ಇನ್ನಷ್ಟು ಜಿಲ್ಲೆಗೆ ಕರ್ಫ್ಯೂ ವಿಸ್ತರಣೆ : ಸಿಎಂ

By Kannadaprabha News  |  First Published Apr 17, 2021, 7:02 AM IST

ರಾಜ್ಯದಲ್ಲಿ ಕೊರೋನಾ ಸೋಂಕಿನ ಹಾವಳಿ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದ್ದು ಇದೀಗ ನೈಟ ಕರ್ಫ್ಯೂವನ್ನು ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಹೇಳಿದ್ದಾರೆ. 


 ಬೆಂಗಳೂರು (ಏ.17):  ರಾಜ್ಯದಲ್ಲಿ ಕೊರೋನಾ ಎರಡನೇ ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ‘ಕೊರೋನಾ ಕಫä್ರ್ಯ’ವನ್ನು ಇನ್ನಷ್ಟುಜಿಲ್ಲೆಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಶುಕ್ರವಾರ ಕೋವಿಡ್‌ ನಿಯಂತ್ರಣ ಸಂಬಂಧ ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇವತ್ತಿನ ಸಭೆಯಲ್ಲಿ ಯಾವುದೇ ರೀತಿಯ ಪ್ರಮುಖ ತೀರ್ಮಾನ ತೆಗೆದುಕೊಂಡಿಲ್ಲ. ತಜ್ಞರು ನೀಡಿರುವ ಶಿಫಾರಸಿನ ಬಗ್ಗೆ ಚರ್ಚೆ ನಡೆಸಲಾಗಿದೆ. ಏ.20ರ ನಂತರ ಈಗಾಗಲೇ ವಿಧಿಸಿರುವ ಕೊರೋನಾ ಕಫä್ರ್ಯವನ್ನು ಇನ್ನಷ್ಟುಜಿಲ್ಲೆಗಳಿಗೆ ವಿಸ್ತರಣೆ ಮಾಡಲಾಗುವುದು. ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದರು.

CM ಬಿಎಸ್‌ವೈಗೆ ಪಾಸಿಟೀವ್; ಕೊರೋನಾ ಸರ್ವ ಪಕ್ಷ ಸಭೆ ಮುಂದೂಡಿಕೆ! ...

Latest Videos

undefined

‘ಈಗಾಗಲೇ 8 ಜಿಲ್ಲೆಗಳಲ್ಲಿ ಕೊರೋನಾ ಕರ್ಫ್ಯೂ ಇದೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಬೇರೆ ರಾಜ್ಯಗಳಲ್ಲಿ ತೆಗೆದುಕೊಂಡಿರುವ ಕ್ರಮಗಳ ಕುರಿತು ಅಧ್ಯಯನ ನಡೆಸುತ್ತೇವೆ. ದೆಹಲಿ, ಮಹಾರಾಷ್ಟ್ರ, ರಾಜಸ್ಥಾನಗಳಲ್ಲಿ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಂಡಿರುವ ಬಗ್ಗೆ ಚರ್ಚಿಸಲಾಗಿದೆ. ಕರ್ನಾಟಕದ ಪರಿಸ್ಥಿತಿಯೇ ಬೇರೆ. ಅಲ್ಲಿನ ಕೋವಿಡ್‌ ಪ್ರಕರಣಗಳು ಹೆಚ್ಚಾಗಲು ಬೇರೆಯದೇ ಕಾರಣವಿದೆ. ಅದಕ್ಕೂ ಇದಕ್ಕೂ ಹೋಲಿಕೆ ಮಾಡಬಾರದು’ ಎಂದು ಹೇಳಿದರು.

‘ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಆದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ನಿಯಂತ್ರಣ ಮಾಡಬೇಕೆಂಬ ಸಲಹೆ ಬಂದಿದೆ. ಪ್ರತಿಯೊಂದರ ಬಗ್ಗೆ ನಾನೇ ಮಾಹಿತಿ ಪಡೆದಿದ್ದೇನೆ’ ಎಂದು ಹೇಳಿದರು.

click me!