ ವೀರಭದ್ರ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ತಾಲೂಕಿನ ಕಳವಾರದ ವೀರಭ್ರಹ್ಮೇಂದ್ರಸ್ವಾಮಿ ಉಗಮಸ್ಥಳ ಪಾಪಾಗ್ನಿ ಮಠದಲ್ಲಿ ಕರ್ನಾಟಕ ಪುಲಿಕೇಶಿ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ನೂತನ ವಧುವರರಿಗೆ ಆರ್ಶಿವಾದ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಹಿತದೃಷ್ಟಿಯಿಂದ ಹಾಗೂ ಎಲ್ಲ ರೀತಿಯಿಂದಲೂ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್‌ ಹಿತದೃಷ್ಟಿ:

ಮುಖ್ಯಮಂತ್ರಿಯಾಗಿ ಯಾರೇ ಬಂದರೂ ಅವರವರ ಸಾಮರ್ಥ್ಯದ ಮೇಲೆ ಕೆಲಸ ಮಾಡ್ತಾರೆ. ಆದರೆ ಸಿದ್ದರಾಮಯ್ಯರಿಗೆ ಸರಿಸಾಟಿಯಾಗಲು ಸಾಧ್ಯವಿಲ್ಲ. ನಾಡಿನ ಹಿತಕ್ಕಾಗಿ ಹಿಂದಿನಿಂದಲೂ ಸಿದ್ದರಾಮಯ್ಯ ಒಳ್ಳೆಯ ಕೆಲಸಗಳನ್ನ ಮಾಡಿಕೊಂಡು ಬಂದಿದ್ದಾರೆ. ಈಗಲೂ ಮಾಡ್ತಿದ್ದಾರೆ. ನಾಡಿನ ಹಿತದೃಷ್ಟಿಯಿಂದ, ಕಾಂಗ್ರೆಸ್ ಪಕ್ಷದ ಭವಿಷ್ಯಕ್ಕಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಸೂಕ್ತ ಎಂದು ತಿಳಿಸಿದರು.

ತಾಳಿ ವಿತರಿಸಿದ ಸಂಸದ ಸುಧಾಕರ್‌ ದಂಪತಿ

ಇದೇ ವೇಳೆ ಸಂಸದ ಡಾ.ಕೆ.ಸುಧಾಕರ್ ಮತ್ತು ಡಾ.ಪ್ರೀತಿ ಸುಧಾಕರ್ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 13 ಜೋಡಿ ನೂತನ ವಧುವರರಿಗೆ ತಾಳಿ ನೀಡಿ ಆರ್ಶಿವಾದಿಸಿದರು. ಜತೆಗೆ ಚಿತ್ರನಟರು ಜನಪ್ರತಿನಿಧಿಗಳು ಭಾಗವಹಿಸಿ ನೂತನ ದಂಪತಿಗಳಿಗೆ ಅಕ್ಷತೆ ಹಾಕಿ ಆಶೀರ್ವದಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ . ಚಲನಚಿತ್ರ ನಟ ಅಭಿಮನ್ಯು ಕಾಶೀನಾಥ್ ಸಹ ನೂತನ ಸಹಬಾಳ್ವೆಗೆ ಮುಂದಾದ ನವಜೋಡಿಗಳಿಗೆ ಮಾಂಗ್ಯಲ್ಯ ಕಟ್ಟಿಸಿ ಆಶೀರ್ವದಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!